ಇಂದು CMF Phone 1 ಫಸ್ಟ್ ಸೇಲ್; ಬೊಂಬಾಟ್ ಫೀಚರ್ಸ್, ಬೆಲೆಯೂ ಕಡಿಮೆ!
ನಥಿಂಗ್ ಮೊಬೈಲ್ ಸಂಸ್ಥೆಯ ಸಬ್‌ಬ್ರ್ಯಾಂಡ್ ಆಗಿರುವ CMF ಕಂಪನಿಯು ತನ್ನ ಬಹುನಿರೀಕ್ಷಿತ CMF Phone 1 ಸ್ಮಾರ್ಟ್‌ಫೋನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿ ಸದ್ದು ಮಾಡಿದೆ. ನೂತನವಾಗಿ ಲಗ್ಗೆ ಇಟ್ಟಿರುವ ಈ ಫೋನ್ ಡಿಸೈನ್ ಹಾಗೂ ಪ್ರೈಸ್‌ಟ್ಯಾಗ್‌ನಿಂದ ಈಗಾಗಲೇ ಮೊಬೈಲ್ ಪ್ರಿಯರ ಚಿತ್ತ ಸೆಳೆದಿದೆ. ಅಂದಹಾಗೆ ಈ ಮೊಬೈಲ್ ಇಂದು (ಜುಲೈ 12 ರಂದು) ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಮೊದಲ ಮಾರಾಟ ಪ್ರಾರಂಭ ಮಾಡಲಿದೆ. ಇನ್ನು ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಚಿಪ್‌ಸೆಟ್ ಪ್ರೊಸೆಸರ್ ಪಡೆದಿದೆ.
ಹೌದು, CMF ಸಂಸ್ಥೆಯ CMF Phone 1 ಸ್ಮಾರ್ಟ್‌ಫೋನ್ ಇಂದು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಮೂಲಕ ಮಧ್ಯಾಹ್ನ 12 ಗಂಟೆಗೆ ಫಸ್ಟ್ ಸೇಲ್ ಶುರು ಮಾಡಲಿದೆ. ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಜೊತೆಗೆ ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಇನ್ನು ಈ ಮೊಬೈಲ್‌ನ ಆರಂಭಿಕ ವೇರಿಯಂಟ್ ಬೆಲೆಯು 15,999ರೂ. ಗಳು ಆಗಿದೆ.

ಹಾಗೆಯೇ ಈ ಮೊಬೈಲ್ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಇದು 33W ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಹೊಂದಿದೆ. ಅಲ್ಲದೇ ಗ್ರಾಹಕರು ಈ ಫೋನ್ ಬ್ಲ್ಯಾಕ್, ಲೈಟ್ ಗ್ರೀನ್, ಬ್ಲೂ ಮತ್ತು ಆರೆಂಜ್ ಕಲರ್ ಆಯ್ಕೆಯಲ್ಲಿ ಈ ಫೋನ್ ಖರೀದಿಸಬಹುದು. ಇನ್ನುಳಿದಂತೆ CMF Phone 1 ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.
CMF Phone 1 - ಫೀಚರ್ಸ್ ಹೀಗಿವೆ
CMF Phone 1 ಫೋನ್ 6.7 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2000nits ಬ್ರೈಟ್ನೆಸ್ ಸಾಮರ್ಥ್ಯ ಪಡೆದಿದೆ. ಅಲ್ಲದೇ 120Hz ರಿಫ್ರೆಶ್ ರೇಟ್ ಆಯ್ಕೆ ಒಳಗೊಂಡಿದ್ದು, ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಮಾಡುತ್ತದೆ.
CMF Phone 1 ಫೋನ್ 6GB RAM + 128GB ಹಾಗೂ 8GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್ ಸೌಲಭ್ಯ ಹೊಂದಿದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಸೌಲಭ್ಯ ನೀಡಲಾಗಿದೆ.
CMF Phone 1 ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಹೊಂದಿದ್ದು, ಇದಕ್ಕೆ ಅನುಗುಣವಾಗಿ 33W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಇದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ ಡ್ಯುಯಲ್ 4G VoLTE, ವೈ ಫೈ 6, ಜಿಪಿಎಸ್, ಯುಎಸ್‌ಬಿ ಟೈಪ್-ಸಿ, ಸೈಡ್ ಮೌಂಟ್ ಫಿಂಗರ್‌ಫ್ರಿಂಟ್ ಸೆನ್ಸಾರ್ ಆಯ್ಕೆಗಳನ್ನು ಒಳಗೊಂಡಿದೆ. ಅಲ್ಲದೇ ಫೋನಿನ ಬ್ಯಾಕ್ ಕವರ್ ಬದಲಾಯಿಸುವ ಸೌಲಭ್ಯ ಈ ಫೋನಿನಲ್ಲಿ ಇದೆ.


Click it and Unblock the Notifications








