Home
ಸುದ್ದಿಜಾಲ

ಬಿಎಸ್‌ಎನ್‌ಎಲ್‌ನಿಂದ ಧಮಾಕ ಕೊಡುಗೆ; ಹುಬ್ಬೇರಿಸಿದ ಖಾಸಗಿ ಟೆಲಿಕಾಂಗಳು!

ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ ಟೆಲಿಕಾಂ ಜಿಯೋ, ಏರ್‌ಟೆಲ್ ಮತ್ತು (ವೊಡಾಫೋನ್ ಐಡಿಯಾ) ವಿ ಟೆಲಿಕಾಂ ಗಳಿಗೆ ಸೆಡ್ಡು ಹೊಡೆಯುವಂತಹ ಯೋಜನೆಗಳನ್ನು ನೀಡುತ್ತ ಮುನ್ನಡೆದಿದೆ. ಬಿಎಸ್‌ಎನ್‌ಎಲ್‌ನ ಕೆಲವು ಯೋಜನೆಗಳು ಅಧಿಕ ಡೇಟಾ ಮತ್ತು ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಒಳಗೊಂಡಿವೆ. ಬಿಎಸ್‌ಎನ್‌ಎಲ್ ಇದೀಗ ಖಾಸಗಿ ಟೆಲಿಕಾಂಗಳು ದಂಗಾಗುವಂತಹ ಕೊಡುಗೆಯೊಂದನ್ನು ಘೋಷಿಸಿದೆ.

ಬಿಎಸ್‌ಎನ್‌ಎಲ್

ಹೌದು, ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಟೆಲಿಕಾಂ ಇತರೆ ಟೆಲಿಕಾಂ ಆಪರೇಟರ್‌ಗಳ ಚಂದಾದಾರರು ಬಿಎಸ್‌ಎನ್‌ಎಲ್‌ (BSNL) ಬದಲಾಯಿಸಿದರೆ, ಅಂತಹ ಗ್ರಾಹಕರಿಗೆ 30 ದಿನಗಳ ವ್ಯಾಲಿಡಿಟಿ ಸೌಲಭ್ಯದೊಂದಿಗೆ 5GB ಹೆಚ್ಚುವರಿ ಡೇಟಾ ಪ್ರಯೋಜನ ನೀಡುವುದಾಗಿ ತಿಳಿಸಿದೆ. ಇತ್ತೀಚಿಗೆ ರಿಲಯನ್ಸ್‌ ಜಿಯೋ, ಏರ್‌ಟೆಲ್‌ ಹಾಗೂ ವಿ ಟೆಲಿಕಾಂಗಳು ತಮ್ಮ ಪ್ರಿಪೇಯ್ಡ್‌ ಯೋಜನೆಗಳ ದರ ಏರಿಕೆ ಮಾಡಿ ಗ್ರಾಹಕರಿಗೆ ಆಘಾತ ನೀಡಿವೆ. ಈ ನಿಟ್ಟಿನಲ್ಲಿ ಇತರೆ ಟೆಲಿಕಾಂ ಗ್ರಾಹಕರನ್ನು ಸೆಳೆಯಲು ಈ ಕೊಡುಗೆ ಮೂಲಕ ಮುಂದಾಗಿದೆ. ಬಿಎಸ್‌ಎನ್‌ಎಲ್‌ ಟೆಲಿಕಾಂನ ಈ ಕೊಡುಗೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.

ಕೊಡುಗೆ ಅವಧಿ

ಕೊಡುಗೆ ಅವಧಿ

ಬಿಎಸ್‌ಎನ್‌ಎಲ್ ಟೆಲಿಕಾಂ 30 ದಿನಗಳ ವ್ಯಾಲಿಡಿಟಿ ಸೌಲಭ್ಯದೊಂದಿಗೆ 5GB ಹೆಚ್ಚುವರಿ ಡೇಟಾ ಪ್ರಯೋಜನ ತಿಳಿಸಿದೆ. ಇತರೆ ಟೆಲಿಕಾಂ ಸಂಸ್ಥೆಗಳ ಗ್ರಾಹಕರು ಬಿಎಸ್‌ಎನ್‌ಎಲ್ ಟೆಲಿಕಾಂಗೆ ಬದಲಾಯಿಸಿದರೆ ಈ ಆಫರ್ ಲಭ್ಯ ಆಗಲಿದೆ. ಇನ್ನು ಈ ಆಫರ್ ಜನವರಿ 15, 2022 ರವರೆಗೆ ಮಾತ್ರ ಮಾನ್ಯವಾಗಿರುತ್ತದೆ.

ಬಿಎಸ್‌ಎನ್‌ಎಲ್‌ 397ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 397ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 397ರೂ. ಪ್ರೀಪೇಯ್ಡ್‌ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಹಾಗೂ ಪ್ರತಿದಿನ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 300 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಆದರೆ ಡೇಟಾ, ಎಸ್‌ಎಮ್‌ಎಸ್‌, ಉಚಿತ ಕಾಲರ್ ಟ್ಯೂನ್ ಪ್ರಯೋಜನಗಳು ಆರಂಭಿಕ 60 ದಿನಗಳು ಮಾತ್ರ ಲಭ್ಯವಾಗಲಿವೆ.

ಬಿಎಸ್‌ಎನ್‌ಎಲ್‌ 499ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 499ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 499ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಹಾಗೂ ಪ್ರತಿದಿನ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಹೆಚ್ಚುವರಿಯಾಗಿ ಬಿಎಸ್‌ಎನ್‌ಎಲ್ ಟ್ಯೂನ್ ಹಾಗೂ ಜಿಂಗ್ ಆಪ್ ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್‌ 997ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 997ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ ಈ ಯೋಜನೆಯಲ್ಲಿ ಪ್ರತಿದಿನ 3GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಹಾಗೂ ಪ್ರತಿದಿನ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 180 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 540 GB ಡೇಟಾ ಪ್ರಯೋಜನ ದೊರೆಯುತ್ತದೆ.

ಬಿಎಸ್‌ಎನ್‌ಎಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ ಈ ಯೋಜನೆಯಲ್ಲಿ ಪ್ರತಿದಿನ 5GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಹಾಗೂ ಪ್ರತಿದಿನ 250 ನಿಮಿಷಗಳ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450GB ಡೇಟಾ ಪ್ರಯೋಜನ ದೊರೆಯುತ್ತದೆ.

ಬಿಎಸ್‌ಎನ್‌ಎಲ್‌ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ ಈ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಹಾಗೂ ಪ್ರತಿದಿನ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 120 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 240GB ಡೇಟಾ ಪ್ರಯೋಜನ ದೊರೆಯುತ್ತದೆ.

Best Mobiles in India

English summary
The offer is valid till January 15, 2022. The free data will be valid for 30 days.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+