Home
ಸುದ್ದಿಜಾಲ

ಅಧಿಕ ಡೇಟಾ ಬಯಸುವ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಈ ಪ್ಲ್ಯಾನ್‌ ಸೂಪರ್!

ಪ್ರಸ್ತುತ ದೇಶಿಯ ಟೆಲಿಕಾಂ ವಲಯದಲ್ಲಿ ಖಾಸಗಿ ಟೆಲಿಕಾಂ ಸಂಸ್ಥೆಗಳ ಅಬ್ಬರ ಹೆಚ್ಚಿದ್ದು, ಆಕರ್ಷಕ ಕೊಡುಗೆಗಳ ಮೂಲಕ ಗ್ರಾಹಕರನ್ನು ಸೆಳೆಯಲು ಪ್ರಯತ್ನಿಸುತ್ತ ಮುನ್ನಡೆದಿವೆ. ಇನ್ನು ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ ಟೆಲಿಕಾಂ ಖಾಸಗಿ ಟೆಲಿಕಾಂಗಳಿಗೆ ಪೈಪೋಟಿ ನೀಡುವಂತಹ ಆಕರ್ಷಕ ಯೋಜನೆಗಳನ್ನು ಪರಿಚಯಿಸುವ ಹೆಜ್ಜೆಗಳನ್ನು ಇಡುತ್ತಿದೆ. ಆ ಪೈಕಿ ಬಿಎಸ್‌ಎನ್‌ಎಲ್‌ ಟೆಲಿಕಾಂನ ಒಂದು ಪ್ರೀಪೇಯ್ಡ್‌ ಯೋಜನೆ ಅಧಿಕ ಡೇಟಾ ಪ್ರಿಯರನ್ನು ಆಕರ್ಷಿಸಿದೆ.

ಬಿಎಸ್‌ಎನ್‌ಎಲ್‌

ಹೌದು, ಬಿಎಸ್‌ಎನ್‌ಎಲ್‌ ಟೆಲಿಕಾಂ ಭಿನ್ನ ದರ ಶ್ರೇಣಿಯ ಯೋಜನೆಗಳ ಆಯ್ಕೆ ಒಳಗೊಂಡಿದೆ. ಅವುಗಳಲ್ಲಿ ಕೆಲವೊಂದು ಯೋಜನೆಗಳು ಅತ್ಯುತ್ತಮ ಡೇಟಾ, ವ್ಯಾಲಿಡಿಟಿ ಸೌಲಭ್ಯ ಪಡೆದಿವೆ. ಬಿಎಸ್‌ಎನ್‌ಎಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಜಬರ್ದಸ್ತ್ ಡೇಟಾ ಪ್ರಯೋಜನದೊಂದಿಗೆ ಗ್ರಾಹಕರನ್ನು ಸೆಳೆದಿದೆ. ಈ ಯೋಜನೆ ಡೇಟಾ, ವ್ಯಾಲಿಡಿಟಿ ಹಾಗೂ ಇತರೆ ಹೆಚ್ಚುವರಿ ಸೌಲಭ್ಯಗಳನ್ನು ಪಡೆದಿದ್ದು, ಹೆಚ್ಚಿನ ಗ್ರಾಹಕರನ್ನು ಸೆಳೆದಿದೆ. ಹಾಗಾದರೇ ಬಿಎಸ್‌ಎನ್‌ಎಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳೆನು?.. ಇತರೆ ಆಕರ್ಷಕ ಯೋಜನೆಗಳ ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 599 ರೂ. ಪ್ರೀಪೇಯ್ಡ್‌ ಯೋಜನೆಯಲ್ಲಿ ಪ್ರತಿದಿನ 5 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450 GB ಡೇಟಾ ಪ್ರಯೋಜನ ದೊರೆಯುತ್ತದೆ. ಹೆಚ್ಚುವರಿಯಾಗಿ ಜಿಂಗ್ ಸೇವೆ ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್‌ 499ರೂ. ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 499ರೂ. ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ನ ಈ SVT 499 ರೂ. ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಿದ್ದು, ಒಟ್ಟು ಪೂರ್ಣ ಅವಧಿಗೆ 180 GB ಡೇಟಾ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ದೊರೆಯಲಿದೆ. ಹಾಗೆಯೇ ಡೈಲಿ 100 ಎಸ್‌ಎಮ್‌ಎಸ್‌ ಸಹ ಸಿಗುತ್ತದೆ. ಹೆಚ್ಚುವರಿಯಾಗಿ ಬಿಎಸ್‌ಎನ್‌ಎಲ್‌ ಟ್ಯೂನ್ ಮತ್ತು Zing ಪ್ರಯೋಜನ ಲಭ್ಯ.

ಬಿಎಸ್‌ಎನ್‌ಎಲ್‌ STV 447ರೂ. ಯೋಜನೆ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ STV 447ರೂ. ಯೋಜನೆ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ STV 447 ರೂ. ಯೋಜನೆ 100GB ಹೈ ಸ್ಪೀಡ್ ಡೇಟಾವನ್ನು ನೀಡುತ್ತದೆ. 100GB ಡೇಟಾದ ನಿಗದಿತ ಮಿತಿಯನ್ನು ಮೀರಿ, ಬಳಕೆದಾರರು 80 Kbps ವೇಗದಲ್ಲಿ ಇಂಟರ್ನೆಟ್ ಅನ್ನು ಪ್ರವೇಶಿಸಬಹುದು. ಯೋಜನೆಯು 60 ಕ್ಯಾಲೆಂಡರ್ ದಿನಗಳ ಮಾನ್ಯತೆಯ ಅವಧಿಯೊಂದಿಗೆ ಬರುತ್ತದೆ ಮತ್ತು ಇದನ್ನು ವೆಬ್‌ಸೈಟ್‌ನಲ್ಲಿ 'ಡೇಟಾ ವೋಚರ್' ಅಡಿಯಲ್ಲಿ ನಮೂದಿಸಿದ್ದರೂ ಸಹ, ಇದು ದಿನಕ್ಕೆ 100 SMS ಜೊತೆಗೆ ಅನಿಯಮಿತ ಧ್ವನಿ ಕರೆಯನ್ನು ನೀಡುತ್ತದೆ.

ಬಿಎಸ್‌ಎನ್‌ಎಲ್‌ 2399ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 2399ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 2399ರೂ. ಯೋಜನೆಯು ವಾರ್ಷಿಕ ಅವಧಿಯ ಪ್ಲ್ಯಾನ್ ಆಗಿದೆ. ಈ ಯೋಜನೆಯು ಇದೀಗ ಹೆಚ್ಚುವರಿಯಾಗಿ 60 ದಿನಗಳ ವ್ಯಾಲಿಡಿಟಿಯನ್ನು ಪಡೆದಿದೆ. ಹೀಗಾಗಿ ಒಟ್ಟು 425 ದಿನಗಳ ವ್ಯಾಲಿಡಿಟಿ ಸಿಗಲಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯ ಆಗಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯವು ದೊರೆಯಲಿದೆ. ಹಾಗೆಯೇ ಮುಂಬೈ ಮತ್ತು ದೆಹಲಿ ಎಮ್‌ಟಿಎನ್‌ಎಲ್‌ ಬಳಕೆದಾರರಗೆ ಅನಿಯಮಿತ ಸಾಂಗ್ ಚೇಂಜ್ ಹಾಗೂ EROS ಚಂದಾದಾರಿಕೆ ಸಹ ಲಭ್ಯ ಆಗಲಿದೆ.

Best Mobiles in India

English summary
BSNL Rs. 599 Plan Offers Attractive Validity with 450GB Data: details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+