ಸ್ಟೈಲಿಶ್ ಲುಕ್ ಇರುವ CMF Phone 1 ಬೆಲೆಯಲ್ಲಿ ಸಖತ್ ಇಳಿಕೆ!,,ಬ್ಯಾಂಕ್ ಆಫರ್ ಇದೆ!
ನಥಿಂಗ್ ಮೊಬೈಲ್ ಸಂಸ್ಥೆಯ ಸಬ್ ಬ್ರ್ಯಾಂಡ್ ಆಗಿರುವ CMF ಬಿಡುಗಡೆ ಮಾಡಿರುವ ಮೊದಲ ಫೋನ್ CMF Phone 1 ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳದಿದೆ. ಈ ಮೊಬೈಲ್ ಬಜೆಟ್ ವಿಭಾಗದಲ್ಲಿ ಕಾಣಿಸಿಕೊಂಡಿದ್ದು, ಬ್ಯಾಕ್ ಪ್ಯಾನೆಲ್ ಬದಲಾಯಿಸುವ ಆಯ್ಕೆ ಪಡೆದಿದೆ. ಸದ್ಯ CMF Phone 1 ಫೋನ್ ಫ್ಲಿಪ್‌ಕಾರ್ಟ್ ತಾಣದಲ್ಲಿ ಭಾರೀ ಆಕರ್ಷಕ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ.
ಹೌದು, ಫ್ಲಿಪ್‌ಕಾರ್ಟ್ ತಾಣದಲ್ಲಿ CMF Phone 1 ಫೋನ್ ಶೇ. 22% ರಷ್ಟು ನೇರ ಡಿಸ್ಕೌಂಟ್ ಪಡೆದಿದೆ. ಈ ಮೊಬೈಲ್‌ನ 6 GB RAM + 128 GB ಸ್ಟೋರೇಜ್ ವೇರಿಯಂಟ್ ಅನ್ನು ಗ್ರಾಹಕರು 15,499 ರೂ. ಗಳ ಕೊಡುಗೆಯ ಬೆಲೆಯಲ್ಲಿ ಖರೀದಿ ಮಾಡಬಹುದು. ಅಲ್ಲದೇ ಹೆಚ್ಚುವರಿ ಯಾಗಿ ಆಯ್ದ ಬ್ಯಾಂಕ್‌ಗಳ ಆಫರ್ ಪಡೆದುಕೊಂಡರೆ, ಮತ್ತಷ್ಟು ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಸಲು ಅವಕಾಶ ಸಹ ಇದೆ.

CMF Phone 1 ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಬೆಂಬಲ ಒಳಗೊಂಡಿದ್ದು, ಇದರ ಜೊತೆಗೆ ಬ್ಲ್ಯಾಕ್ ಹಾಗೂ ವೈಟ್ ಕಲರ್ ಆಯ್ಕೆ ಪಡೆದಿದೆ. ಅಲ್ಲದೇ ಈ ಸ್ಟೈಲಿಶ್ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ. ಇನ್ನುಳಿದಂತೆ CMF Phone 1 ಮೊಬೈಲ್‌ನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
CMF Phone 1 ಫೋನ್ ಫೀಚರ್ಸ್
CMF Phone 1 ಫೋನ್ 6.7 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದು 2000 nits ಬ್ರೈಟ್ನೆಸ್ ಸಾಮರ್ಥ್ಯ ಪಡೆದುಕೊಂಡಿದೆ. ಅಲ್ಲದೇ 120 Hz ರಿಫ್ರೆಶ್ ರೇಟ್ ಆಯ್ಕೆ ಒಳಗೊಂಡಿದ್ದು, ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಮಾಡುತ್ತದೆ.
CMF Phone 1 ಫೋನ್ 6 GB RAM + 128 GB ಹಾಗೂ 8 GB RAM + 128 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಡ್ಯುಯಲ್ ಕ್ಯಾಮೆರಾ ರದನೆ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಈ ಫೋನಿನ ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್ ಸೌಲಭ್ಯ ಹೊಂದಿದೆ. ಇದರ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಸೌಲಭ್ಯ ಪಡೆದಿದೆ.
CMF Phone 1 ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಕೂಡಾ ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 33 W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆ ಗಳಲ್ಲಿ ಈ ಮೊಬೈಲ್ ಡ್ಯುಯಲ್ 4G VoLTE, ವೈ ಫೈ 6, ಜಿಪಿಎಸ್, ಯುಎಸ್‌ಬಿ ಟೈಪ್ ಸಿ, ಸೈಡ್ ಮೌಂಟ್ ಫಿಂಗರ್‌ಫ್ರಿಂಟ್ ಸೆನ್ಸಾರ್ ಆಯ್ಕೆಗಳನ್ನು ಒಳಗೊಂಡಿದೆ. ಅಲ್ಲದೇ ಫೋನಿನ ಬ್ಯಾಕ್ ಕವರ್ ಬದಲಾಯಿಸುವ ಸೌಲಭ್ಯ ಈ ಫೋನಿನ ಹೈಲೈಟ್ ಸಂಗತಿ ಆಗಿ ಕಾಣಿಸಿದೆ.


Click it and Unblock the Notifications








