ಒಪ್ಪೋದ ಈ ಅಗ್ಗದ ಫೋನಿಗೆ ಈಗ ಬಂಪರ್ ಆಫರ್; ಗ್ರಾಹಕರಿಗೆ ಉಳಿತಾಯ!
ಜನಪ್ರಿಯ ಒಪ್ಪೋ ಮೊಬೈಲ್ ಸಂಸ್ಥೆಯ A ಸರಣಿಯ ಫೋನ್‌ಗಳು ಬಜೆಟ್ ಬೆಲೆಯಲ್ಲಿ ಗ್ರಾಹಕರ ಗಮನ ಸೆಳೆದಿವೆ. ಅವುಗಳ ಪೈಕಿ ಒಪ್ಪೋ A18 ಫೋನ್ ಅಗ್ಗದ ಬೆಲೆಯಲ್ಲಿ ಕೆಲವು ಆಕರ್ಷಕ ಫೀಚರ್ಸ್‌ಗಳೊಂದಿಗೆ ಗುರುತಿಸಿಕೊಂಡಿದೆ. ಇದೀಗ ಈ ಫೋನ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಗ್ರಾಹಕರು ಹಿಂತಿರುಗಿ ನೋಡುವಂತಹ ಡಿಸ್ಕೌಂಟ್ ಪಡೆದುಕೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ತಾಣದಲ್ಲಿ ಒಪ್ಪೋ A18 ಮೊಬೈಲ್ ಶೇ. 40% ರಷ್ಟು ನೇರ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 4 GB RAM + 64 GB ಸ್ಟೋರೇಜ್ ವೇರಿಯಂಟ್ ಅನ್ನು ಖರೀದಿದಾರರು 8,999ರೂ. ಗಳ ಕೊಡುಗೆಯ ಬೆಲೆಯಲ್ಲಿ ಖರೀದಿ ಮಾಡಲು ಅವಕಾಶ ಇದೆ. ಇದಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ಇನ್ನಷ್ಟು ಡಿಸ್ಕೌಂಟ್ ಸಹ ಲಭ್ಯವಾಗಲಿದೆ.

ಇನ್ನು ಈ ಮೊಬೈಲ್ ಆಕ್ಟಾ ಕೋರ್ ಹೆಲಿಯೊ G85 SoC ಪ್ರೊಸೆಸರ್ ಸೌಲಭ್ಯ ಹೊಂದಿದ್ದು, ಇದರೊಂದಿಗೆ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಹ ಹೊಂದಿದೆ. ಇನ್ನು ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಹ ಪಡೆದುಕೊಂಡಿದೆ. ಇನ್ನು ಈ ಫೋನ್ ಗ್ಲೋವಿಂಗ್ ಬ್ಲೂ ಹಾಗೂ ಗ್ಲೋವಿಂಗ್ ಬ್ಲ್ಯಾಕ್ ಕಲರ್ ಆಯ್ಕೆ ಅನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಒಪ್ಪೋ A18 ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಒಪ್ಪೋ A18 ಫೀಚರ್ಸ್ ಹೀಗಿವೆ
ಒಪ್ಪೋ A18 ಮೊಬೈಲ್ 6.56 ಇಂಚಿನ ಪೂರ್ಣ IPS LCD ಡಿಸ್‌ಪ್ಲೇ ಅನ್ನು ಹೊಂದಿದ್ದು, ಹಾಗೆಯೇ 90Hz ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಈ ಫೋನಿನ ಡಿಸ್‌ಪ್ಲೇಯು ಉತ್ತಮ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದಲಿದ್ದು, ಇದು 89.90% ಸ್ಕ್ರೀನ್ ಟು ಬಾಡಿ ಅನುಪಾತ ಪಡೆದಿದೆ ಹಾಗೂ 720 ನಿಟ್ಸ್ ಬ್ರೈಟ್‌ನೆಸ್ ಅನ್ನು ಹೊಂದಿದೆ.
ಒಪ್ಪೋ A18 ಫೋನ್ ಆಕ್ಟಾ ಕೋರ್ ಹೆಲಿಯೊ G85 SoC ಪ್ರೊಸೆಸರ್ ಪವರ್ ಅನ್ನು ಇದು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಅನ್ನು ಪಡೆದಿದೆ. ಇದರ ಜೊತೆಗೆ ಈ ಫೋನ್ 4GB RAM + 128GB ಆಂತರಿಕ ಸೌಲಭ್ಯವನ್ನು ಈ ಫೋನ್ ಒಳಗೊಂಡಿದೆ. ಅಲ್ಲದೇ ಈ ಫೋನಿನಲ್ಲಿ 4 GB ವರ್ಚುವಲ್ RAM ಅನ್ನು ವಿಸ್ತರಿಸುವುದಕ್ಕೆ ಅವಕಾಶವಿದೆ.
ಒಪ್ಪೋ A18 ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಇದರ ಮುಖ್ಯ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಸೆನ್ಸಾರ್ ದಲ್ಲಿ ಇದೆ. ಅಲ್ಲದೇ ಇದರ ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ನಲ್ಲಿ ಇದೆ. ಇನ್ನು ಮುಂಭಾಗದಲ್ಲಿ ಸೆಲ್ಫಿಗಾಗಿ 5 ಮೆಗಾ ಪಿಕ್ಸಲ್‌ನ ಕ್ಯಾಮೆರಾ ಅನ್ನು ಒದಗಿಸಲಾಗಿದೆ.
ಒಪ್ಪೋ A18 ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದ್ದು, ಇದಕ್ಕೆ ಪೂರಕ ಚಾರ್ಜಿಂಗ್ ಅನ್ನು ಸಪೋರ್ಟ್ ಪಡೆದಿದೆ. ಅಲ್ಲದೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಸಿಮ್ ಕಾರ್ಡ್ ಸ್ಲಾಟ್, 4G, Wi-Fi , ಬ್ಲೂಟೂತ್ v5.3, 3.5mm ಆಡಿಯೊ ಜಾಕ್, GPS ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ.
ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, ಫೇಸ್ ಅನ್‌ಲಾಕ್ ಸಪೋರ್ಟ್ ಪಡೆದಿದೆ. ಇನ್ನು ಈ ಮೊಬೈಲ್ ಗ್ಲೋವಿಂಗ್ ಬ್ಲೂ ಹಾಗೂ ಗ್ಲೋವಿಂಗ್ ಬ್ಲ್ಯಾಕ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ. ಆಸಕ್ತ ಖರೀದಿದಾರರು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಖರೀದಿ ಮಾಡಬಹುದು.


Click it and Unblock the Notifications








