Subscribe to Gizbot

ಸರ್ಕಾರದ ಯೋಜನೆಗಳಿಗೆ ಆಧಾರ್ ಲಿಂಕ್ ಗಡುವು ಅನಿರ್ದಿಷ್ಟಾವಧಿಗೆ ವಿಸ್ತರಣೆ!!

Written By:

ಆಧಾರ್ ಅನ್ನು ಸರ್ಕಾರದ ಎಲ್ಲಾ ಯೋಜನೆಗಳಿಗೆ ಲಿಂಕ್ ಮಾಡಲು ಕೇಂದ್ರ ಸರ್ಕಾರ ಡಿಸೆಂಬರ್ 31ರವರೆಗೆ ಕಾಲಾವಕಾಶ ನೀಡಿದ್ದ ಕೇಂದ್ರ ಸರ್ಕಾರ ಈಗ ಆದೇಶವನ್ನು ಅನಿರ್ದಿಷ್ಟಾವಧಿವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.! ಅಲ್ಲದೆ, ಸದ್ಯದಲ್ಲೇ ಹೊಸ ದಿನಾಂಕವನ್ನು ಪ್ರಕಟಿಸುವುದಾಗಿ ತಿಳಿಸಿದೆ.!!

ಆಧಾರ್ ಅನ್ನು ಪಾನ್‌ಕಾರ್ಡ್, ಬ್ಯಾಂಕ್ ಅಕೌಂಟ್ ಮತ್ತು ಮೊಬೈಲ್ ನಂಬರ್‌ಗಳು ಸೇರಿದಂತೆ ಸರ್ಕಾರದ ಎಲ್ಲಾ ಯೋಜನೆಗಳಿಗೆ ಜೋಡಿಸುವ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಇರುವುದರಿಂದ ಕೇಂದ್ರ ಹಣಕಾಸು ಸಚಿವಾಲಯಕ್ಕೆ ಒಳಪಟ್ಟ ಕಂದಾಯ ಇಲಾಖೆ ನಿನ್ನೆ ಗಡುವು ವಿಸ್ತರಣೆ ಮಾಡಿ ಅಧಿಸೂಚನೆ ಹೊರಡಿಸಿದೆ ಎನ್ನಲಾಗಿದೆ.!!

ಸರ್ಕಾರದ ಯೋಜನೆಗಳಿಗೆ ಆಧಾರ್ ಲಿಂಕ್ ಗಡುವು ಅನಿರ್ದಿಷ್ಟಾವಧಿಗೆ ವಿಸ್ತರಣೆ!!

ಇನ್ನು ಈ ಅಧಿಸೂಚನೆಯಲ್ಲಿ ಆಧಾರ್ ನಂಬರ್‌ ಮತ್ತು ಪಾನ್ ನಂಬರ್‌ ಅನ್ನು 2017ರ ಡಿಸೆಂಬರ್‌ 31ರ ಒಳಗೆ ಸಲ್ಲಿಸಿ ಎಂಬ ಪದಗಳನ್ನು ತೆಗೆದು ಆಧಾರ್ ನಂಬರ್‌, ಪ್ಯಾನ್‌ ಅಥವಾ ಫಾರ್ಮ್ ನಂಬರ್‌ 60ನ್ನು ಕೇಂದ್ರ ಸರ್ಕಾರವು ಸೂಚಿಸಲಿರುವ ದಿನಾಂಕದ ಒಳಗೆ ಸಲ್ಲಿಸಿ ಎಂಬ ಪದಗಳನ್ನು ಬಳಸಲಾಗಿದೆ.!!

ಸರ್ಕಾರದ ಯೋಜನೆಗಳಿಗೆ ಆಧಾರ್ ಲಿಂಕ್ ಗಡುವು ಅನಿರ್ದಿಷ್ಟಾವಧಿಗೆ ವಿಸ್ತರಣೆ!!

ಅಕ್ರಮ ಹಣ ವಹಿವಾಟು ತಡೆ ಕಾಯ್ದೆ ಪ್ರಕಾರ ಪಾನ್ ನಂಬರ್ ಹಾಗೂ ಆಧಾರ್ ಸಂಖ್ಯೆಯನ್ನು ಸರ್ಕಾರದ ಸೇವೆಯೊಂದಿಗೆ ಲಿಂಕ್ ಮಾಡುವುದು ಕಡ್ಡಾಯ ಮಾಡಲಾಗಿದ್ದು, ಹೊಸ ಬ್ಯಾಂಕ್ ಖಾತೆ ತೆರೆಯಲು ಹಾಗೂ ಚಾಲ್ತಿಯಲ್ಲಿರುವ ಖಾತೆಗಳಿಗೆ ಆಧಾರ್ ಲಿಂಕ್ ಮಾಡುವುದನ್ನು ಈ ಹಿಂದೆ ಕಡ್ಡಾಯಗೊಳಿಸಲಾಗಿತ್ತು.!!

English summary
Earlier, the deadline for linking the Unique Identification Number to bank accounts was December 31.to know more visit to kannada.gizbot.com
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot