Home
ಸುದ್ದಿಜಾಲ

ಬಿಎಸ್‌ಎನ್‌ಎಲ್‌ 99ರೂ. ಪ್ಲ್ಯಾನ್‌ ಪರಿಷ್ಕರಣೆ: ಸಿಗುತ್ತೆ ಹೆಚ್ಚುವರಿ ಕೊಡುಗೆ!

ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್ಎಲ್‌ ಟೆಲಿಕಾಂ ನೆಟವರ್ಕ್ ಸ್ಲೋ ಎಂದು ಮೂಗುಮೂರಿಯುವವರೇ ಅನೇಕ. ಆದರೆ ಬಿಎಸ್‌ಎನ್‌ಎಲ್ ಟೆಲಿಕಾಂ ಖಾಸಗಿ ಟೆಲಿಕಾಂಗಳಿಗೆ ಪೈಪೋಟಿ ನೀಡುವಂತಹ ಕೆಲವು ಆಕರ್ಷಕ ಪ್ರೀಪೇಯ್ಡ್‌ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಸದ್ಯ ಅಧಿಕ ಡೇಟಾ, ಬಿಗ್ ವ್ಯಾಲಿಡಿಟಿ ಹಾಗೂ ಕರೆಯ ಸೌಲಭ್ಯದ ಪ್ಲ್ಯಾನ್‌ಗಳ ಜೊತೆಗೆ ಹೆಚ್ಚುವರಿ ಪ್ರಯೋಜನ ನಿಡಿದರೇ ಗ್ರಾಹಕರನ್ನು ಸೆಳೆಯುತ್ತವೆ. ಈ ನಿಟ್ಟಿನಲ್ಲಿ ಬಿಎಸ್‌ಎನ್‌ಎಲ್‌ ತನ್ನ ಪ್ರೀಪೇಯ್ಡ್‌ ಪ್ಲ್ಯಾನ್‌ನೊಂದನ್ನು ಪರಿಷ್ಕರಣೆ ಮಾಡಿದೆ.

ಬಿಎಸ್‌ಎನ್‌ಎಲ್‌

ಹೌದು, ಬಿಎಸ್‌ಎನ್‌ಎಲ್‌ ತನ್ನ 99ರೂ. ಬೆಲೆಯ ಪ್ರೀಪೇಯ್ಡ್‌ ಪ್ಲ್ಯಾನ್‌ ಅನ್ನು ಈಗ ಪರಿಷ್ಕರಣೆ ಮಾಡಿದೆ. ಈ ಯೋಜನೆಯು ಉಚಿತ ವಾಯಿಸ್ ಕರೆಯ ಸೌಲಭ್ಯವನ್ನು ಒಳಗೊಂಡಿದ್ದು, ಇದೀಗ ಉಚಿತವಾಗಿ ಕಾಲರ್ ಟ್ಯೂನ್ (PRBT-ಪರ್ಸನಲೈಸ್ಡ್ ರಿಂಗ್ ಬ್ಯಾಕ್ ಕಾಲರ್ ಟ್ಯೂನ್ ಸರ್ವೀಸ್) ಸೌಲಭ್ಯವನ್ನು ಘೋಷಿಸಿದೆ. ಆದ್ರೆ ಈ ಕೊಡುಗೆಯು ಕೆಲವು ಆಯ್ದ ಟೆಲಿಕಾಂ ಸರ್ಕಲ್ ವ್ಯಾಪ್ತಿಯಲ್ಲಿ ಮಾತ್ರ ಲಭ್ಯ ಮಾಡಿದೆ. ಈ ಪ್ಲ್ಯಾನ್ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಮುಂದೆ ನೋಡೋಣ ಬನ್ನಿರಿ.

ಬಿಎಸ್‌ಎನ್‌ಎಲ್‌ 99ರೂ.ಪ್ಲ್ಯಾನ್

ಬಿಎಸ್‌ಎನ್‌ಎಲ್‌ 99ರೂ.ಪ್ಲ್ಯಾನ್

ಬಿಎಸ್‌ಎನ್‌ಎಲ್‌ 99 ರೂ. ಬೆಲೆಯ ಯೋಜನೆಯು ವಾಯಿಸ್‌ ಕರೆಯೆ ಪ್ಲ್ಯಾನ್ ಆಗಿದ್ದು, ಬಳಕೆದಾರರಿಗೆ ದಿನಕ್ಕೆ 250 ನಿಮಿಷಗಳ ಕರೆಯ ಮಿತಿಯ ಪ್ರಯೋಜನ ನೀಡುತ್ತದೆ. ಅನಿಯಮಿತ ಧ್ವನಿ ಕರೆಯ ಸೌಲಭ್ಯವು ಒಟ್ಟು 22 ದಿನಗಳವರೆಗೆ ಲಭ್ಯವಾಗುತ್ತದೆ. ಬಳಕೆದಾರರು 250 ನಿಮಿಷಗಳ ಮಿತಿ ಮೀರಿದರೇ ಅದಕ್ಕೆ ಶುಲ್ಕ ವಿಧಸಲಾಗುತ್ತದೆ. ಈ ಯೋಜನೆಯಲ್ಲಿ ಉಚಿತ ಕಾಲರ್ ಟ್ಯೂನ್ ಸೇವೆಯು ದೊರೆಯುತ್ತದೆ.

ಬಿಎಸ್‌ಎನ್‌ಎಲ್‌ ವಾರ್ಷಿಕ ಯೋಜನೆ ಪ್ಲ್ಯಾನ್‌ಗಳು

ಬಿಎಸ್‌ಎನ್‌ಎಲ್‌ ವಾರ್ಷಿಕ ಯೋಜನೆ ಪ್ಲ್ಯಾನ್‌ಗಳು

ಬಿಎಸ್‌ಎನ್‌ಎಲ್‌ನ 2,399ರೂ. ಪ್ಲ್ಯಾನ್ ಒಟ್ಟು 600 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 250 FUP ನಿಮಿಷಗಳ ಮಿತಿಯಲ್ಲಿ ಉಚಿತ ವಾಯಿಸ್‌ ಕರೆಗಳ ಪ್ರಯೋಜನವನ್ನು ಒದಗಿಸಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದ್ದು, 60 ದಿನಗಳಿಗೆ ಬಿಎಸ್‌ಎನ್‌ಎಲ್‌ ಟ್ಯೂನ್‌ ಸೌಲಭ್ಯವು ಸಿಗಲಿದೆ. ಆದರೆ ಯಾವುದೇ ಡೇಟಾ ಪ್ರಯೋಜನ ಲಭ್ಯ ಇರುವುದಿಲ್ಲ. ಡೇಟಾ ಅಗತ್ಯ ಇರದ ಹಾಗೂ ವಾಯಿಸ್ ಕರೆ ಮತ್ತು ಹೆಚ್ಚಿನ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಪ್ಲ್ಯಾನ್ ಉತ್ತಮ ಆಯ್ಕೆ ಆಗಿದೆ.

ಡೇಟಾ ಎಸ್‌ಟಿವಿ

ಹಾಗೆಯೇ ಬಿಎಸ್‌ಎನ್‌ಎಲ್‌ 693ರೂ. ಡೇಟಾ ಎಸ್‌ಟಿವಿ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 300GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಇದು ಡೇಟಾ ಪ್ರೀಪೇಯ್ಡ್ ಯೋಜನೆ ಆಗಿರುವುದರಿಂದ ಯಾವುದೇ ವಾಯಿಸ್‌ ಕರೆ ಹಾಗೂ ಎಸ್‌ಎಮ್‌ಎಸ್‌ ಸೌಲಭ್ಯಗಳು ದೊರೆಯುವುದಿಲ್ಲ.

1,212ರೂ.

ಬಿಎಸ್‌ಎನ್‌ಎಲ್‌ 1,212ರೂ. ಡೇಟಾ ಎಸ್‌ಟಿವಿ ಡೇಟಾ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 500GB ಡೇಟಾ ಪ್ರಯೋಜನೆ ದೊರೆಯುತ್ತದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಯಾವುದೇ ವಾಯಿಸ್‌ ಕರೆ ಹಾಗೂ ಎಸ್‌ಎಮ್‌ಎಸ್‌ ಸೌಲಭ್ಯಗಳು ದೊರೆಯುವುದಿಲ್ಲ. ಇದೊಂದು ಡೇಟಾ ಪ್ಲ್ಯಾನ್ ಆಗಿದೆ.

Best Mobiles in India

English summary
BSNL 99 plan with unlimited calling facility to include free Personalised Ring Back Tone service (PRBT).
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+