'ಆನ್‌ಲೈನ್ ಬ್ಯಾಂಕಿಂಗ್' ಮಾಹಿತಿ ಕೊರತೆ!..ಜನಸಾಮಾನ್ಯರಿಗೆ ಹೆಚ್ಚು ದೋಖಾ!

|

ಆನ್​ಲೈನ್ ಬ್ಯಾಂಕಿಂಗ್ ಕುರಿತು ಜಾಗೃತಿಯ ಕೊರತೆಯಿಂದಾಗಿ ಜನಸಾಮಾನ್ಯರು ಸೈಬರ್ ವಂಚಕರ ಬಲೆಗೆ ಹೆಚ್ಚೆಚ್ಚು ಸಿಲುಕುತ್ತಿದ್ದಾರೆ ಎಂಬುದು ಇತ್ತೀಚಿನ ಅಂಕಿಅಂಶದಿಂದ ತಿಳಿದುಬಂದಿದೆ. ಆನ್‌ಲೈನ್ ಪ್ರಪಂಚವು ಸರಳವಾಗುವುದರ ಜೊತೆಗೆ ಜನಸಾಮಾನ್ಯರಿಗೆ ಉರುಳಾಗಿದ್ದು, 1 ಲಕ್ಷ ರೂ.ಗಿಂತ ಕಡಿಮೆ ವಹಿವಾಟಿನಲ್ಲಿ ಮೋಸ ಹೋದ ಪ್ರಕರಣಗಳ ಸಂಖ್ಯೆ ಶೇ.54 ಹೆಚ್ಚಳ ಕಂಡಿದೆ ಎಂಬುದನ್ನು ಭಾರತೀಯ ರಿಸರ್ವ್ ಬ್ಯಾಂಕ್ ನೀಡಿರುವ ಅಂಕಿ-ಅಂಶಗಳು ಖಚಿತಪಡಿಸಿವೆ.

'ಆನ್‌ಲೈನ್ ಬ್ಯಾಂಕಿಂಗ್' ಮಾಹಿತಿ ಕೊರತೆ!..ಜನಸಾಮಾನ್ಯರಿಗೆ ಹೆಚ್ಚು ದೋಖಾ!

ಹೌದು, ಎಟಿಎಂ, ಕ್ರೆಡಿಟ್, ಡೆಬಿಟ್ ಮತ್ತು ನೆಟ್​ಬ್ಯಾಂಕಿಂಗ್ ಸೇವೆಗಳಿಂದ ವಂಚನೆಗೆ ಒಳಗಾದ ಅಂಕ ಸಂಖ್ಯೆಗಳನ್ನು ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡಿದೆ. ಈ ಅಂಕಿ ಅಂಶಗಳಲ್ಲಿ ತಿಳಿಸಿರುವಂತೆ, 1 ಲಕ್ಷ ರೂ.ಗಿಂತ ಕಡಿಮೆ ಮೊತ್ತದ ಪ್ರಕರಣಗಳ ಸಂಖ್ಯೆ 2017-18ರಲ್ಲಿ 32,732 ಇದ್ದದ್ದು 2018-19ರಲ್ಲಿ 50,438ಕ್ಕೆ ಹೆಚ್ಚಳವಾಗಿದೆ. ವಂಚನೆಗೊಳಗಾದ ಮೊತ್ತ 59.43 ಕೋಟಿ ರೂ.ನಿಂದ 78.04 ಕೋಟಿ ರೂ.ಗೆ ಏರಿಕೆ ಕಂಡಿದೆ ಎಂಬುದನ್ನು ಅಂಕಿ ಅಂಶಗಳು ತಿಳಿಸಿವೆ.

ಇನ್ನು ಇದೇ ವೇಳೆಯಲ್ಲಿ 1 ಲಕ್ಷ ರೂ. ಗೂ ಅಧಿಕ ಮೊತ್ತದ ವಂಚನೆಗೆ ಒಳಗಾದ 2,059 ಪ್ರಕರಣಗಳು ದೇಶಾದ್ಯಂತ ದಾಖಲಾಗಿವೆ. ಈ ಪ್ರಕರಣಗಳಲ್ಲಿ 109.56 ಕೋಟಿ ರೂ. ಸೈಬರ್ ಕಳ್ಳರ ಪಾಲಾಗಿತ್ತು. ಆದರೆ, 2018-19ರಲ್ಲಿ ಪ್ರಕರಣಗಳ ಸಂಖ್ಯೆ 1,866 ಕ್ಕೆ ಹಾಗೂ ವಂಚನೆಗೊಳಗಾದ ಒಟ್ಟು ಮೊತ್ತ 71.38 ಕೋಟಿ ರೂ.ಗೆ ಇಳಿದಿದೆ. ಅಂದರೆ ಹೆಚ್ಚು ಮೊತ್ತದ ವಂಚನೆ ಪ್ರಕರಣಗಳು ಮತ್ತು ಮೊತ್ತ ಇಳಿಮುಖವಾಗಿದೆ. ಇದಕ್ಕೆ ಸೈಬರ್ ಜಾಗೃತಿಯೇ ಕಾರಣ ಎಂದು ಹೇಳಲಾಗುತ್ತಿದೆ.

'ಆನ್‌ಲೈನ್ ಬ್ಯಾಂಕಿಂಗ್' ಮಾಹಿತಿ ಕೊರತೆ!..ಜನಸಾಮಾನ್ಯರಿಗೆ ಹೆಚ್ಚು ದೋಖಾ!

ಒಟ್ಟಾರೆಯಾಗಿ ಆನ್‌ಲೈನ್ ಬ್ಯಾಂಕಿಂಗ್ ಎಂಬುದು ಎಷ್ಟು ಸರಳವೋ ಅಷ್ಟೇ ಅಪಾಯಕಾರಿಯಾಗಿ ಬದಲಾಗಿದೆ. ಸೈಬರ್ ಅಪರಾಧಗಳ ಅಂಕಿ ಅಂಶಗಳು ಆನ್‌ಲೈನ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಅಲುಗಾಡಿಸುವಂತೆ ಮಾಡುತ್ತಿವೆ. ಹಣಕಾಸು ವ್ಯವಹಾರದಲ್ಲಿ ಜನಸಾಮಾನ್ಯರಿಗೆ ಜಾಗೃತಿ ಮೂಡಿಸದ ಪರಿಣಾಮ ಸೈಬರ್ ವಂಚನೆ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದೆ. ಹಾಗಾದರೆ, ಈ ಆನ್‌ಲೈನ್ ಪ್ರಪಂಚದಲ್ಲಿ ನಾವು ಹೇಗೆ ಜಾಗೃತವಾಗಿರಬೇಕು ಎಂಬುದನ್ನು ಮುಂದೆ ಓದಿ ತಿಳಿಯಿರಿ.

ಪರಿಚಿತ/ಅಪರಿಚಿತರಿಗೆ ಪಾಸ್ವರ್ಡ್ ಹೇಳಬೇಡಿ

ಪರಿಚಿತ/ಅಪರಿಚಿತರಿಗೆ ಪಾಸ್ವರ್ಡ್ ಹೇಳಬೇಡಿ

ಪ್ರಾಥಮಿಕ ಹಂತದಲ್ಲಿ ಪರಿಚಿತ ಅಥವಾ ಅಪರಿಚಿತ ವ್ಯಕ್ತಿಗಳಿಗೆ ನಿಮ್ಮ ಪಾಸ್ವರ್ಡ್ ಅಥವಾ ಒಟಿಪಿ ಮಾಹಿತಿಯನ್ನು ಕೊಡಲೇಬಾರದು. ನಾವು ವ್ಯಕ್ತಿಗಳ ದುರುದ್ದೇಶಗಳ ಬಗ್ಗೆ ತಿಳಿದುಕೊಳ್ಳಲು ಸಾಧ್ಯ ಇರುವುದಿಲ್ಲ. ಕುಟುಂಬದ ವ್ಯಕ್ತಿಗಳು ಮತ್ತು ಕೆಲ ವಿಶ್ವಾಸಾರ್ಹ ಸ್ನೇಹಿತರನ್ನು ಹೊರತು ಪಡಿಸಿ ಹಣಕಾಸು ಸಂಗತಿಗಳನ್ನು ಇನ್ಯಾರೊಂದಿಗೂ ಹಂಚಿಕೊಳ್ಳಬಾರದು. ನಮಗೆ ಗೊತ್ತಿರುವಂತೆ ಹೆಚ್ಚಿನ ಹಣಕಾಸು ವಂಚನೆ/ಕಳ್ಳತನ ಪರಿಚಯದವರಿಂದಲೇ ಆಗುತ್ತದೆ.

ಫೋನಿನಲ್ಲಿ ವೈಯಕ್ತಿಕ ಮಾಹಿತಿ ನೀಡಬೇಡಿ

ಫೋನಿನಲ್ಲಿ ವೈಯಕ್ತಿಕ ಮಾಹಿತಿ ನೀಡಬೇಡಿ

ಯಾರಿಗೂ ನಿಮ್ಮ ವೈಯಕ್ತಿಕ ಮಾಹಿತಿಯನ್ನು ಯಾವುದೇ ಕಾರಣಕ್ಕೂ ನೀಡಬೆಡಿ. ಸೇವೆ ಒದಗಿಸುವವರಿಗೆ ಅನವಶ್ಯಕ ವಿಷಯಗಳಿಗಾಗಿ ತೊಂದರೆ ಕೊಡಬೇಡಿ("Do not disturb") ಎಂದು ನೋಂದಣಿ ಮಾಡಿಸಿಕೊಳ್ಳಿ. ಇದರಿಂದಾಗಿ ಅನವಶ್ಯಕ ಮತ್ತು ಫೇಕ್ ಕರೆಗಳಿಂದ ತಪ್ಪಿಸಿಕೊಳ್ಳಬಹುದು. ಅಲ್ಲದೇ ವಂಚಕರಿಂದಲೂ ಮುಕ್ತಿ ಪಡೆಯಬಹುದು.

ಇ-ಮೇಲ್ ಭದ್ರತೆ

ಇ-ಮೇಲ್ ಭದ್ರತೆ

ಬ್ಯಾಂಕಿನವರು ನೀಡುವ ಇ-ಮೇಲ್ ಐಡಿಗಳನ್ನು ಸಹ ಹೆಚ್ಚು ಬಳಸಬಾರದು. ಅದರಿಂದಾಗಿ ಹೆಚ್ಚೆಚ್ಚು ಮೋಸ ಹೋಗಬೇಕಾಗುತ್ತದೆ. ಇ-ಮೇಲೆ ಮುಖಾಂತರ ಯಾವುದೇ ಸ್ಟೇಟ್ಮೆಂಟ್ ಗಳನ್ನು ತೆರೆಯಬಾರದು ಇದರಿಂದ ಅಪಾಯವೇ ಹೆಚ್ಚು. ಇ-ಮೇಲ್ ಗಳ ಮೇಲೆ ಕ್ಲಿಕ್ ಮಾಡುವುದರಿಂದ ಅವು ಬೇರೆ ವೆಬ್ಸೈಟ್ ಗೆ ಲಿಂಕ್ ಆಗುತ್ತವೆ. ಇದರಿಂದಾಗಿ ನಮ್ಮ ಅಂಕಿಅಂಶ ಹಾಗೂ ಮಾಹಿತಿಯ ಸೋರಿಕೆ ಆಗುತ್ತದೆ. ಇದರ ಜತೆ ಪ್ರಚಾರದ ಇ-ಮೇಲ್ ಗಳು ಸಹ ಬರುತ್ತವೆ. ಆದರಿಂದಾಗಿ ತುಂಬಾ ಜಾಗೂರತೆಯಿಂದ ಇರಬೇಕಾಗುತ್ತದೆ.

ಆಗಾಗ್ಗೆ ಪಾಸ್ವರ್ಡ್ ಗಳನ್ನು ಬದಲಾಯಿಸುತ್ತಿರಬೇಕು

ಆಗಾಗ್ಗೆ ಪಾಸ್ವರ್ಡ್ ಗಳನ್ನು ಬದಲಾಯಿಸುತ್ತಿರಬೇಕು

ನಾವು ಹಣಕಾಸು ವ್ಯವಹಾರದ ಸಂದರ್ಭಗಳಲ್ಲಿ ಬಳಸುವ ಪಾಸ್ವರ್ಡ್ ಗಳನ್ನು ಆಗಾಗ್ಗೆ ಬದಲಾಯಿಸುತ್ತಿರಬೇಕು. ಅದರಲ್ಲೂ ಹಿರಿಯ ನಾಗರಿಕರು ಇದನ್ನು ಖಚಿತಪಡಿಸಿಕೊಳ್ಳುತ್ತಿರಬೇಕು. ಇದರಿಂದಾಗಿ ಇನ್ನೊಬ್ಬರೂ ನಿಮ್ಮ ಪಾಸ್ವರ್ಡ್ ಊಹಿಸಲು ಸಾಧ್ಯ ಇರುವುದಿಲ್ಲ. ಇದು ಬ್ಯಾಂಕ್ ಸಂಬಂಧಿ ವ್ಯವಹಾರಗಳಲ್ಲೂ ಪಾಲಿಸಬೇಕು.

 ಶಾಪಿಂಗ್ ಮಾಡುವ ವೆಬ್ಸೈಟ್ ಗಳನ್ನು ಪರಿಶೀಲಿಸುತ್ತಿರಿ

ಶಾಪಿಂಗ್ ಮಾಡುವ ವೆಬ್ಸೈಟ್ ಗಳನ್ನು ಪರಿಶೀಲಿಸುತ್ತಿರಿ

ಶಾಪಿಂಗ್ ವೆಬ್ಸೈಟ್ ಗಳನ್ನು ಬಳಸುವಾಗ ತುಂಬಾ ಜಾಗರೂಕತೆಯಿಂದ ವ್ಯವಹರಿಸಬೇಕಾಗುತ್ತದೆ. ಏಕೆಂದರೆ ವಂಚಕರು ವೆಬ್ಸೈಟ್ ಗಳನ್ನು ಹ್ಯಾಕ್ ಮಾಡುವುದರಲ್ಲಿ ನಿಸ್ಸೀಮರಾಗಿರುತ್ತಾರೆ. ಕೆಲ ನಕಲಿ ವೆಬ್ಸೈಟ್ ಗಳಿದ್ದು ಅವುಗಳಲ್ಲಿ ಶಾಪಿಂಗ್ ಮಾಡುವುದರಿಂದ ನಿಮ್ಮ ಕ್ರೆಡಿಟ್ ಕಾರ್ಡ್ ಮಾಹಿತಿ ಎಲ್ಲವು ಅವರಿಗೆ ಲಭ್ಯವಾಗುತ್ತದೆ. ಇವೆಲ್ಲವೂ ವಂಚನೆಯ ಅನೆಕ ಮುಖಗಳಾಗಿದ್ದು ಇವುಗಳಿಂದ ತಪ್ಪಿಸಿಕೊಳ್ಳುವುದು ನಿಮ್ಮ ಕರ್ತವ್ಯ.

ಆಯಂಟಿ ವೈರಸ್(Anti Virus Software ) ಬಳಸಿ

ಆಯಂಟಿ ವೈರಸ್(Anti Virus Software ) ಬಳಸಿ

ಉತ್ತಮವಾದ ವೈರಸ್(Anti Virus Software ) ಸಾಪ್ಟವೇರ್ ಖರೀದಿಸಿ. ಇದೊಂದು ಸಮಗ್ರವಾದ ಉತ್ತಮ ತಂತ್ರಾಂಶವಾಗಿದ್ದು ಕೇವಲ ಅಂತರ್ಜಾಲ ವಿರೋಧಿ ತಂತ್ರಾಂಶ ಮಾತ್ರ ಅಲ್ಲ. ಬದಲಾಗಿ ಸಂಪೂರ್ಣವಾದ ಫೈರ್ ವಾಲ್ ರಕ್ಷಣೆಯನ್ನು ಹೊಂದಿರಬೆಕು.ಇದು ಎಲ್ಲ ಅಂಕಿಅಂಶಗಳನ್ನು ಸುರಕ್ಷಿತವಾಗಿಡಬೇಕು. ಜತೆಗೆ ವಂಚಕರು/ಕಳ್ಳರು ದುರುಪಯೋಗ ಮಾಡದಂತೆ ರಕ್ಷಿಸುವಂತಿರಬೇಕು.

Best Mobiles in India

English summary
Many cyber security articles on cybercrime often start with a shocking statistic about how cyber attacks are on the rise. Danger! Beware! How to Prevent Cybercrime: Helpful Tips. to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X