OPPO: ಒಪ್ಪೋ K12 ಸ್ಮಾರ್ಟ್‌ಫೋನ್ ಲಾಂಚ್‌ಗೆ ದಿನಾಂಕ ಫಿಕ್ಸ್! ಫೀಚರ್ಸ್ ಏನಿವೆ?
ಒಪ್ಪೋ ಸ್ಮಾರ್ಟ್‌ಫೋನ್‌ಗಳು (Oppo Smartphones) ವಿಶೇಷವಾದ ಫೀಚರ್ಸ್ ಆಯ್ಕೆ ಮೂಲಕ ಸಾಕಷ್ಟು ಗ್ರಾಹಕರನ್ನು ಸೆಳೆಯುತ್ತವೆ. ಈ ನಡುವೆ ಒಪ್ಪೋ K12 ಸ್ಮಾರ್ಟ್‌ಫೋನ್ (Oppo K12 smartphone) ಲಾಂಚ್‌ಗೆ ದಿನಾಂಕ ನಿಗದಿ ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್ ಇತ್ತೀಚೆಗೆ ಭಾರತದಲ್ಲಿ ಲಾಂಚ್ ಮಾಡಲಾದ ಒನ್‌ಪ್ಲಸ್ ನಾರ್ಡ್ CE 4 ನಂತಹ ವಿನ್ಯಾಸ ಮತ್ತು ಫೀಚರ್ಸ್ ಆಯ್ಕೆಯನ್ನು ಪಡೆದಿದೆ.
ಹೌದು, ಒಪ್ಪೋ ಏಪ್ರಿಲ್ 24 ರಂದು ಚೀನಾದಲ್ಲಿ ಕಂಪನಿಯ ಮುಂದಿನ K ಸರಣಿಯ ಸ್ಮಾರ್ಟ್‌ಫೋನ್ ಒಪ್ಪೋ K12 ಅನ್ನು ಅನಾವರಣ ಮಾಡುವುದಾಗಿ ಘೋಷಣೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಎರಡು ಬಣ್ಣದ ಆಯ್ಕೆಯಲ್ಲಿ ಲಭ್ಯ ಇರಲಿದ್ದು, ದೊಡ್ಡ ಬ್ಯಾಟರಿ ಸಾಮರ್ಥ್ಯ ಪಡೆದಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್ ಯಾವಾಗ ಲಾಂಚ್ ಆಗಲಿದೆ?, ಇದರ ಪ್ರಮುಖ ಫೀಚರ್ಸ್ ಏನೇನು ಅನ್ನೋ ಮಾಹಿತಿ ಇಲ್ಲಿದೆ ನೋಡಿ.

ಒಪ್ಪೋ K12 ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಮಾಹಿತಿ: ಈ ಸ್ಮಾರ್ಟ್‌ಫೋನ್ ಚೀನಾದಲ್ಲಿ ಅನಾವರಣ ಆಗಲಿದ್ದು, ಜಾಗತಿಕವಾಗಿ ದೊಡ್ಡ ಮಟ್ಟದ ಸೌಂಡ್ ಮಾಡುತ್ತಿದೆ. ಅದರಂತೆ ಈ ಫೋನ್ 6.7 ಇಂಚಿನ 2412×1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಆಯ್ಕೆಯ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಆಯ್ಕೆ ಪಡೆದುಕೊಂಡಿರಲಿದೆ. ಇದರ ಜೊತೆಗೆ 120Hz ರಿಫ್ರೆಶ್ ರೇಟ್, 240Hz ಟಚ್ ಸ್ಯಾಂಪ್ಲಿಂಗ್ ರೇಟ್, 2160Hz PWM ಮಬ್ಬಾಗಿಸುವಿಕೆ, 1100 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಆಯ್ಕೆ ಪಡೆದಿರಲಿದೆ.
ಒಪ್ಪೋ K12 ಸ್ಮಾರ್ಟ್‌ಫೋನ್ ಪ್ರೊಸೆಸರ್ ವಿವರ: ಈ ಫೋನ್ ಅಡ್ರಿನೋ 720 ಜಿಪಿಯು ಬಲದೊಂದಿಗೆ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜನ್ 3 (4nm) ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಕಲರ್‌ಓಎಸ್ 14 ಜೊತೆಗೆ ಆಂಡ್ರಾಯ್ಡ್ 14 ಓಎಸ್ ಅನ್ನು ಈ ಫೋನ್ ರನ್ ಮಾಡಲಿದೆ ಎಂದು ತಿಳಿದುಬಂದಿದೆ. ಇದರ ಜೊತೆಗೆ 8GB / 12GB LPDDR4X RAM ಜೊತೆಗೆ 256GB / 512GB UFS 3.1 ಇಂಟರ್ ಸ್ಟೋರೇಜ್ ಅನ್ನು ಈ ಫೋನ್‌ನಲ್ಲಿ ಕಾಣಬಹುದು.

ಒಪ್ಪೋ K12 ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ: ಇನ್ನು ಈ ಫೋನ್‌ನ ಕ್ಯಾಮೆರಾ ವಿಚಾರಕ್ಕೆಬಂದರೆ ಇದು ಸೋನಿ LYT-600 ಸೆನ್ಸರ್‌ನೊಂದಿಗೆ 50 ಮೆಗಾಪಿಕ್ಸೆಲ್ ರಿಯರ್ ಕ್ಯಾಮರಾ, 8 ಮೆಗಾಪಿಕ್ಸೆಲ್ 120° ಅಲ್ಟ್ರಾ-ವೈಡ್ ಕ್ಯಾಮೆರಾ ಜೊತೆಗೆ ಸೋನಿ IMX355 ಸೆನ್ಸರ್ ಅನ್ನು ಈ ಫೋನ್ ಪಡೆದಿರಲಿದೆ. ಹಾಗೆಯೇ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 16 ಮೆಗಾಪಿಕ್ಸೆಲ್ ಕ್ಯಾಮೆರಾ ಆಯ್ಕೆ ಪಡೆದಿರಲಿದೆ.
ಒಪ್ಪೋ K12 ಸ್ಮಾರ್ಟ್‌ಫೋನ್ ಬ್ಯಾಟರಿ ಹಾಗೂ ಇತರೆ: ಈ ಸ್ಮಾರ್ಟ್‌ಫೋನ್ 5500mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿರಲಿದ್ದು, 100W ಸೂಪರ್‌ವೂಕ್ ಫಾಸ್ಟ್ ಚಾರ್ಜಿಂಗ್ ಬೆಂಬಲ ಪಡೆದುಕೊಂಡಿರಲಿದೆ. ಇದರ ಜೊತೆಗೆ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್, ಧೂಳು ಮತ್ತು ಸ್ಪ್ಲಾಶ್ ನಿರೋಧಕ (IP54), 5G SA/NSA, ಡ್ಯುಯಲ್ 4G VoLTE, ವೈ-ಫೈ 6 802.11 ax (2.4GHz + 5GHz), ಬ್ಲೂಟೂತ್ ಆವೃತ್ತಿ 5.3, ಜಿಪಿಎಸ್, ಗ್ಲೋನಾಸ್, BDS, ಗೆಲಿಲಿಯೋ, QZSS ಸೇರಿದಂತೆ ಅನೇಕ ಸೆನ್ಸರ್ ಅನ್ನು ಈ ಫೋನ್‌ನಲ್ಲಿ ಕಾಣಬಹುದಾಗಿದೆ.

ಗಮನಿಸಬೇಕಾದ ವಿಷಯ ಏನೆಂದರೆ ಒನ್‌ಪ್ಲಸ್ ನಾರ್ಡ್ CE4 ಸ್ಮಾರ್ಟ್‌ಫೋನ್ ಅನ್ನು 8GB RAM ಆವೃತ್ತಿಯಲ್ಲಿ ಮಾತ್ರ ಬಿಡುಗಡೆ ಮಾಡಲಾಗಿದೆ. ಆದರೆ K12 ಸ್ಮಾರ್ಟ್‌ಫೋನ್ ಅನ್ನು 12GB RAM ಮತ್ತು 512GB ಇಂಟರ್ ಸ್ಟೋರೇಜ್ ಆಯ್ಕೆಯಲ್ಲಿ ಅನಾವರಣ ಮಾಡಲಾಗುತ್ತದೆ ಎನ್ನುವ ಮಾತುಗಳು ಕೇಳಿಬಂದಿವೆ. ಭಾರತಕ್ಕೆ ಹೋಲಿಸಿದರೆ ಚೀನಾದಲ್ಲಿ ಇದರ ಬೆಲೆ ಅಗ್ಗವಾಗಿರಬಹುದು ಎನ್ನಲಾಗಿದೆ.


Click it and Unblock the Notifications








