ಆ ಜನಪ್ರಿಯ ಫೋನಿನ ತರಹವೇ ಇರುವ ಈ ಫೋನ್ ಬೆಲೆಯಲ್ಲಿ ಸಖತ್ ಇಳಿಕೆ!
ಟೆಕ್ನೋ ಮೊಬೈಲ್ ಕಂಪನಿಯು ಬಜೆಟ್ ಹಾಗೂ ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್ ಮಾಡೆಲ್‌ಗಳ ಮೂಲಕ ಮಾರುಕಟ್ಟೆಯಲ್ಲಿ ತನ್ನದೇ ಛಾಪು ಮೂಡಿಸಿದೆ. ಆ ಪೈಕಿ ಜನಪ್ರಿಯ ನಥಿಂಗ್ ಸ್ಮಾರ್ಟ್‌ಫೋನಿನಂತೆ ಕಾಣಿಸುವ ಟೆಕ್ನೋ ಸಂಸ್ಥೆಯ ಪೋವಾ 5 ಪ್ರೊ 5G ಮೊಬೈಲ್ ಗ್ರಾಹಕರ ಗಮನ ಸೆಳೆದಿದೆ. ಈ ಫೋನ್ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ನಲ್ಲಿ ಇದೀಗ ಸಖತ್ ರಿಯಾಯಿತಿ ಪಡೆದಿದೆ.
ಹೌದು, ಅಮೆಜಾನ್ ಇ ಕಾಮರ್ಸ್‌ನಲ್ಲಿ ಟೆಕ್ನೋ ಸಂಸ್ಥೆಯ ಟೆಕ್ನೋ ಪೋವಾ 5 ಪ್ರೊ 5G ಮೊಬೈಲ್ ಶೇ. 25% ರಷ್ಟು ಡಿಸ್ಕೌಂಟ್ ಪಡೆದಿದೆ. ಈ ಫೋನಿನ 8GB RAM + 128GB ವೇರಿಯಂಟ್ ಫೋನ್ 19,999ರೂ. ದರ ಹೊಂದಿದ್ದು, ಆದ್ರೆ, ಕೊಡುಗೆಯಲ್ಲಿ ಈಗ 14,999 ರೂ. ಗಳಿಗೆ ಖರೀದಿಗೆ ಲಭ್ಯ ಇದೆ. ಅದಲ್ಲದೇ ಕೆಲವು ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ಡಿಸ್ಕೌಂಟ್ ಸಹ ದೊರೆಯುತ್ತದೆ.

ಅಂದಹಾಗೆ ಟೆಕ್ನೋ ಸಂಸ್ಥೆಯ ಪೋವಾ 5 ಪ್ರೊ 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿ ಇದೆ. ಹಾಗಾದರೆ ಟೆಕ್ನೋ ಪೋವಾ 5 ಪ್ರೊ 5G ಫೋನಿನ ಇತರ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಹಾಗೂ ಡಿಸೈನ್ ಮಾಹಿತಿ
ಟೆಕ್ನೋ ಪೋವಾ 5 ಪ್ರೊ ಮೊಬೈಲ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಇದರ ಡಿಸ್‌ಪ್ಲೇ 1080 x 2460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ ಈ ಡಿಸ್‌ಪ್ಲೇ 84.7% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ ಡಿಸ್‌ಪ್ಲೇ 396 ಪಿಪಿಐ ಸಾಂದ್ರತೆಯನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್ ಅನ್ನು ಸಪೋರ್ಟ್ ಹೊಂದಿದೆ.

ಪ್ರೊಸೆಸರ್ ಕಾರ್ಯವೈಖರಿ ಹೀಗಿದೆ
ಟೆಕ್ನೋದ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್ ಸಾಮರ್ಥ್ಯದ ಪವರ್ ಅನ್ನು ಪಡೆದಿದ್ದು, ಇದಕ್ಕೆ ಅನುಗುಣವಾಗಿ ಆಂಡ್ರಾಯ್ಡ್ 13 ಆಧಾರಿತ HiOS 13 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.
ಡ್ಯುಯಲ್ ಕ್ಯಾಮೆರಾ ಸೌಲಭ್ಯ
ಪೋವಾ 5 ಪ್ರೊ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ದ್ವಿತೀಯ ಕ್ಯಾಮೆರಾ AI ಸಪೋರ್ಟ್ ನಲ್ಲಿ ಇದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇನ್ನು ಸ್ಮಾರ್ಟ್‌ಫೋನ್‌ನ ರಿಯರ್ ಪ್ಯಾನಲ್‌ನಲ್ಲಿ ಅಧಿಸೂಚನೆಗಳಿಗಾಗಿ RGB LED ಲೈಟ್ ಒಳಗೊಂಡಿರುವ ಹೊಸ 'ಆರ್ಕ್ ಇಂಟರ್ಫೇಸ್' ಅನ್ನು ಪಡೆದಿದೆ.

ಬಿಗ್ ಬ್ಯಾಟರಿ ಮತ್ತು ಇತರೆ ಆಯ್ಕೆ
ಟೆಕ್ನೋ ಪೋವಾ 5 ಪ್ರೊ ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯವನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಇದು 68W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳು 5G, 4G LTE, Wi-Fi, ಬ್ಲೂಟೂತ್, NFC, GPS ಮತ್ತು A-GPS ಅನ್ನು ಒಳಗೊಂಡಿದೆ. ಇದಲ್ಲದೆ 3.5mm ಆಡಿಯೋ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಅನ್ನು ಸಹ ಹೊಂದಿದೆ.


Click it and Unblock the Notifications








