ಬಾರತದಲ್ಲಿ ಕೈಗೆಟಕುವ ಬೆಲೆಯ ಕೂಲ್‌ಪ್ಯಾಡ್‌ ಕೂಲ್‌6 ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಟೆಕ್‌ ವಲಯದಲ್ಲಿ ಸಾಕಷ್ಟು ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಪ್ರತಿನಿತ್ಯ ಹೊಸ ಸ್ಮಾರ್ಟ್‌ಫೋನ್‌ಗಳ ಭರಾಟೆ ಜೋರಾಗಿಯೇ ನಡೆಯುತ್ತದೆ. ಸದ್ಯ ಇದೀಗ ಕೂಲ್‌ಪ್ಯಾಡ್ ಕಂಪೆನಿ ತನ್ನ ಹೊಸ ಕೂಲ್‌ಪ್ಯಾಡ್‌ ಕೂಲ್ 6 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ "High-end mobile gaming" ಗಾಗಿ ಕೆಲವು ಅತ್ಯುತ್ತಮ ಸುಧಾರಿತ ಫೀಚರ್ಸ್‌ಗಳನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬಜೆಟ್ ಸ್ನೇಹಿ ಸ್ಮಾರ್ಟ್‌ಫೋನ್ ಆಗಿದೆ.

ಕೂಲ್‌ಪ್ಯಾಡ್‌

ಹೌದು, ಕೂಲ್‌ಪ್ಯಾಡ್‌ ಕಂಪೆನಿ ತನ್ನ ಹೊಸ ಕೂಲ್‌ 6 ಸ್ಮಾರ್ಟ್‌ಫೋನ್‌ ಅನ್ನು ಬಜೆಟ್‌ ಬೆಲೆಯಲ್ಲಿ ಪರಿಚಯಿಸಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಸೆಲ್ಫಿ ಕ್ಯಾಮೆರಾಕ್ಕಾಗಿ ಪಾಪ್-ಅಪ್ ಮಾಡ್ಯೂಲ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್‌ ಹಿಲಿಯೋ P70SoC ಪ್ರೊಸೆಸರ್‌ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಕೂಲ್‌ಪ್ಯಾಡ್‌ ಕೂಲ್‌6 ಸ್ಮಾರ್ಟ್‌ಫೋನ್‌ 2340 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಹೊಂದಿದ್ದು, ಇದು 6.53-ಇಂಚಿನ ಫುಲ್‌ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 19: 5: 9 ರಚನೆಯ ಅನುಪಾತವನ್ನು ಹೊಂದಿದೆ. ಅಲ್ಲದೆ ಸ್ಕ್ರೀನ್‌ ಟು ಬಾಡಿ 93% ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌ ಸಾಮರ್ಥ್ಯ

ಪ್ರೊಸೆಸರ್‌ ಸಾಮರ್ಥ್ಯ

ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P70 ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು,ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 4GB RAM+64GBಮತ್ತು 6GBRAM+128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಹ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ ವಿಶೇಷತೆ

ಕ್ಯಾಮೆರಾ ವಿಶೇಷತೆ

ಕೂಲ್‌ಪ್ಯಾಡ್ ಕೂಲ್ 6 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡು ಮತ್ತು ಮೂರು 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದ್ದು, ಫ್ಲ್ಯಾಷ್‌ ಬೆಂಬಲವನ್ನು ಹೊಂದಿವೆ. ಇದಲ್ಲದೆ ಪಾಪ್-ಅಪ್ ವಿನ್ಯಾಸದಲ್ಲಿ 21 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್, ಯುಎಸ್‌ಬಿ ಒಟಿಜಿ ಬೆಂಬಲ ಮತ್ತು ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ರಿಯರ್‌ ಫಿಂಗರ್‌ ಪ್ರಿಂಟ್‌ ಸ್ಕ್ಯಾನರ್‌ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಕೂಲ್‌ಪ್ಯಾಡ್ ಕೂಲ್ 6 ಭಾರತದಲ್ಲಿ 4GB + 64GB ಶೇಖರಣಾ ಮಾದರಿಗೆ 10,999 ರೂ.,ಬೆಲೆಯನ್ನು ಹೊಂದಿದ್ದು, 6GB + 128GB ಶೇಖರಣಾ ಮಾದರಿಗೆ 12,999 ರೂ.ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ನೀಲಿ ಮತ್ತು ಸಿಲ್ವರ್‌ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Coolpad Cool 6 smartphone has been launched in India as a follow up to Coolpad Cool 5 released in October last year.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X