ಬಿಎಸ್‌ಎನ್‌ಎಲ್‌ನ ಈ ಯೋಜನೆ ರೀಚಾರ್ಜ್‌ಗೆ ಉತ್ತಮವೇ?..ನಿಮ್ಮ ಆಯ್ಕೆ ಏನು?
ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಬಿಎಸ್‌ಎನ್‌ಎಲ್ ಸೇರಿದಂತೆ ಜಿಯೋ, ವಿ ಟೆಲಿಕಾಂ ಮತ್ತು ಏರ್‌ಟೆಲ್ ಟೆಲಿಕಾಂ ಬೊಂಬಾಟ್ ಪ್ಲ್ಯಾನ್ ಪರಿಚಯಿಸಿವೆ. ಇತ್ತೀಚಿಗೆ ಖಾಸಗಿ ಟೆಲಿಕಾಂಗಳಿಗೆ ಫೈಟ್ ನೀಡುವಂತಹ ಕೆಲವು ಅತ್ಯುತ್ತಮ ಯೋಜನೆಗಳನ್ನು ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ (BSNL) ಕಂಪನಿಯು ನೀಡಿದೆ. ಅವುಗಳಲ್ಲಿ ಬಹುತೇಕ ಪ್ಲ್ಯಾನ್‌ಗಳು ಹೆಚ್ಚಿನ ವ್ಯಾಲಿಡಿಟಿ, ವಾಯಿಸ್ ಕರೆ ಹಾಗೂ ಡೇಟಾ ಪ್ರಯೋಜನಗಳನ್ನು ಒಳಗೊಂಡಿರುವುದು ವಿಶೇಷ.ಅದೇ ರೀತಿ ಬಿಎಸ್‌ಎನ್‌ಎಲ್ ಟೆಲಿಕಾಂನ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಗ್ರಾಹಕರ ಗಮನ ಸೆಳೆದಿದೆ.

ಹೌದು, ಬಿಎಸ್‌ಎನ್‌ಎಲ್ ಟೆಲಿಕಾಂ ಕೆಲವು ಪ್ಲ್ಯಾನ್‌ಗಳು ಆಕರ್ಷಕ ಅನಿಸಿವೆ. ಆ ಪೈಕಿ ಬಿಎಸ್‌ಎನ್‌ಎಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಸಹ ಒಂದಾಗಿದೆ. ಅಧಿಕ ಡೇಟಾ ಬಯಸುವ ಚಂದಾದಾರರಿಗೆ ಹಾಗೂ ವಾರ್ಷಿಕ ಅವಧಿಯ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಯೋಜನೆಯು ಉತ್ತಮ ಎನಿಸಲಿದೆ. ಈ ಪ್ಲ್ಯಾನಿನಲ್ಲಿ ಚಂದಾದಾರರಿಗೆ ಪ್ರತಿದಿನ 5GB ಡೇಟಾ ಪ್ರಯೋಜನ ದೊರೆಯಲಿದೆ ಹಾಗೂ ಅಧಿಕ ವ್ಯಾಲಿಡಿಟಿಯ ಸೌಲಭ್ಯವು ಲಭ್ಯವಾಗಲಿದೆ. ಹಾಗಾದರೇ ಬಿಎಸ್‌ಎನ್‌ಎಲ್‌ನ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳೆನು ಹಾಗೂ ಇತರೆ ಪ್ಲ್ಯಾನ್‌ಗಳ ಪ್ರಯೋಜನಗಳೇನು? ಮುಂದೆ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ 599ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 5GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450 GB ಡೇಟಾ ಪ್ರಯೋಜನ ದೊರೆಯುತ್ತದೆ. ಹೆಚ್ಚುವರಿಯಾಗಿ ಜಿಂಗ್ ಸೇವೆ ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್ 2399ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ 2399ರೂ. ಯೋಜನೆಯು ವಾರ್ಷಿಕ ಅವಧಿಯ ಪ್ಲ್ಯಾನ್ ಆಗಿದೆ. ಈ ಯೋಜನೆಯು ಒಟ್ಟು 425 ದಿನಗಳ ವ್ಯಾಲಿಡಿಟಿ ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯ ಆಗಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವು ದೊರೆಯಲಿದೆ. ಹಾಗೆಯೇ ಮುಂಬೈ ಮತ್ತು ದೆಹಲಿ ಎಮ್‌ಟಿಎನ್‌ಎಲ್ ಬಳಕೆದಾರರಗೆ ಅನಿಯಮಿತ ಸಾಂಗ್ ಚೇಂಜ್ ಹಾಗೂ EROS ಚಂದಾದಾರಿಕೆ ಸಹ ಲಭ್ಯ ಆಗಲಿದೆ.
ಬಿಎಸ್‌ಎನ್‌ಎಲ್‌ನ 1,498ರೂ. ಪ್ಲ್ಯಾನ್ ಪ್ರಯೋಜನ
ಬಿಎಸ್‌ಎನ್‌ಎಲ್‌ನ 1,498ರೂ. ಪ್ಲ್ಯಾನ್ ಡೇಟಾ SVT ಯೋಜನೆ ಆಗಿದೆ. ಈ ಪ್ಲ್ಯಾನ್ ಒಟ್ಟು 365 ದಿನಗಳ ಅವಧಿಯ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಒಟ್ಟು 91GB ಡೇಟಾ ಪ್ರಯೋಜನ ಲಭ್ಯ ವಾಗಲಿದೆ. ಡೇಟಾ ಬಳಕೆಗೆ ಯಾವುದೇ ದಿನದ cap ಮಿತಿ ಇರುವುದಿಲ್ಲ. ಹಾಗೆಯೇ ಈ ಪ್ಲ್ಯಾನಿನಲ್ಲಿ ಯಾವುದೇ ಕರೆ, ಎಸ್‌ಎಮ್‌ಎಸ್ ಸೌಲಭ್ಯ ಇರುವುದಿಲ್ಲ. ವೇಗದ ಇಂಟರ್ನೆಟ್ ಬಯಸುವ ಗ್ರಾಹಕರಿಗೆ ಸೂಕ್ತ ಎನ್ನಲಾಗಿದೆ.
ಬಿಎಸ್‌ಎನ್‌ಎಲ್ 693ರೂ. ಪ್ಲ್ಯಾನ್ ಪ್ರಯೋಜನ
ಹಾಗೆಯೇ ಬಿಎಸ್‌ಎನ್‌ಎಲ್ 693ರೂ. ಡೇಟಾ ಎಸ್‌ಟಿವಿ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 300GB ಡೇಟಾ ಸೌಲಭ್ಯ ಲಭ್ಯ ವಾಗಲಿದೆ. ಇದು ಡೇಟಾ ಪ್ರೀಪೇಯ್ಡ್ ಯೋಜನೆ ಆಗಿರುವುದರಿಂದ ಯಾವುದೇ ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಸೌಲಭ್ಯಗಳು ದೊರೆಯುವುದಿಲ್ಲ.
ಬಿಎಸ್‌ಎನ್‌ಎಲ್ 499ರೂ. ಪ್ಲ್ಯಾನ್ ಪ್ರಯೋಜನ
ಬಿಎಸ್‌ಎನ್‌ಎಲ್‌ನ ಈ SVT 499ರೂ. ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಿದ್ದು, ಒಟ್ಟು ಪೂರ್ಣ ಅವಧಿಗೆ 180GB ಡೇಟಾ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ದೊರೆಯಲಿದೆ. ಹಾಗೆಯೇ ಡೈಲಿ 100 ಎಸ್‌ಎಮ್‌ಎಸ್ ಸಹ ಸಿಗುತ್ತದೆ. ಹೆಚ್ಚುವರಿಯಾಗಿ ಬಿಎಸ್‌ಎನ್‌ಎಲ್ ಟ್ಯೂನ್ ಮತ್ತು Zing ಪ್ರಯೋಜನ ಲಭ್ಯ.


Click it and Unblock the Notifications








