ನಾಳೆ CMF Phone 1 ಮೊಬೈಲ್ ಸೇಲ್ ಮತ್ತೆ ಪ್ರಾರಂಭ; ಬಜೆಟ್ ಬೆಲೆಯಲ್ಲಿ ಲಭ್ಯ!
ನಥಿಂಗ್ ಮೊಬೈಲ್ ಸಂಸ್ಥೆಯ ಸಬ್‌ಬ್ರ್ಯಾಂಡ್ ಆಗಿರುವ CMF ಸಂಸ್ಥೆಯ ಹೊಸ CMF Phone 1 ಸ್ಮಾರ್ಟ್‌ಫೋನ್ ಈಗಾಗಲೇ ಭಿನ್ನ ಡಿಸೈನ್ ಹಾಗೂ ಬೆಲೆಯಿಂದ ಮಾರುಕಟ್ಟೆಯ ಗಮನ ಸೆಳೆದಿದೆ. ಅಂದಹಾಗೆ ಈ ಮೊಬೈಲ್ ನಾಳೆ (ಜುಲೈ 17 ರಂದು) ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದ ಮೂಲಕ ಮೊದಲ ಮಾರಾಟ ಪ್ರಾರಂಭ ಮಾಡಲಿದೆ. ಇನ್ನು ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಚಿಪ್‌ಸೆಟ್ ಪ್ರೊಸೆಸರ್ ಪಡೆದಿದೆ.
ಹೌದು, CMF ಸಂಸ್ಥೆಯ CMF Phone 1 ಸ್ಮಾರ್ಟ್‌ಫೋನ್ ಇಂದು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಮೂಲಕ ಮಧ್ಯಾಹ್ನ 12 ಗಂಟೆಗೆ ಫಸ್ಟ್ ಸೇಲ್ ಶುರು ಮಾಡಲಿದೆ. ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಜೊತೆಗೆ ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಇನ್ನು ಈ ಮೊಬೈಲ್‌ನ ಆರಂಭಿಕ ವೇರಿಯಂಟ್ ಬೆಲೆಯು 15,999 ರೂ. ಗಳು ಆಗಿದೆ.

ಹಾಗೆಯೇ ಈ ಸ್ಮಾರ್ಟ್‌ಫೋನ್ 6GB RAM + 128GB ಹಾಗೂ 8GB RAM + 128GB ಸ್ಟೋರೇಜ್ ವೇರಿಯಂಟ್ ಹೊಂದಿದೆ. ಇದು ಬ್ಲ್ಯಾಕ್, ಲೈಟ್ ಗ್ರೀನ್, ಬ್ಲೂ ಮತ್ತು ಆರೆಂಜ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ. ಅಲ್ಲದೇ ಇದರ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಇದು 33W ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಹಾಗಾದರೇ CMF Phone 1 ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.
CMF Phone 1 - ಫೀಚರ್ಸ್ ಮಾಹಿತಿ
CMF Phone 1 ಮೊಬೈಲ್ 6.7 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದು 2000 nits ಬ್ರೈಟ್ನೆಸ್ ಸಾಮರ್ಥ್ಯ ಹೊಂದಿದೆ. ಅಲ್ಲದೇ 120Hz ರಿಫ್ರೆಶ್ ರೇಟ್ ಆಯ್ಕೆ ಒಳಗೊಂಡಿದ್ದು, ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಅಲ್ಲದೇ ಇದು ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಮಾಡುತ್ತದೆ.
CMF Phone 1 ಮೊಬೈಲ್ 6GB RAM + 128GB ಹಾಗೂ 8GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್ ಸೌಲಭ್ಯ ಹೊಂದಿದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಸೌಲಭ್ಯ ನೀಡಲಾಗಿದೆ.
CMF Phone 1 ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಹೊಂದಿದ್ದು, ಇದಕ್ಕೆ ಪೂರಕವಾಗಿ 33W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್ ಡ್ಯುಯಲ್ 4G VoLTE, ವೈ ಫೈ 6, ಜಿಪಿಎಸ್, ಯುಎಸ್‌ಬಿ ಟೈಪ್ ಸಿ, ಸೈಡ್ ಮೌಂಟ್ ಫಿಂಗರ್‌ಫ್ರಿಂಟ್ ಸೆನ್ಸಾರ್ ಆಯ್ಕೆಗಳನ್ನು ಒಳಗೊಂಡಿದೆ. ಅಲ್ಲದೇ ಫೋನಿನ ಬ್ಯಾಕ್ ಕವರ್ ಬದಲಾಯಿಸುವ ಆಯ್ಕೆ ಈ ಫೋನಿನಲ್ಲಿ ಇರುವುದು ವಿಶೇಷ ಆಗಿದೆ.


Click it and Unblock the Notifications








