ಬಿಎಸ್‌ಎನ್‌ಎಲ್‌ನ ಈ ಪ್ಲ್ಯಾನಿನಲ್ಲಿ ರಾತ್ರಿ ಅನ್‌ಲಿಮಿಟೆಡ್ ಡೇಟಾ ಉಚಿತ!
ಭಾರತದಲ್ಲಿ ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಕಂಪನಿಯಾದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ತನ್ನ ಗ್ರಾಹಕರಿಗೆ ವ್ಯಾಪಕ ಶ್ರೇಣಿಯ ಪ್ರಿಪೇಯ್ಡ್ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಸಂಸ್ಥೆಯು ಕೆಲವು ಅತ್ಯುತ್ತಮ ಯೋಜನೆಗಳನ್ನು ಪರಿಚಯಿಸಿ ಖಾಸಗಿ ಟೆಲಿಕಾಂಗಳಿಗೂ ಅಚ್ಚರಿ ಮೂಡಿಸಿದೆ. ಆ ಪೈಕಿ ಬಿಎಸ್‌ಎನ್‌ಎಲ್‌ನ ಈ ಒಂದು ರೀಚಾರ್ಜ್ ಯೋಜನೆಯು ರಾತ್ರಿ ಅನಿಯಮಿತ ಡೇಟಾ ಸೌಲಭ್ಯ ಪಡೆದಿದೆ.
ಹೌದು, ಬಿಎಸ್‌ಎನ್‌ಎಲ್ ಟೆಲಿಕಾಂನ 599ರೂ. ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನ್ ಆಕರ್ಷಕ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಇದರೊಂದಿಗೆ ಈ ಯೋಜನೆಯು ಅಧಿಕ ದೈನಂದಿನ ಡೇಟಾ ಹಾಗೂ ವಾಯಿಸ್ ಕರೆಯ ಸೌಲಭ್ಯ ಸಹ ಪಡೆದಿದೆ. ಮುಖ್ಯವಾಗಿ ಈ ಯೋಜನೆಯು ರಾತ್ರಿ ಅನ್‌ಲಿಮಿಟೆಡ್ ಡೇಟಾ ಪ್ರಯೋಜನ ಸಹ ಪಡೆದುಕೊಂಡಿದೆ. ಹಾಗಾದರೆ ಬಿಎಸ್‌ಎನ್‌ಎಲ್‌ನ 599ರೂ. ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನ್ ಪ್ರಯೋಜನಗಳ ಬಗ್ಗೆ ಹಾಗೂ ಇತರೆ ಜನಪ್ರಿಯ ಯೋಜನೆಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಬಿಎಸ್‌ಎನ್‌ಎಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು: ಬಿಎಸ್‌ಎನ್‌ಎಲ್ ಟೆಲಿಕಾಂನ 599ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 3 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಹೆಚ್ಚುವರಿಯಾಗಿ ಜಿಂಗ್ ಸೇವೆ ಲಭ್ಯವಾಗಲಿದೆ.
ರಾತ್ರಿ ಅನಿಯಮಿತ ಡೇಟಾ ಸೌಲಭ್ಯ : ಹಾಗೆಯೇ ಬಿಎಸ್‌ಎನ್‌ಎಲ್‌ನ 599ರೂ. ಪ್ರೀಪೇಯ್ಡ್ ಪ್ಲ್ಯಾನಿನಲ್ಲಿ ಗ್ರಾಹಕರು ಇ-ಮೇಲ್‌ಗಳು ಮತ್ತು ತ್ವರಿತ ಮೆಸೆಜ್‌ಗಳಂತಹ ತುರ್ತು ಸಂವಹನಗಳಿಗಾಗಿ 40 Kbps ವೇಗದ ಅನಿಯಮಿತ ಡೇಟಾ ಬಳಕೆ ಮಾಡಬಹುದು. ಅಲ್ಲದೇ ರಾತ್ರಿ 12 ರಿಂದ 5 ರವರೆಗೆ ಅನ್‌ಲಿಮಿಟೆಡ್ ಡೇಟಾ ಪ್ರಯೋಜನ ದೊರೆಯುತ್ತದೆ. ಈ ಅವಧಿಯಲ್ಲಿ ಬಳಸಲಾದ ಡೇಟಾವು ದಿನದ ಬಳಕೆದಾರರ FUP ಡೇಟಾ ಮಿತಿಯ ಮೇಲೆ ಪರಿಣಾಮ ಬೀರುವುದಿಲ್ಲ.

ಬಿಎಸ್‌ಎನ್‌ಎಲ್ 269ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು : ಬಿಎಸ್‌ಎನ್‌ಎಲ್ ಟೆಲಿಕಾಂನ 269 ರೂ. ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, ಒಟ್ಟು 30 ದಿನಗಳ ವ್ಯಾಲಿಡಿಟಿ ಯನ್ನು ಒಳಗೊಂಡಿದೆ. ಪ್ರತಿದಿನ 2 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ.
ಬಿಎಸ್‌ಎನ್‌ಎಲ್ 769ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು : ಬಿಎಸ್‌ಎನ್‌ಎಲ್ ಟೆಲಿಕಾಂನ 769 ರೂ. ಪ್ಲ್ಯಾನ್, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಪ್ರತಿದಿನ 2 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ.

ಬಿಎಸ್‌ಎನ್‌ಎಲ್ 997ರೂ. ಪ್ಲ್ಯಾನ್ ಪ್ರಯೋಜನಗಳು : ಬಿಎಸ್‌ಎನ್‌ಎಲ್ ಟೆಲಿಕಾಂನ ಈ ಯೋಜನೆಯು ಒಟ್ಟು 160 ದಿನಗಳ ವ್ಯಾಲಿಡಿಟಿ ಪ್ರಯೋಜನವನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಗ್ರಾಹಕರಿಗೆ ಲಭ್ಯವಾಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಹಾಗೂ ಪ್ರತಿದಿನ 100 ಎಸ್ಎಮ್‌ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಬಿಎಸ್‌ಎನ್‌ಎಲ್ 1198ರೂ. ರೀಚಾರ್ಜ್ ಪ್ಲ್ಯಾನ್ ಪ್ರಯೋಜನಗಳು : ಬಿಎಸ್‌ಎನ್‌ಎಲ್ ಟೆಲಿಕಾಂನ 1198 ರೂ. ರೀಚಾರ್ಜ್ ಯೋಜನೆಯಲ್ಲಿ ಪ್ರತಿ ತಿಂಗಳು 3 GB ಡೇಟಾ, ಇದರೊಂದಿಗೆ ಪ್ರತಿ ತಿಂಗಳು 300 ನಿಮಿಷಗಳ ಉಚಿತ ವಾಯಿಸ್ ಕರೆ ಪ್ರಯೋಜನ ಲಭ್ಯವಿದೆ. ಇನ್ನು ಈ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ.


Click it and Unblock the Notifications








