ಒಮ್ಮೆ ಈ ಪ್ಲ್ಯಾನ್ ರೀಚಾರ್ಜ್ ಮಾಡಿದ್ರೆ, ಅರ್ಧ ವರ್ಷ ಮತ್ತೆ ರೀಚಾರ್ಜ್ ಬೇಕಿಲ್ಲ!
ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಟೆಲಿಕಾಂ ಸಂಸ್ಥೆಯು ಕೆಲವು ಅತ್ಯುತ್ತಮ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಮೂಲಕ ಗುರುತಿಸಿಕೊಂಡಿದೆ. ಇದಲ್ಲದೇ ಬಿಎಸ್‌ಎನ್‌ಎಲ್ ಸಂಸ್ಥೆಯು ಕೆಲವು ಡೇಟಾ ಮತ್ತು ವ್ಯಾಲಿಡಿಟಿ ಯೋಜನೆಗಳ ಮೂಲಕ ಖಾಸಗಿ ಟೆಲಿಕಾಂಗಳಿಗೆ ನೇರ ಸೆಡ್ಡು ಹೊಡೆಯುವ ಪ್ರಯತ್ನ ನಡೆಸುತ್ತಾ ಮುಂದೆ ಸಾಗಿದೆ. ಇನ್ನು ಬಿಎಸ್‌ಎನ್‌ಎಲ್ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಭರ್ಜರಿ ಪ್ರಯೋಜನಗಳ ಮೂಲಕ ಗ್ರಾಹಕರನ್ನು ಸೆಳೆದಿದೆ.
ಹೌದು, ಬಿಎಸ್‌ಎನ್‌ಎಲ್ ಟೆಲಿಕಾಂನ 997ರೂ. ಪ್ರೀಪೇಯ್ಡ್ ಯೋಜನೆಯು ಹೆಚ್ಚಿನ ಡೇಟಾ ಸೌಲಭ್ಯ, ದೀರ್ಘಾವಧಿಯ ವ್ಯಾಲಿಡಿಟಿ ಪ್ರಯೋಜನಗಳನ್ನು ನಿರೀಕ್ಷಿಸುವ ಚಂದಾದಾರರಿಗೆ ಇದು ಅನುಕೂಲಕರ ಯೋಜನೆ ಎನಿಸಿದೆ. ಬಿಎಸ್ಎನ್‌ಎಲ್‌ನ ಈ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ದೈನಂದಿನ ಡೇಟಾ, ಅನಿಯಮಿತ ವಾಯಿಸ್ ಕರೆ ಹಾಗೂ ಬಿಗ್ ವ್ಯಾಲಿಡಿಟಿ ಸೌಲಭ್ಯ ದೊರೆಯುತ್ತದೆ. ಹಾಗಾದರೆ ಬಿಎಸ್‌ಎನ್‌ಎಲ್ ಟೆಲಿಕಾಂನ 997ರೂ. ಪ್ರೀಪೇಯ್ಡ್ ಯೋಜನೆ ಇತರೆ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್ 997ರೂ. ಯೋಜನೆಯ ಪ್ರಯೋಜನಗಳು : ಬಿಎಸ್‌ಎನ್‌ಎಲ್ ಟೆಲಿಕಾಂನ ಈ ಯೋಜನೆಯು ಒಟ್ಟು 160 ದಿನಗಳ ವ್ಯಾಲಿಡಿಟಿ ಪ್ರಯೋಜನವನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಗ್ರಾಹಕರಿಗೆ ಲಭ್ಯವಾಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಹಾಗೂ ಪ್ರತಿದಿನ 100 ಎಸ್ಎಮ್‌ಎಸ್ ಪ್ರಯೋಜನ ಸಹ ದೊರೆಯುತ್ತದೆ.
ಅಲ್ಲದೇ ಹೆಚ್ಚುವರಿಯಾಗಿ ಎರಡು ತಿಂಗಳವರೆಗೆ ಉಚಿತ PRBT ಸೇವೆ ಮತ್ತು ಉಚಿತ ಲೋಕಧುನ್ ಸೇವೆ ಸಹ ಲಭ್ಯವಾಗಲಿದೆ. ಈ ಯೋಜನೆಯಲ್ಲಿ ಒಟ್ಟು 320 GB ಡೇಟಾ ಪ್ರಯೋಜನ ಸಿಗಲಿದೆ. ಒಂದು ಬಾರಿ ಈ ಪ್ರೀಪೇಯ್ಡ್ ಪ್ಲ್ಯಾನ್ ರೀಚಾರ್ಜ್ ಮಾಡಿಸಿದರೆ, ಬಹುತೇಕ ಅರ್ಧ ವಾರ್ಷಿಕದ ವರೆಗೆ ಟೆನ್ಷನ್ ಇರಲ್ಲ.

ಬಿಎಸ್‌ಎನ್‌ಎಲ್ 269ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು : ಬಿಎಸ್‌ಎನ್‌ಎಲ್ ಟೆಲಿಕಾಂನ 269 ರೂ. ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, ಒಟ್ಟು 30 ದಿನಗಳ ವ್ಯಾಲಿಡಿಟಿ ಯನ್ನು ಒಳಗೊಂಡಿದೆ. ಪ್ರತಿದಿನ 2 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ.

ಬಿಎಸ್‌ಎನ್‌ಎಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು : ಬಿಎಸ್‌ಎನ್‌ಎಲ್ ಟೆಲಿಕಾಂನ 599ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 5 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ.

ಬಿಎಸ್‌ಎನ್‌ಎಲ್ 769ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು : ಬಿಎಸ್‌ಎನ್‌ಎಲ್ ಟೆಲಿಕಾಂನ 769 ರೂ. ಪ್ಲ್ಯಾನ್, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಪ್ರತಿದಿನ 2 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ.
ಬಿಎಸ್‌ಎನ್‌ಎಲ್ 1198ರೂ. ರೀಚಾರ್ಜ್ ಪ್ಲ್ಯಾನ್ ಪ್ರಯೋಜನಗಳು : ಬಿಎಸ್‌ಎನ್‌ಎಲ್ ಟೆಲಿಕಾಂನ 1198ರೂ. ರೀಚಾರ್ಜ್ ಯೋಜನೆಯಲ್ಲಿ ಪ್ರತಿ ತಿಂಗಳು 3 GB ಡೇಟಾ, ಇದರೊಂದಿಗೆ ಪ್ರತಿ ತಿಂಗಳು 300 ನಿಮಿಷಗಳ ಉಚಿತ ವಾಯಿಸ್ ಕರೆ ಪ್ರಯೋಜನ ಲಭ್ಯವಿದೆ. ಇನ್ನು ಈ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ 36GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಮುಖ್ಯವಾಗಿ ಅಧಿಕ ವ್ಯಾಲಿಡಿಟಿ ನಿರೀಕ್ಷಿಸುವ ಗ್ರಾಹಕರಿಗೆ ಅತ್ಯುತ್ತಮ ಪ್ಲ್ಯಾನ್ ಎನಿಸುತ್ತದೆ.


Click it and Unblock the Notifications








