ಲೀಕ್‌ ಆಯ್ತು ಪೊಕೊ X5 ಪ್ರೊ ಫೀಚರ್ಸ್‌! :ಲಾಂಚ್‌ ಡೇಟ್‌ ಫಿಕ್ಸ್‌!

|

ಪೊಕೊ ಕಂಪೆನಿ ಶೀಘ್ರದಲ್ಲೇ ತನ್ನ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ತಯಾರಿ ನಡೆಸಿದೆ. ಇದನ್ನು ಪೊಕೊ X5 ಪ್ರೊ ಸ್ಮಾರ್ಟ್‌ಫೋನ್‌ ಎಂದು ಹೆಸರಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ ಇದೇ ಜನವರಿ ಮತ್ತು ಫೆಬ್ರವರಿ ನಡುವೆ ಪ್ರಾರಂಭವಾಗಬಹುದು ಎಂದು ನಿರೀಕ್ಷಿಸಲಾಗಿದೆ. ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 778G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಅಂದಾಜಿಸಲಾಗಿದೆ. ಹಾಗೆಯೇ 12GB RAM ಮತ್ತು 512GB ಇನ್‌ಬಿಲ್ಟ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿರುವ ಸಾಧ್ಯತೆಯಿದೆ.

ಪೊಕೊ

ಹೌದು, ಪೊಕೊ ಕಂಪೆನಿ ಪೊಕೊ X5 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಹೇಗಿರಲಿದೆ ಅನ್ನೊದು ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಅದರಂತೆಈ ಸ್ಮಾರ್ಟ್‌ಫೋನ್ ಅನ್ನು ಫೆಬ್ರವರಿ 6 ರಂದು ಅನಾವರಣಗೊಳಿಸಲಾಗುವುದು ಎಂದು ಕಂಪೆನಿ ತಿಳಿಸಿದೆ.

ಡಿಸ್‌ಪ್ಲೇ ಹೇಗಿರಬಹುದು?

ಡಿಸ್‌ಪ್ಲೇ ಹೇಗಿರಬಹುದು?

ಪೊಕೊ X5 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ಹೆಚ್‌ಡಿ ಪ್ಲಸ್‌ OLED ಡಿಸ್‌ಪ್ಲೇಯನ್ನು ಹೊಂದಿರಲಿದೆ ಎಂಬ ವರದಿಯಿದೆ. ಈ ಡಿಸ್‌ಪ್ಲೇ 1080×2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಬೆಂಬಲಿಸಲಿದೆ. ಅಲ್ಲದೆ 120Hz ಅಡಾಪ್ಟಿವ್ ರಿಫ್ರೆಶ್ ರೇಟ್‌, HDR10+ ಬೆಂಬಲವನ್ನು ನೀಡಬಹುದು.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಪೊಕೊ X5 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 13ನಲ್ಲಿ ರನ್‌ ಆಗಲಿದೆ ಎಂದು ಹೇಳಲಾಗಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 12GB RAM ಮತ್ತು 512GB ವರೆಗಿನ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದೊಂದಿಗೆ ಬರಬಹುದು ಎಂದು ನಿರೀಕ್ಷಿಸಲಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿರಬಹುದು?

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿರಬಹುದು?

ಪೊಕೊ X5 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿರಲಿದೆ ಅನ್ನೊದು ಪಕ್ಕಾ ಆಗಿದೆ. ಇದರ ಮುಖ್ಯ ಕ್ಯಾಮೆರಾ 108MP ಸೆನ್ಸಾರ್‌, ಎರಡನೇ ಕ್ಯಾಮೆರಾ 8MP ಅಲ್ಟ್ರಾ-ವೈಡ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2MP ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ 16MP ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಪೊಕೊ X5 ಪ್ರೊ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರಬಹುದು. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಬಹುದು ಎಂದು ಅಂದಾಜಿಸಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಈ ಸ್ಮಾರ್ಟ್‌ಫೋನ್‌ ಬೆಲೆ ಎಷ್ಟಿರಲಿದೆ ಅನ್ನೊದು ಇನ್ನು ಬಹಿರಂಗವಾಗಿಲ್ಲ. ಈ ಸ್ಮಾರ್ಟ್‌ಫೋನ್ ಅನ್ನು ಫೆಬ್ರವರಿ 6 ರಂದು ಅನಾವರಣಗೊಳಿಸಲಾಗುವುದು ಎಂದು ಕಂಪೆನಿ ತಿಳಿಸಿದೆ.

ಪೊಕೊ

ಇದಲ್ಲದೆ ಪೊಕೊ ಕಂಪೆನಿ ತನ್ನ ಸಿ ಸರಣಿಯಲ್ಲಿ ಹೊಸ ಪೊಕೊ C50 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಿರುವ ಈ ಸ್ಮಾರ್ಟ್‌ಫೋನ್‌ 6.52 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,600x700 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ಚಾರ್ಜಿಂಗ್ ಬೆಂಬಲಿಸುವುದು ಈ ಫೋನ್‌ನ ಪ್ರಮುಖ ಹೈಲೈಟ್‌ ಆಗಿದೆ. ಇನ್ನು ಫೋನ್‌ ಕೈಗೆಟಕುವ ಬೆಲೆಯನ್ನು ಹೊಂದಿದ್ದು, ಕಂಟ್ರಿ ಗ್ರೀನ್ ಮತ್ತು ರಾಯಲ್ ಬ್ಲೂ ಕಲರ್‌ ಆಯ್ಕೆಗಳಲ್ಲಿ ದೊರೆಯಲಿದೆ

Best Mobiles in India

English summary
Poco X5 Pro launch in India soon: Expected Specifications

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X