ಇಂದು CMF Phone 1 ಫೋನಿನ ಸೇಲ್; ಇದರ ಸ್ಟೈಲ್ ಬೇರೇನೇ ಇದೆ!
ಮಾರುಕಟ್ಟೆಯ ಗಮನ ಸೆಳೆದಿದೆ. ಅಂದಹಾಗೆ ಈ ಮೊಬೈಲ್ ಇಂದು (ಜುಲೈ 17 ರಂದು) ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದ ಮೂಲಕ ಮೊದಲ ಮಾರಾಟ ಪ್ರಾರಂಭ ಮಾಡಲಿದೆ. ಇನ್ನು ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಚಿಪ್‌ಸೆಟ್ ಪ್ರೊಸೆಸರ್ ಹೊಂದಿದೆ.
ಹೌದು, CMF ಸಂಸ್ಥೆಯ CMF Phone 1 ಸ್ಮಾರ್ಟ್‌ಫೋನ್ ಇಂದು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಮೂಲಕ ಮಧ್ಯಾಹ್ನ 12 ಗಂಟೆಗೆ ಫಸ್ಟ್ ಸೇಲ್ ಶುರು ಮಾಡಲಿದೆ. ಈ ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಜೊತೆಗೆ ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಇನ್ನು ಈ ಮೊಬೈಲ್‌ನ ಆರಂಭಿಕ ವೇರಿಯಂಟ್ ಬೆಲೆಯು 15,999ರೂ. ಗಳು ಆಗಿದೆ.

ಹಾಗೆಯೇ ಈ ಸ್ಮಾರ್ಟ್‌ಫೋನ್ 6GB RAM + 128 GB ಹಾಗೂ 8GB RAM + 128 GB ಸ್ಟೋರೇಜ್ ವೇರಿಯಂಟ್ ಹೊಂದಿದೆ. ಇದು ಬ್ಲ್ಯಾಕ್, ಲೈಟ್ ಗ್ರೀನ್, ಬ್ಲೂ ಮತ್ತು ಆರೆಂಜ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ. ಅಲ್ಲದೇ ಇದರ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಇದು 33 W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ವನ್ನು ಪಡೆದಿದೆ. ಹಾಗಾದರೇ CMF Phone 1 ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.
CMF Phone 1 - ಫೀಚರ್ಸ್ ಮಾಹಿತಿ
CMF Phone 1 ಮೊಬೈಲ್ 6.7 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದು 2000 nits ಬ್ರೈಟ್ನೆಸ್ ಸಾಮರ್ಥ್ಯ ಹೊಂದಿದೆ. ಅಲ್ಲದೇ 120 Hz ರಿಫ್ರೆಶ್ ರೇಟ್ ಆಯ್ಕೆ ಒಳಗೊಂಡಿದ್ದು, ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಅಲ್ಲದೇ ಇದು ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಮಾಡುತ್ತದೆ.
CMF Phone 1 ಮೊಬೈಲ್ 6 GB RAM + 128 GB ಹಾಗೂ 8 GB RAM + 128 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್ ಸೌಲಭ್ಯ ಹೊಂದಿದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಸೌಲಭ್ಯ ನೀಡಲಾಗಿದೆ.
CMF Phone 1 ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಹೊಂದಿದ್ದು, ಇದಕ್ಕೆ ಪೂರಕವಾಗಿ 33W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್ ಡ್ಯುಯಲ್ 4G VoLTE, ವೈ ಫೈ 6, ಜಿಪಿಎಸ್, ಯುಎಸ್‌ಬಿ ಟೈಪ್ ಸಿ, ಸೈಡ್ ಮೌಂಟ್ ಫಿಂಗರ್ ಫ್ರಿಂಟ್ ಸೆನ್ಸಾರ್ ಆಯ್ಕೆಗಳನ್ನು ಒಳಗೊಂಡಿದೆ. ಅಲ್ಲದೇ ಫೋನಿನ ಬ್ಯಾಕ್ ಕವರ್ ಬದಲಾಯಿಸುವ ಆಯ್ಕೆ ಈ ಫೋನಿನಲ್ಲಿ ಇರುವುದು ವಿಶೇಷ ಆಗಿದೆ.


Click it and Unblock the Notifications








