ಟಿಸಿಎಲ್ 20 5G ಸ್ಮಾರ್ಟ್‌ಫೋನ್ ಬಿಡುಗಡೆ ! ಆಕರ್ಷಕ ಡಿಸ್‌ಪ್ಲೇ ವಿನ್ಯಾಸ!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಕಂಪೆನಿಗಳಲ್ಲಿ ಟಿಸಿಎಲ್ ಸಂಸ್ಥೆ ಕೂಡ ಒಂದಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ಟಿಸಿಎಲ್ ಇದೀಗ ತನ್ನ ಹೊಸ TCL 20 5G ಮತ್ತು TCL 20 SE ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿವೆ. ಇದರಲ್ಲಿ TCL 20 5G ಸ್ಮಾರ್ಟ್‌ಫೋನ್ ಪ್ರೀಮಿಯಂ ಮಾದರಿಯಾಗಿದೆ ಮತ್ತು ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇನ್ನು TCL 20SE ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.

ಹೌದು ಟಿಸಿಎಲ್ ಸಂಸ್ಥೆ ತನ್ನ ಎರಡು ಹೊಸ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿದೆ. ಸದ್ಯ ಬಿಡುಗಡೆ ಆಗಿರುವ TCL 20 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 690 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಆದರೆ TCL 20 SE ಸ್ನಾಪ್‌ಡ್ರಾಗನ್ 460 SoC ಪ್ರೊಸೆಸರ್ ಅನ್ನು ಹೊಂದಿದೆ. ಇನ್ನುಳಿದಂತೆ ಈ ಎರಡು ಸ್ಮಾರ್ಟ್‌ಫೋನ್‌ಗಳು ಹೊಂದಿರುವ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ,

TCL 20 5G ಸ್ಮಾರ್ಟ್‌ಫೋನ್ ಡಿಸ್‌ಪ್ಲೇ
ಟಿಸಿಎಲ್ 20 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 20: 9 ರಚನೆಯ ಅನುಪಾತವನ್ನು ಹೊಂದಿದೆ. ಅಲ್ಲದೆ 395 ಪಿಪಿ ಪಿಕ್ಸೆಲ್ ಸಾಂದ್ರತೆ ಹಾಗೂ 450 ನಿಟ್ಸ್ ಬ್ರೈಟ್‌ನೆಶ್ ಅನ್ನು ಹೊಂದಿದೆ. ಇದು ಸ್ಕ್ರೀನ್ ಟು ಬಾಡಿ ನಡುವೆ 91% ಅನುಪಾತವನ್ನು ಹೊಂದಿದೆ.

ಪ್ರೊಸೆಸರ್
ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 690 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೆ 6GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶವನ್ನು ಸಹ ನೀಡಲಾಗಿದೆ.

ಕ್ಯಾಮೆರಾ ವಿನ್ಯಾಸ
ಟಿಸಿಎಲ್ 20 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ತಾಮೆರಾ 48 ಮೆಗಾಪಿಕ್ಸೆಲ್ ಸೂಪರ್ ವೈಡ್-ಆಂಗಲ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ 118 ಡಿಗ್ರಿ ವೀಕ್ಷಣೆಯ ಕ್ಷೇತ್ರವನ್ನು ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ 10x ಡಿಜಿಟಲ್ ಜೂಮ್, ಗೂಗಲ್ ಲೆನ್ಸ್, ಇಐಎಸ್, ಎಚ್‌ಡಿಆರ್, ಇನ್-ರೆಕಾರ್ಡಿಂಗ್ ಸ್ನ್ಯಾಪ್‌ಶಾಟ್‌ಗಳು, ಎಲ್ಇಡಿ ಫ್ಲ್ಯಾಷ್, ಲೈಟ್ ಟ್ರೇಸ್ ಮೋಡ್, ಸೂಪರ್ ನೈಟ್ ಮೋಡ್, ಸೂಪರ್ ಸ್ಟೆಡಿ ಮೋಡ್, ವೈಡ್-ಆಂಗಲ್ ಮೋಡ್, ಸ್ಟಾಪ್ ಮೋಷನ್ ಮೋಡ್ ಅನ್ನು ನೀಡಲಾಗಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇದು 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5 ಎಂಎಂ ಆಡಿಯೊ ಜ್ಯಾಕ್, ಯುಎಸ್‌ಬಿ ಟೈಪ್-ಸಿ ಪೋರ್ಟ್, 4G, 5G, ವೈ-ಫೈ ಎಸಿ, ಬ್ಲೂಟೂತ್ ವಿ 5.1 ಮತ್ತು ಹೆಚ್ಚಿನವು ಸೇರಿವೆ.

TCL 20 SE ವಿಶೇಷತೆ ಏನು?
ಟಿಸಿಎಲ್ 20SE ಸ್ಮಾರ್ಟ್‌ಫೋನ್ 6.82-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ವಾಟರ್‌ಡ್ರಾಪ್-ಶೈಲಿಯ ವಿನ್ಯಾಸವನ್ನು ಹೊಂದಿದ್ದು, 263PP ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 460 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು 4GB RAM+ 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಜೊತೆಗೆ ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್ ವೈಡ್-ಆಂಗಲ್ ಲೆನ್ಸ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೂಪರ್-ವೈಡ್-ಆಂಗಲ್ ಕ್ಯಾಮೆರಾ, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
TCL 20 5G ಸ್ಮಾರ್ಟ್‌ಫೋನ್ ಬೆಲೆ ಯೂರೋ 299 (ಸುಮಾರು ರೂ. 26,600) ಆಗಿದೆ. ಇದು ಮಿಸ್ಟ್ ಗ್ರೇ ಮತ್ತು ಪ್ಲ್ಯಾಸಿಡ್ ಬ್ಲೂ ಕಲರ್ ಆಯ್ಕೆಗಳಲ್ಲಿ ಬಿಡುಗಡೆಯಾಗಿದೆ. ಇನ್ನು TCL 20SE ಯುರೋ 149 (ಸುಮಾರು 13,200 ರೂ.) ಬೆಲೆಯನ್ನು ಹೊಂದಿದೆ. ಇದು ನ್ಯೂಟ್ ಬ್ಲ್ಯಾಕ್ ಮತ್ತು ಅರೋರಾ ಗ್ರೀನ್ ಬಣ್ಣ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications