Realme: ಭಾರತದಲ್ಲಿ ರಿಯಲ್‌ಮಿ C65 5G ಸ್ಮಾರ್ಟ್‌ಫೋನ್ ಲಾಂಚ್‌ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
ರಿಯಲ್‌ಮಿ ಸ್ಮಾರ್ಟ್‌ಫೋನ್‌ಗಳು (Realme smartphone) ಇತ್ತೀಚೆಗೆ ವಿಶೇಷ ಬೇಡಿಕೆ ಪಡೆದುಕೊಂಡಿವೆ. ಈ ನಡುವೆ ಭಾರತದಲ್ಲಿ ಬಹು ನಿರೀಕ್ಷಿತ ರಿಯಲ್‌ಮಿ C65 5G ಸ್ಮಾರ್ಟ್‌ಫೋನ್ (Realme C65 5G smartphone) ಅನ್ನು ಲಾಂಚ್ ಮಾಡುವ ದಿನಾಂಕವನ್ನು ಘೋಷಣೆ ಮಾಡಲಾಗಿದೆ.
ಹೌದು, ವಿಶೇಷ ಫೀಚರ್ಸ್ ಆಯ್ಕೆಯೊಂದಿಗೆ ರಿಯಲ್‌ಮಿ C65 5G ಸ್ಮಾರ್ಟ್‌ಫೋನ್ ಅನ್ನು ಕೆಲವೇ ದಿನಗಳಲ್ಲಿ ಭಾರತದಲ್ಲಿ ಅನಾವರಣ ಮಾಡಲಾಗುತ್ತಿದೆ. ಈ ಸ್ಮಾರ್ಟ್‌ಫೋನ್ ಅನ್ನು ಈ ಬೆಲೆ ವಿಭಾಗದಲ್ಲಿ ವೇಗದ ಪ್ರವೇಶ ಮಟ್ಟದ 5G ಫೋನ್ ಎಂದು ಕರೆಯಲಾಗಿದೆ. ಹಾಗೆಯೇ ವಿಯೆಟ್ನಾಂನಲ್ಲಿ ಬಿಡುಗಡೆಯಾದ ರಿಯಲ್‌ಮಿ C65 ಸ್ಮಾರ್ಟ್‌ಫೋನ್ ವಿಭಿನ್ನವಾದ ಚಿಪ್‌ಸೆಟ್ ಮತ್ತು ಚಾರ್ಜಿಂಗ್ ವೇಗವನ್ನು ಹೊಂದಿದೆ. ಹಾಗಿದ್ರೆ, ಬನ್ನಿ ಈ ಫೋನ್ ಯಾವಾಗ ಲಾಂಚ್ ಆಗಲಿದೆ?, ಏನೆಲ್ಲಾ ಫೀಚರ್ಸ್ ಪಡೆದಿರಲಿದೆ ಎಂಬಿತ್ಯಾದಿ ಮಾಹಿತಿ ಇಲ್ಲಿದೆ ನೋಡಿ.

ರಿಯಲ್‌ಮಿ C65 5G ಸ್ಮಾರ್ಟ್‌ಫೋನ್ ಫೀಚರ್ಸ್: ಈ ಸ್ಮಾರ್ಟ್‌ಫೋನ್ ಅನ್ನು ಏಪ್ರಿಲ್ 26, 2024 ರಂದು ಅನಾವರಣ ಮಾಡಲಾಗುತ್ತದೆ. ಈ ಸ್ಮಾರ್ಟ್‌ಫೋನ್‌ನ ಟೀಸರ್ ಪೋಸ್ಟರ್‌ನಲ್ಲಿ ಕಂಡು ಬಂದ ಮಾಹಿತಿ ಗಮನಿಸಿದ್ರೆ 9,999 ರೂ.ಗಳಿಂದ ಪ್ರಾರಂಭವಾಗಲಿದೆ ಎಂದು ತಿಳಿದುಬಂದಿದೆ. ಹಾಗೆಯೇ ರಿಯಲ್‌ಮಿ ಈ ಬೆಲೆಯಲ್ಲಿ ವೇಗದ ಪ್ರವೇಶ ಮಟ್ಟದ 5G ಫೋನ್ ಎಂದು ಕರೆದಿದೆ.
ರಿಯಲ್‌ಮಿ C65 5G ಇತ್ತೀಚೆಗೆ ಬಿಡುಗಡೆಯಾದ ಮೀಡಿಯಾಟೆಕ್ ಡೈಮೆನ್ಸಿಟಿ 6300 (D6300) ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ತಿಳಿದುಬಂದಿದ್ದು, ಇದರ ನಡುವೆ ಈ ಫೋನ್‌ನ 4G ವೇರಿಯಂಟ್ ವಿಯೆಟ್ನಾಂನಲ್ಲಿ ಮೀಡಿಯಾಟೆಕ್ ಹಿಲಿಯೋ G85 ಪ್ರೊಸೆಸರ್ ನಲ್ಲಿ ಲಭ್ಯ ಇದೆ. ಇನ್ನು ಈ ಫೋನ್ 120Hz ರಿಫ್ರೆಶ್ ರೇಟ್ ಆಯ್ಕೆ ಪಡೆದಿರಲಿದೆ ಎನ್ನಲಾಗಿದ್ದು, 6.67 ಇಂಚಿನ IPS LCD ಪ್ಯಾನೆಲ್ ಪಡೆದಿರಲಿದೆ ಎನ್ನಲಾಗಿದೆ. ಹಾಗೆಯೇ 625 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಆಯ್ಕೆಯನ್ನು ಈ ಫೋನ್‌ನಲ್ಲಿ ಕಾಣಬಹುದಾಗಿದೆ.

ಇಷ್ಟೇ ಅಲ್ಲದೆ ಈ ಫೋನ್ IP65 ರೇಟಿಂಗ್ ಹೊಂದಿರಲಿದ್ದು, ಧೂಳು ಮತ್ತು ನೀರಿನ ಪ್ರತಿರೋಧವನ್ನು ಪಡೆದಿದೆ ಎಂದು ಖಚಿತಪಡಿಸಲಾಗಿದೆ. ಇದು ರೈನ್‌ವಾಟರ್ ಟಚ್ ಫೀಚರ್ಸ್ ಮತ್ತು TUV ರೈನ್‌ಲ್ಯಾಂಡ್ ಪ್ರಮಾಣೀಕರಣವನ್ನು ಸಹ ಒಳಗೊಂಡಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಇದರ ಜೊತೆಗೆ 50 ಮೆಗಾಪಿಕ್ಸೆಲ್ ಮುಖ್ಯ ಸೆನ್ಸರ್ ಮತ್ತು 2 ಮೆಗಾಪಿಕ್ಸೆಲ್ ಸೆಕೆಂಡರಿ ಕ್ಯಾಮೆರಾ ಇರಬಹುದು ಎನ್ನಲಾಗಿದ್ದು, 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದಿರಲಿದೆ ಎನ್ನಲಾಗಿದೆ.
ಹಾಗೆಯೇ ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ ರಿಯಲ್‌ಮಿ UI 5.0 (Realme UI 5.0) ನೊಂದಿಗೆ ರನ್ ಆಗಲಿದೆ ಎಂದು ತಿಳಿದುಬಂದಿದ್ದು, 15W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿರಲಿದೆ ಎಂದು ಹೇಳಲಾಗಿದೆ. ಇನ್ನು 4G ಮಾದರಿ ಸ್ಮಾರ್ಟ್‌ಫೊನ್ 45W ಚಾರ್ಜಿಂಗ್ ಸಾಮರ್ಥ್ಯವನ್ನು ಪಡೆದಿರಲಿದೆ ಎಂದು ಹೇಳಲಾಗಿದೆ. ಮಿಗಿಲಾಗಿ ಈ ಫೋನ್ 4GB+64GB, 4GB+128GB, ಮತ್ತು 6GB+128GB ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯ ಇರಬಹುದು ಎಂದು ಲೀಕ್ ಮಾಹಿತಿ ಮೂಲಕ ತಿಳಿದುಬಂದಿದೆ.

ಉಳಿದಂತೆ ಈ ಫೋನ್ ಭಾರತದಲ್ಲಿ ತಿಳಿ ಹಸಿರು ಮತ್ತು ಗಾಢ ಹಸಿರು (Light green and dark green) ಬಣ್ಣಗಳಲ್ಲಿ ಕಾಣಿಸಿಕೊಳ್ಳಲಿದೆ ಎನ್ನಲಾಗಿದ್ದು, ಚೌಕಾಕಾರದ ಅಂಚುಗಳು ಮತ್ತು ದೊಡ್ಡ ವೃತ್ತಾಕಾರದ ಕ್ಯಾಮೆರಾ ಲೈಟ್ ಆಯ್ಕೆಯನ್ನು ಕಾಣಬಹುದು ಎಂದು ಹೇಳಲಾಗಿದೆ. ಈ ಸ್ಮಾರ್ಟ್‌ಫೋನ್ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಅಗತ್ಯ ಎನಿಸಿದರೆ ಗಿಜ್‌ಬಾಟ್‌ನೊಂದಿಗೆ ಸಂಪರ್ಕದಲ್ಲಿರಿ.


Click it and Unblock the Notifications








