ಮೊಬೈಲ್ ಸ್ಪೋಟದಿಂದ ಮರಣಹೊಂದಿದ ಪ್ರಕರಣಕ್ಕೆ ಟ್ವಿಸ್ಟ್!...ಬೆಚ್ಚಿ ಬೀಳಿಸಿತು ಹೊಸ ಸುದ್ದಿ!!
ರಾತ್ರಿ ವೇಳೆ ಮೊಬೈಲ್ ಚಾರ್ಜ್‌ಗೆ ಇಟ್ಟು ಮಲಗಿದ್ದರಿಂದ ಮೊಬೈಲ್ ಸ್ಪೋಟಗೊಂಡು ಸಾವನಪ್ಪಿದ ಘಟನೆಯ ಸುದ್ದಿ ಮತ್ತೊಮ್ಮೆ ಬೆಚ್ಚಿಬೀಳಿಸಿದೆ. ಮಲೇಷ್ಯಾ ಸಚಿವಾಲಯದ ಕ್ರಡಲ್ ಫಂಡ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಜ್ರಿನ್ ಹಸನ್ ಅವರ ಕತ್ತಿನಲ್ಲಿ ಮೊಬೈಲ್ ಸ್ಫೋಟದ ತೀರ್ವತೆಗೆ ಸಿಡಿದ ಮೊಬೈಲ್ ಚೂರುಗಳಿದ್ದವು ಎಂದು ವರದಿಯಾಗಿದೆ.
ಮೊಬೈಲ್‌ನ್ನು ಚಾರ್ಜ್ ಮಾಡಲು ಇಟ್ಟು, ಮಕ್ಕವೇ ಮಲಗಿದ್ದ ನಜ್ರಿನ್ ಹಸನ್ ಅವರು ಮೊಬೈಲ್ ಸ್ಪೋಟದಿಂದಾಗಿ ಜೀವ ಕಳೆದುಕೊಂಡಿದ್ದಾಗಿ ವರದಿಯಾಗಿತ್ತು. ಸ್ಫೋಟದ ವೇಳೆ ವಿಷಕಾರಿ ಅನಿಲ ಒಳತೆಗೆದುಕೊಂಡ ಹಸನ್ ಮೃತಪಟ್ಟಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಮೊಬೈಲ್ ಸ್ಫೋಟದ ತೀರ್ವತೆಗೆ ಸಿಡಿದ ಮೊಬೈಲ್ ಚೂರುಗಳು ಸಹ ಅವರ ಸಾವಿಗೆ ಕಾರಣವಾಗಿದೆ.

ಇನ್ನು ನಜ್ರಿನ್ ಹಸನ್ ಅವರು ಬಳಸುತ್ತಿದ್ದ ಬ್ಲಾಕ್‌ಬೆರಿ ಹಾಗೂ ಹುವಾಯಿ ಸ್ಮಾರ್ಟ್‌ಫೋನ್‌ಗಳಲ್ಲಿ ಯಾವ ಫೋನ್ ಸ್ಫೋಟಗೊಂಡಿರುವುದು ಎಂಬುದು ಇನ್ನೂ ಪತ್ತೆಯಾಗಿಲ್ಲ. ಅಂದು ನಡೆದ ಸ್ಫೋಟದಲ್ಲಿ ಬ್ಲಾಕ್‌ಬೆರಿ ಹಾಗೂ ಹುವಾಯಿ ಎರಡೂ ಫೋನ್‌ಗಳೂ ಸುಟ್ಟು ಹೋಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮಲೇಷ್ಯಾ ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ನಜ್ರಿನ್ ಹಸನ್ ಅವರು ವಿಷಕಾರಿ ಅನಿಲದಿಂದ ಸತ್ತಿದ್ದಾರೆ ಎಂದು ಪೊಲೀಸರು ನೀಡಿದ್ದ ಮರಣದ ಕಾರಣವನ್ನು ಕುಟುಂಬ ಸದಸ್ಯರು ಮೊದಲೇ ತಳ್ಳಿಹಾಕಿದ್ದಾರು. ಸ್ಫೋಟದ ವೇಳೆ ಮೊಬೈಲ್‌ನ ಚೂರುಗಳು ತಲೆ, ಕುತ್ತಿಗೆ ಭಾಗಕ್ಕೆ ಚುಚ್ಚಿಕೊಂಡಿವೆ. ಹೀಗಾಗಿ ಕೊಠಡಿಗೆ ಬೆಂಕಿ ಆವರಿಸುವ ಮೊದಲೇ ಹಸನ್ ನಿಧನರಾಗಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದರು.

ಇಂಗ್ಲೆಂಡ್‌ನ ಬಕಿಂಗ್ ಹ್ಯಾಮ್ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿದ್ದ ನಜ್ರಿನ್ ಹಸನ್ ಅವರು ಅನೇಕ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು ಸಹ ಮೊಬೈಲ್ ಬ್ಯಾಟರಿ ಬಗ್ಗೆ ಎಚ್ಚರಿಕೆ ವಹಿಸಿದೇ ಮರಣ ಹೊಂದಿದ್ದಾರೆ. ಹಾಗಾಗಿ, ಮೊಬೈಲ್ ಸ್ಪೋಟಕ್ಕೆ ಕಾರಣಗಳು ಮತ್ತು ಸುರಕ್ಷತಾ ಕ್ರಮಗಳು ಯಾವುವು ಎಂಬುದನ್ನು ಈ ಕೆಳಗೆ ನೀವು ತಿಳಿದುಕೊಳ್ಳಿ.

1) ಕಳಪೆ ಚಾರ್ಜರ್
ಹಣ ಉಳಿಸಲು ಕಳಪೆ ಚಾರ್ಜರ್'ಗಳನ್ನು ಬಳಸಬೇಡಿ. ಅವುಗಳು ವಿದ್ಯುತ್ ಪ್ರವಾಹದ ಏರಿಳಿತಗಳಿಂದ ಅಥವಾ ಚಾರ್ಜ್ ಸಂಪೂರ್ಣವಾದ ಬಳಿಕ ಆಗುವ ಹಾನಿಯಿಂದ ರಕ್ಷಿಸುವ ಸುರಕ್ಷತಾ ತಂತ್ರಜ್ಞಾನವನ್ನು ಹೊಂದಿರುವುದಿಲ್ಲ. ಅಂತಹ ಚಾರ್ಜರ್'ಗಳಿಂದ ನಿಮ್ಮ ಫೋನ್ ಶಾಶ್ವತವಾಗಿ ಹಾಳಾಗುವ ಸಾಧ್ಯತೆಗಳು ಹೆಚ್ಚಿರುತ್ತದೆ.

2) ರಕ್ಷಣಾ ಕವಚವನ್ನು ತೆಗೆಯಿರಿ
ಸ್ಮಾರ್ಟ್‌ಫೋನ್ ಚಾರ್ಜ್ ಮಾಡುವ ವೇಳೆ ಫೋನ್ ಮೇಲಿರುವ ರಕ್ಷಣಾ ಕವಚವನ್ನು ತೆಗೆಯಿರಿ. ಚಾರ್ಜ್ ಆಗುವ ಸಮಯದಲ್ಲಿ ಫೋನ್ ಬ್ಯಾಟರಿಗಳು ಬಿಸಿಯಾಗುವುದು ಸಾಮಾನ್ಯ. ಆ ಬಿಸಿ ಕಡಿಮೆಯಾಗಲು ನೀವು ಅಳವಡಿಸಿರುವ ರಕ್ಷಣಾ ಕವಚಗಳು ತಡೆಯಾಗಬಹುದು. ಹಾಗಾಗಿ, ಇದು ನಿಮ್ಮ ನೆನಪಿನಲ್ಲಿರಲಿ.

3) ಅದರದ್ದೇ ಆದ ಚಾರ್ಜರ್
ನಿಮ್ಮ ಫೋನನ್ನು ಅದರದ್ದೇ ಆದ ಚಾರ್ಜರ್'ನಿಂದ ಚಾರ್ಜ್ ಮಾಡಿ. ಮೊಬೈಲ್ ಫೋನ್'ಗಳು ಇತರ ಚಾರ್ಜರ್'ಗಳಿಂದ ಚಾರ್ಜ್ ಆಗುವುದಾದರೂ, ಅದು ಅಸಲಿ ಫೋನ್ ಚಾರ್ಜರ್‌ಗೆ ಹೋಲಿಕೆಯಾಗದಿದ್ದಲ್ಲಿ ನಿಮ್ಮ ಫೋನ್ ಬ್ಯಾಟರಿ ಸಾಮರ್ಥ್ಯದ ಮೇಲೆ ಅದು ದುಷ್ಪರಿಣಾಮ ಬೀಳುತ್ತದೆ. ಬಹುತೇಕ ಬೇರೆ ಯಾವ ಚಾರ್ಜರ್ ಕೂಡ ಸರಿಯಾಗಿ ಹೋಲಿಕೆಯಾಗುವುದಿಲ್ಲ.

4) ಥರ್ಡ್ ಪಾರ್ಟಿ ಬ್ಯಾಟರಿ ಆಪ್
ಥರ್ಡ್ ಪಾರ್ಟಿ ಬ್ಯಾಟರಿ ಆಪ್‌ಗಳನ್ನು ಬಳಸದಿರುವುದು ಉತ್ತಮ. ಥರ್ಡ್ ಪಾರ್ಟಿ ಬ್ಯಾಟರಿ ಆಪ್‌ಗಳೂ ಜಾಹೀರಾತುಗಳನ್ನು ನಿಮ್ಮ ಸ್ಮಾರ್ಟ್‌ಫೋನಿಗೆ ಲೋಡ್ ಮಾಡುವುದಲ್ಲದೇ, ಇತರ ಆಪ್‌ಗಳನ್ನು ಡೌನ್‌ಲೋಡ್ ಮಾಡಲು ನಿಮಗಾಗಿ ಶಿಫಾರಸ್ಸು ಮಾಡುತ್ತಲೇ ಇರುತ್ತವೆ. ಜೊತೆಗೆ ಫೋನ್ ಬ್ಯಾಟರಿಯನ್ನು ತಾನು ಬಳಸಿಕೊಳ್ಳುತ್ತವೆ.

5) ಪದೇ ಪದೇ ಮೊಬೈಲ್ ಚಾರ್ಜ್
ಪದೇ ಪದೇ ಮೊಬೈಲ್ ಚಾರ್ಜ್ ಮಾಡುವ ಅಭ್ಯಾಸ ಬಿಟ್ಟುಬಿಡಿ. ಮೊಬೈಲ್ ಬ್ಯಾಟರಿಯನ್ನು ಒಮ್ಮೆ ( 80%)ಪೂರ್ತಿಯಾಗುವವರೆಗೂ ಚಾರ್ಜ್ ಮಾಡಿ. ಪದೇ ಪದೇ ಚಾರ್ಜ್ ಮಾಡುವುದರಿಂದ ಬ್ಯಾಟರಿ ಮೇಲೆ ಪರಿಣಾಮ ಬೀರುತ್ತದೆ ಮತ್ತು ಸ್ಮಾರ್ಟ್‌ಫೋನಿನ ಬ್ಯಾಟರಿ ಚಾರ್ಜ್ ಪಿನ್ ಸಹ ಹಾಳಾಗಿಬಿಡುತ್ತದೆ.

6) ಪವರ್ ಬ್ಯಾಂಕ್
ಪವರ್ ಬ್ಯಾಂಕ್ ಬಳಸುವಾಗ ಎಚ್ಚರವಿರಲಿ. ನೀವು ಬಳಸುವ ಪವರ್ ಬ್ಯಾಂಕ್ ವಿದ್ಯುತ್ ಪ್ರವಾಹದ ಏರಿಳಿತ, ಶಾರ್ಟ್ ಸರ್ಕ್ಯೂಟ್, ದೀರ್ಘ ಚಾರ್ಜಿಂಗಳಿಂದಾಗುವ ಹಾಗೂ ಅತೀ ಬಿಸಿಯಾಗುವಿಕೆ ಸಮಸ್ಯೆಗಳಿಂದ ನಿಮ್ಮ ಸ್ಮಾರ್ಟ್‌ಫೋನಿನ ಸುರಕ್ಷತೆಯನ್ನೊದಗಿಸುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಿ. ಯುಎಸ್‌ಬಿ ಕೇಬಲ್ ಬಗ್ಗೆ ಜಾಗೃತವಾಗಿರಿ.

7) ಅಗತ್ಯಕ್ಕಿಂತ ಹೆಚ್ಚು ಚಾರ್ಜಿಂಗ್
ರಾತ್ರಿಯಿಡೀ ಫೋನನ್ನು ಚಾರ್ಜ್‌ಗೆ ಇಡುವುದು ಕೂಡ ಒಳ್ಳೆಯ ಅಭ್ಯಾಸವೇನಲ್ಲ. ಮೊಬೈಲ್ ಚಾರ್ಜ್ ಮಾಡುವಾಗ ಹೆಚ್ಚೆಂದರೆ ಶೇ.80ರಷ್ಟು ಬ್ಯಾಟರಿ ಚಾರ್ಜ್ ಮಾಡಿ ಮತ್ತು ಕಡಿಮೆ ಎಂದರೂ 20 ಪರ್ಸೆಂಟ್ ಬ್ಯಾಟರಿ ಚಾರ್ಜ್ ಇರುವಂತೆ ನೋಡಿಕೊಳ್ಳಿ. ಅಗತ್ಯಕ್ಕಿಂತ ಹೆಚ್ಚು ಚಾರ್ಜಿಂಗ್ ನಿಮ್ಮ ಫೋನ್ ಬ್ಯಾಟರಿಯ ಬಾಳಿಕೆಯನ್ನು ಕುಂಠಿತಗೊಳಿಸಬಹುದು.

8) ಫಾಸ್ಟ್ ಚಾರ್ಜರ್
ಫಾಸ್ಟ್ ಚಾರ್ಜರ್‌ಗಳನ್ನು ಆ ತಂತ್ರಜ್ಞಾನ ಅಳವಡಿಕೆಯಾಗಿಲ್ಲದ ಸ್ಮಾರ್ಟ್‌ಫೋನ್‌ಗಳಲ್ಲಿ ಬಳಕೆ ಮಾಡಬೇಡಿ. ಫಾಸ್ಟ್ ಚಾರ್ಜರ್‌ನಲ್ಲಿ ಹೈ ವೋಲ್ಟೇಜ್ ಸರಬರಾಜಾಗುವುದರಿಂದ ಬ್ಯಾಟರಿ ಬೇಗನೇ ಬಿಸಿಯಾಗುತ್ತದೆ. ಫಾಸ್ಟ್ ಚಾರ್ಜರ್ ತಂತ್ರಜ್ಞಾನವಿರುವ ಸ್ಮಾರ್ಟ್‌ಫೋನ್ ಆದರೂ ಯಾವಾಗಲೂ ತ್ವರಿತ ಚಾರ್ಜರ್‌ಗಳನ್ನು ಬಳಸುವುದು ಒಳ್ಳೆಯದಲ್ಲ.


Click it and Unblock the Notifications