Home
ಸುದ್ದಿಜಾಲ

2TB ಸ್ಟೋರೇಜ್‌ ಆಯ್ಕೆ ಇರುವ ಈ ಸ್ಟೈಲಿಶ್‌ ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

ಹೊಸ ಮೊಬೈಲ್‌ ಖರೀದಿಸುವ ಬಹುತೇಕ ಗ್ರಾಹಕರು ಫೋನ್‌ ಖರೀದಿಗೂ ಮುನ್ನ ಆನ್‌ಲೈನ್‌ ಶಾಪಿಂಗ್‌ ತಾಣಗಳನ್ನು ಗಮನಿಸುತ್ತಾರೆ. ಏಕೆಂದರೆ, ಇ ಕಾಮರ್ಸ್‌ ವೆಬ್‌ಸೈಟ್‌ಗಳು ಮೊಬೈಲ್‌ಗಳಿಗೆ ಒಂದಿಲ್ಲೊಂದು ಡಿಸ್ಕೌಂಟ್‌ ಲಭ್ಯ ಮಾಡಿರುತ್ತವೆ. ಸದ್ಯ ಇ ಕಾಮರ್ಸ್‌ ದೈತ್ಯ ಫ್ಲಿಪ್‌ಕಾರ್ಟ್‌ ತಾಣದಲ್ಲಿ CMF Phone 1 ಫೋನ್‌ ಸ್ಮಾರ್ಟ್‌ಫೋನ್‌ ಸಖತ್ ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ ಇದೆ.

ಹೌದು, ಫ್ಲಿಪ್‌ಕಾರ್ಟ್‌ ತಾಣದಲ್ಲಿ CMF Phone 1 ಮೊಬೈಲ್ ಶೇ. 25% ರಷ್ಟು ನೇರ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಈ ಫೋನಿನ 6GB RAM + 128 GB ವೇರಿಯಂಟ್‌ 14,999ರೂ. ಗಳ ಕೊಡುಗೆಯ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದರ ಜೊತೆಗೆ ಲಭ್ಯ ಇರುವ ಬ್ಯಾಂಕ್‌ ಆಫರ್‌ ಹಾಗೂ ಎಕ್ಸ್‌ಚೇಂಜ್ ಆಫರ್‌ ಕೂಡಾ ಪಡೆದುಕೊಂಡರೆ, ಗ್ರಾಹಕರು ಇನ್ನಷ್ಟು ರಿಯಾಯಿತಿ ಪಡೆಯಲು ಅವಕಾಶ ಸಿಗಲಿದೆ.

2TB ಸ್ಟೋರೇಜ್‌ ಆಯ್ಕೆ ಇರುವ ಈ ಸ್ಟೈಲಿಶ್‌ ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

CMF Phone 1 ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಒಳಗೊಂಡಿದ್ದು, ಇದರ ಜೊತೆಗೆ ಬ್ಲ್ಯಾಕ್‌ ಹಾಗೂ ವೈಟ್‌ ಕಲರ್‌ ಆಯ್ಕೆ ಪಡೆದಿದೆ. ಹಾಗೆಯೇ ಈ ಭಿನ್ನ ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದಿದ್ದು, ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಆಗಿದೆ. ಇನ್ನುಳಿದಂತೆ CMF Phone 1 ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

CMF Phone 1 - ಫೀಚರ್ಸ್‌ ಹೀಗಿವೆ

CMF Phone 1 ಮೊಬೈಲ್‌ 6.7 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದು 2000 nits ಬ್ರೈಟ್ನೆಸ್‌ ಸಾಮರ್ಥ್ಯ ಒಳಗೊಂಡಿದೆ. ಅಲ್ಲದೇ 120 Hz ರಿಫ್ರೆಶ್ ರೇಟ್‌ ಆಯ್ಕೆ ಒಳಗೊಂಡಿದ್ದು, ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯ ಮಾಡಲಿದೆ. ಅಲ್ಲದೇ ಇದು ಇತ್ತೀಚಿನ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಸಹ ಮಾಡುತ್ತದೆ. ಅಲ್ಲದೇ ಇದು 2 TB ವರೆಗೂ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆ ಪಡೆದಿದೆ.

CMF Phone 1 ಮೊಬೈಲ್‌ 6 GB RAM + 128 GB ಹಾಗೂ 8 GB RAM + 128 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಈ ಫೋನಿನ ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸರ್ ಸೌಲಭ್ಯ ಹೊಂದಿದೆ. ಇದರ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಸೌಲಭ್ಯ ಒಳಗೊಂಡಿದೆ.

CMF Phone 1 ಮೊಬೈಲ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದಿದ್ದು, ಇದಕ್ಕೆ ಅನುಗುಣವಾಗಿ 33 W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆ ಗಳಲ್ಲಿ ಈ ಮೊಬೈಲ್‌ ಡ್ಯುಯಲ್ 4G VoLTE, ವೈ ಫೈ 6, ಜಿಪಿಎಸ್‌, ಯುಎಸ್‌ಬಿ ಟೈಪ್ ಸಿ, ಸೈಡ್‌ ಮೌಂಟ್‌ ಫಿಂಗರ್‌ಫ್ರಿಂಟ್ ಸೆನ್ಸಾರ್ ಆಯ್ಕೆಗಳನ್ನು ಒಳಗೊಂಡಿದೆ. ಅಲ್ಲದೇ ಫೋನಿನ ಬ್ಯಾಕ್‌ ಕವರ್‌ ಬದಲಾಯಿಸುವ ಸೌಲಭ್ಯ ಈ ಫೋನಿನ ಹೈಲೈಟ್‌ ಪಾಯಿಂಟ್‌ ಎನಿಸಿದೆ.

Best Mobiles in India

English summary
CMF Phone 1 Now Available at Biggest Price Drop in India. check out offers, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+