BSNL ಟೆಲಿಕಾಂನ ಈ ಪ್ಲ್ಯಾನ್‌ ಮುಂದೆ ಜಿಯೋ, ಏರ್‌ಟೆಲ್‌ ಠುಸ್‌ ಪಟಾಕಿ!

|

.ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ ಟೆಲಿಕಾಂ ಸೇರಿದಂತೆ ಜಿಯೋ, ವಿ ಟೆಲಿಕಾಂ ಮತ್ತು ಏರ್‌ಟೆಲ್ ಟೆಲಿಕಾಂಗಳು ಪ್ರಸ್ತುತ ಆಕರ್ಷಕ ಪ್ಲ್ಯಾನ್ ಪರಿಚಯಿಸುತ್ತಾ ಸಾಗಿವೆ. ಖಾಸಗಿ ಟೆಲಿಕಾಂಗಳಿಗೆ ಪೈಪೋಟಿ ನೀಡುವಂತಹ ಕೆಲವು ಯೋಜನೆಗಳನ್ನು ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ ಸಂಸ್ಥೆ ನೀಡಿದೆ. ಅವುಗಳು ಅಧಿಕ ವ್ಯಾಲಿಡಿಟಿ, ವಾಯಿಸ್ ಕರೆ ಹಾಗೂ ಡೇಟಾ ಪ್ರಯೋಜನಗಳನ್ನು ಒಳಗೊಂಡಿದೆ. ಬಿಎಸ್‌ಎನ್‌ಎಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಗ್ರಾಹಕರ ಗಮನ ಸೆಳೆದಿದೆ.

BSNL ಟೆಲಿಕಾಂನ ಈ ಪ್ಲ್ಯಾನ್‌ ಮುಂದೆ ಜಿಯೋ, ಏರ್‌ಟೆಲ್‌ ಠುಸ್‌ ಪಟಾಕಿ!

ಹೌದು, ಬಿಎಸ್‌ಎನ್‌ಎಲ್‌ ಟೆಲಿಕಾಂ ಕೆಲವು ಯೋಜನೆಗಳು ಆಕರ್ಷಕ ಅನಿಸಿವೆ. ಆ ಪೈಕಿ ಬಿಎಸ್‌ಎನ್‌ಎಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಸಹ ಒಂದಾಗಿದೆ. ಅಧಿಕ ಡೇಟಾ ಬಯಸುವ ಚಂದಾದಾರರಿಗೆ ಈ ಯೋಜನೆಯು ಯೋಗ್ಯ ಎನಿಸಲಿದೆ. ಈ ಪ್ಲ್ಯಾನಿನಲ್ಲಿ ಚಂದಾದಾರರಿಗೆ ಪ್ರತಿದಿನ 5GB ಡೇಟಾ ಪ್ರಯೋಜನ ದೊರೆಯಲಿದೆ ಹಾಗೂ ಅಧಿಕ ವ್ಯಾಲಿಡಿಟಿಯ ಸೌಲಭ್ಯವು ಲಭ್ಯವಾಗಲಿದೆ. ಹಾಗಾದರೇ ಬಿಎಸ್‌ಎನ್‌ಎಲ್‌ನ 599ರೂ. ಪ್ರೀಪೇಯ್ಡ್‌ ಯೋಜನೆ ಜಿಯೋ ಮತ್ತು ಏರ್‌ಟೆಲ್‌ಗಿಂತ ಭಿನ್ನ ಹೇಗೆ?..ಇದರ ಪ್ರಯೋಜನಗಳೇನು? ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್‌ 599ರೂ. ಪ್ರೀಪೇಯ್ಡ್‌ ಯೋಜನೆಯಲ್ಲಿ ಪ್ರತಿದಿನ 5GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450 GB ಡೇಟಾ ಪ್ರಯೋಜನ ದೊರೆಯುತ್ತದೆ. ಹೆಚ್ಚುವರಿಯಾಗಿ ಜಿಂಗ್ ಸೇವೆ ಲಭ್ಯವಾಗಲಿದೆ.

BSNL ಟೆಲಿಕಾಂನ ಈ ಪ್ಲ್ಯಾನ್‌ ಮುಂದೆ ಜಿಯೋ, ಏರ್‌ಟೆಲ್‌ ಠುಸ್‌ ಪಟಾಕಿ!

ರಿಲಾಯನ್ಸ್‌ ಜಿಯೋ 599ರೂ. ಪ್ರೀಪೇಯ್ಡ್‌ ಯೋಜನೆ
ಜಿಯೋ 599ರೂ. ಪ್ರೀಪೇಯ್ಡ್‌ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಪ್ರಯೋಜನವನ್ನು ಹೊಂದಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ 3000 ಉಚಿತ ನಿಮಿಷಗಳ ಮಿತಿ ಹೊಂದಿದೆ. ಹಾಗೆಯೇ ಹೆಚ್ಚುವರಿಯಾಗಿ ಕೆಲವು ಆಪ್‌ ಸೇವೆಗಳು ದೊರೆಯಲಿವೆ.

BSNL ಟೆಲಿಕಾಂನ ಈ ಪ್ಲ್ಯಾನ್‌ ಮುಂದೆ ಜಿಯೋ, ಏರ್‌ಟೆಲ್‌ ಠುಸ್‌ ಪಟಾಕಿ!

ಭಾರ್ತಿ ಏರ್‌ಟೆಲ್ 599ರೂ. ಪ್ರೀಪೇಯ್ಡ್‌ ಯೋಜನೆ
ಏರ್‌ಟೆಲ್‌ನ 599ರೂ. ಪ್ರೀಪೇಡ್‌ ಪ್ಲ್ಯಾನ್‌ ಸಹ ದೀರ್ಘಾವಧಿಯ ವ್ಯಾಲಿಡಿಟಿ ಪಡೆದಿದೆ. ಈ ಪ್ಲ್ಯಾನಿನಲ್ಲಿ ಒಟ್ಟು 56 ದಿನಗಳ ವ್ಯಾಲಿಡಿಟಿ ಲಭ್ಯವಾಗಲಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ವಾಯಿಸ್‌ ಕರೆಯ ಸೌಲಭ್ಯ ಹಾಗೂ ಹೆಚ್ಚುವರಿಯಾಗಿ ಡಿಸ್ನಿ ಹಾಟ್‌ಸ್ಟಾರ್ ಚಂದಾದಾರಿಕೆ ಪ್ರಯೋಜನ ಸಹ ಲಭ್ಯವಾಗಲಿದೆ. ಫ್ರೀ ಹೆಲೋ ಟ್ಯೂನ್ಸ್‌, ವಿಂಕ್ ಮ್ಯೂಸಿಕ್ ಸೇವೆಗಳು ಲಭ್ಯವಾಗಲಿವೆ. ಇತರೆ ಬಿಎಸ್‌ಎನ್‌ಎಲ್‌ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್‌ 2399ರೂ. ವಾರ್ಷಿಕ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್‌ನ ಈ ಪ್ಲ್ಯಾನ್ ಒಟ್ಟು 600 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 250 FUP ನಿಮಿಷಗಳ ಮಿತಿಯಲ್ಲಿ ಉಚಿತ ವಾಯಿಸ್‌ ಕರೆಗಳ ಪ್ರಯೋಜನವನ್ನು ಒದಗಿಸಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದ್ದು, 60 ದಿನಗಳಿಗೆ ಬಿಎಸ್‌ಎನ್‌ಎಲ್‌ ಟ್ಯೂನ್‌ ಸೌಲಭ್ಯವು ಸಿಗಲಿದೆ. ಆದರೆ ಯಾವುದೇ ಡೇಟಾ ಪ್ರಯೋಜನ ಲಭ್ಯ ಇರುವುದಿಲ್ಲ. ಡೇಟಾ ಅಗತ್ಯ ಇರದ ಹಾಗೂ ವಾಯಿಸ್ ಕರೆ ಮತ್ತು ಹೆಚ್ಚಿನ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಪ್ಲ್ಯಾನ್ ಉತ್ತಮ ಆಯ್ಕೆ ಆಗಿದೆ.

ಬಿಎಸ್‌ಎನ್‌ಎಲ್‌ 499ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್‌ನ ಈ SVT 499ರೂ. ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಿದ್ದು, ಒಟ್ಟು ಪೂರ್ಣ ಅವಧಿಗೆ 180GB ಡೇಟಾ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ದೊರೆಯಲಿದೆ. ಹಾಗೆಯೇ ಡೈಲಿ 100 ಎಸ್‌ಎಮ್‌ಎಸ್‌ ಸಹ ಸಿಗುತ್ತದೆ. ಹೆಚ್ಚುವರಿಯಾಗಿ ಬಿಎಸ್‌ಎನ್‌ಎಲ್‌ ಟ್ಯೂನ್ ಮತ್ತು Zing ಪ್ರಯೋಜನ ಲಭ್ಯ.

Best Mobiles in India

English summary
BSNL This Prepaid Plan Offers Better Benefits From Jio And Airtel.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X