ಅಗ್ಗದ ಬೆಲೆಯ ಈ ರೀಚಾರ್ಜ್ ಪ್ಲ್ಯಾನ್ ಗ್ರಾಹಕರಿಗೆ ಉತ್ತಮವೇ?..ಡೇಟಾ ಎಷ್ಟು?
ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಗ್ರಾಹಕರಿಗೆ ಹಲವು ಪ್ರೀಪೇಯ್ಡ್ ಯೋಜನೆಗಳ ಆಯ್ಕೆ ನೀಡಿದೆ. ಆ ಪೈಕಿ ಅಗ್ಗದ ಬೆಲೆಯಿಂದ ದುಬಾರಿ ಬೆಲೆಯ ರೀಚಾರ್ಜ್ ಪ್ಲ್ಯಾನ್‌ಗಳು ಸೇರಿವೆ. ಅವುಗಳಲ್ಲಿ ಬಿಎಸ್‌ಎನ್‌ಎಲ್‌ನ 87ರೂ. ಪ್ರಿಪೇಯ್ಡ್ ಯೋಜನೆಯು ಗಮನ ಸೆಳೆದಿದ್ದು, ಕಡಿಮೆ ದರದಲ್ಲಿ ರೀಚಾರ್ಜ್ ಮಾಡಲು ಬಯಸುವ ಗ್ರಾಹಕರಿಗೆ ಉತ್ತಮ ಎನಿಸಲಿದೆ.
ಹೌದು, ಬಿಎಸ್‌ಎನ್‌ಎಲ್‌ನ 87ರೂ. ರೀಚಾರ್ಜ್ ಪ್ಲ್ಯಾನ್ ಬಜೆಟ್ ದರದಲ್ಲಿ ಉತ್ತಮ ಪ್ಲ್ಯಾನ್ ಎನಿಸಲಿದೆ. ಏಕೆಂದರೆ ಸದ್ಯದಲ್ಲೇ ಮೂರು ಟೆಲಿಕಾಂಗಳು ದರ ಹೆಚ್ಚಳ ಮಾಡುವ ಸಾಧ್ಯತೆಗಳಿವೆ. ಏರ್‌ಟೆಲ್ ಇತ್ತೀಚಿಗೆ 99ರೂ. ರೀಚಾರ್ಜ್ ಪ್ಲ್ಯಾನ್ ಅನ್ನು 155ರೂ. ಗೆ ಹೆಚ್ಚಿಸಿದೆ. ಹೀಗಾಗಿ ಕಡಿಮೆ ಬೆಲೆಯಲ್ಲಿ ಬಿಎಸ್‌ಎನ್‌ಎಲ್‌ನ ಈ ಪ್ಲ್ಯಾನ್ ಆಕರ್ಷಕ ಎನ್ನುವಂತಿದೆ. ಹಾಗಾದರೆ ಈ ಪ್ಲ್ಯಾನ್ ಪ್ರಯೋಜನಗಳೆನು ಹಾಗೂ ಇತರೆ ಜನಪ್ರಿಯ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ.

ಬಿಎಸ್‌ಎನ್‌ಎಲ್ 87ರೂ. ರೀಚಾರ್ಜ್ ಪ್ಲ್ಯಾನ್ : ಬಿಎಸ್‌ಎನ್‌ಎಲ್‌ನ 87ರೂ. ರೀಚಾರ್ಜ್ ಪ್ಲಾನ್ ಒಟ್ಟು 14 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಮೊಬೈಲ್ ಗೇಮ್‌ಗಳಿಂದ ಅನಿಯಮಿತ ವಾಯಿಸ್ ಕರೆ ಮತ್ತು ಗೇಮಿಂಗ್ ಪ್ರಯೋಜನಗಳ ಜೊತೆಗೆ 1GB ದೈನಂದಿನ ಡೇಟಾ ಪ್ರಯೋಜನ ನೀಡುತ್ತದೆ. ಅಂದಹಾಗೆ ಈ ಯೋಜನೆಯು ಯಾವುದೇ ಎಸ್‌ಎಮ್‌ಎಸ್ ಪ್ರಯೋಜನ ಪಡೆದಿಲ್ಲ. ಈ ಯೋಜನೆಯಲ್ಲಿ ಒಟ್ಟು 14GB ಡೇಟಾ ಸೌಲಭ್ಯ ದೊರೆಯುತ್ತದೆ.

ಬಿಎಸ್‌ಎನ್‌ಎಲ್ ಸಂಸ್ಥೆಯ ಹೊಸ 797ರೂ ರೂ. ಪ್ರಿಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಲಭ್ಯವಾಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಸಿಗಲಿದೆ. ಇದಲ್ಲದೇ ಪ್ರತಿದಿನ 100 ಉಚಿತ ಎಸ್‌ಎಮ್ಎಸ್‌ಗಳ ಪ್ರಯೋಜನ ಸಹ ದೊರೆಯುತ್ತದೆ. ಪ್ರತಿದಿನ ನಿಗದಿತ ಡೇಟಾ ಮುಗಿದ ಬಳಿಕ, ಇಂಟರ್ನೆಟ್ ವೇಗವು 40kpbs ಗೆ ಇಳಿಕೆಯಾಗುತ್ತದೆ.
ಬಿಎಸ್‌ಎನ್‌ಎಲ್ ಟೆಲಿಕಾಂನ 299ರೂ. ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, ಒಟ್ಟು 30 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಪ್ರತಿದಿನ 3 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಗೆ ಕಡಿಮೆಯಾಗುತ್ತದೆ.

ಬಿಎಸ್‌ಎನ್‌ಎಲ್ ಟೆಲಿಕಾಂನ 347ರೂ. ಯೋಜನೆಯು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯು 2 GB ದೈನಂದಿನ ಡೇಟಾ, 100 ಎಸ್‌ಎಮ್‌ಎಸ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಸಹ ಒಳಗೊಂಡಿದೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಇಳಿಯಲಿದೆ.
ಬಿಎಸ್‌ಎನ್‌ಎಲ್ ಟೆಲಿಕಾಂನ 599ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 5 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450 GB ಡೇಟಾ ಪ್ರಯೋಜನ ದೊರೆಯುತ್ತದೆ. ಹೆಚ್ಚುವರಿಯಾಗಿ ಜಿಂಗ್ ಸೇವೆ ಲಭ್ಯವಾಗಲಿದೆ.
ಬಿಎಸ್‌ಎನ್‌ಎಲ್ 2399ರೂ. ಯೋಜನೆಯು ವಾರ್ಷಿಕ ಅವಧಿಯ ಪ್ಲ್ಯಾನ್ ಆಗಿದೆ. ಈ ಯೋಜನೆಯು ಇದೀಗ ಹೆಚ್ಚುವರಿಯಾಗಿ 60 ದಿನಗಳ ವ್ಯಾಲಿಡಿಟಿಯನ್ನು ಪಡೆದಿದೆ. ಹೀಗಾಗಿ ಒಟ್ಟು 425 ದಿನಗಳ ವ್ಯಾಲಿಡಿಟಿ ಸಿಗಲಿದೆ. ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಲಭ್ಯ ಆಗಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವು ದೊರೆಯಲಿದೆ.


Click it and Unblock the Notifications








