Just In
- 28 min ago
ಜಿಯೋಗೆ ಸೆಡ್ಡು ಹೊಡೆಯುತ್ತಿದೆಯಾ ಏರ್ಟೆಲ್; ಜಿಯೋ ಸೇವೆ ಬೇಡ ಎಂದವರ ಸಂಖ್ಯೆ ಎಷ್ಟು ಗೊತ್ತಾ!?
- 58 min ago
ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಸ್ಯಾಮ್ಸಂಗ್ ಗ್ಯಾಲಕ್ಸಿ S23! ಫೀಚರ್ಸ್ ನಿರೀಕ್ಷೆ ಏನು?
- 2 hrs ago
ChatGPT Effect: AI ಟೂಲ್ಸ್ ಬ್ಯಾನ್ ಮಾಡಲು ಮುಂದಾದ ಬೆಂಗಳೂರಿನ ಈ ಕಾಲೇಜುಗಳು!
- 18 hrs ago
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
Don't Miss
- News
Breaking: ರಾಜಸ್ಥಾನದ ಭರತ್ಪುರದಲ್ಲಿ ಚಾರ್ಟರ್ಡ್ ವಿಮಾನ ಪತನ!
- Finance
ಅದಾನಿ ಆಘಾತ: 2 ದಿನಗಳಲ್ಲಿ ₹18,000 ಕೋಟಿ ಕಳೆದುಕೊಂಡ LIC- ಗ್ರಾಹಕರೇ, ಎಚ್ಚರಿಕೆಯಿಂದ ಈ ವರದಿ ನೋಡಿ
- Movies
ಕ್ರಾಂತಿಗೆ ಸಿಕ್ಕಾಪಟ್ಟೆ ನೆಗೆಟಿವ್ ವಿಮರ್ಶೆ; ಚಿತ್ರ ನೋಡಿ ಕಿಡಿಕಾರಿದ ನಟ ಪ್ರಮೋದ್!
- Sports
ನಾವು ಆಡುವುದನ್ನು ನೋಡಲು ಜನ ಬಂದಿಲ್ಲ: ಆತನಿಗಾಗಿ ಜನ ಬಂದಿದ್ದಾರೆ ಎಂದ ನ್ಯೂಜಿಲೆಂಡ್ ಕ್ರಿಕೆಟಿಗ
- Lifestyle
ಬೆಳ್ಳಿಯ ಆಭರಣಗಳು ಹೊಳಪಿನಿಂದ ಕೂಡಿರಲು ಈ ಟ್ರಿಕ್ಸ್ ಬಳಸಿ
- Automobiles
ಟಾಟಾದ ಜನಪ್ರಿಯ ಕಾರುಗಳ ಬೆಲೆ ಏರಿಕೆ: ಘೋಷಣೆ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಶಿಯೋಮಿಯ ಈ ಫೋನ್ ಖರೀದಿಸಿದರೆ, 4,999ರೂ.ಬೆಲೆಯ ಸ್ಪೀಕರ್ ಉಚಿತ!
ಮೊಬೈಲ್ ಮಾರುಕಟ್ಟೆಯಲ್ಲಿ ನೂತನ ಫೋನ್‌ಗಳು ಲಗ್ಗೆ ಇಡುತ್ತವೆ ಇರುತ್ತವೆ. ಪ್ರಮುಖ ಕಂಪನಿಗಳ ನಡುವೆ ಪೈಪೋಟಿ ಇದ್ದು, ಗ್ರಾಹಕರನ್ನು ಸೆಳೆಯಲು ಕೆಲವೊಮ್ಮೆ ಕೊಡುಗೆಗಳನ್ನು ಘೋಷಿಸುತ್ತವೆ. ಈ ನಿಟ್ಟಿನಲ್ಲಿ ಶಿಯೋಮಿ ಇದೀಗ ಭರ್ಜರಿ ಕೊಡುಗೆಯನ್ನು ಘೋಷಿಸಿದ್ದು, ಗ್ರಾಹಕರು ಹುಬ್ಬೇರಿಸುವಂತಾಗಿದೆ. ರೆಡ್ಮಿಯ ಈ ಫೋನ್ ಖರೀದಿಸುವ ಗ್ರಾಹಕರಿಗೆ ಉಚಿತ ಸ್ಪೀಕರ್ ನೀಡಲಿದೆ.

ಹೌದು, ಶಿಯೋಮಿ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ರೆಡ್ಮಿ K50i ಸ್ಮಾರ್ಟ್‌ಫೋನ್ ಖರೀದಿಸುವ ಗ್ರಾಹಕರಿಗೆ ಉಚಿತವಾಗಿ ಸ್ಪೀಕರ್ ನೀಡುವುದಾಗಿ ತಿಳಿಸಿದೆ. ಇನ್ನು ಉಚಿತವಾಗಿ ನೀಡುವ ಸ್ಪೀಕರ್ ಕಡಿಮೆ ಮೊತ್ತದ ಸ್ಪೀಕರ್ ಅಲ್ಲ, ಅದು ಸಹ ಶಿಯೋಮಿ ನೂತನವಾಗಿ ಬಿಡುಗಡೆ ಮಾಡಿರುವ ಶಿಯೋಮಿ ಸ್ಮಾರ್ಟ್ ಸ್ಪೀಕರ್ ಆಗಿದೆ. ಇನ್ನು ಉಚಿತವಾಗಿ ಲಭ್ಯವಾಗುವ ಸ್ಪೀಕರ್ ಬೆಲೆಯು 4,999ರೂ. ಆಗಿದೆ.

ಶಿಯೋಮಿ ಸ್ಮಾರ್ಟ್ ಸ್ಪೀಕರ್ IR ನಿಯಂತ್ರಣ ಪಡೆದಿದ್ದು, ಆಗಿದ್ದು ಇದನ್ನು ಕೆಲವೇ ದಿನಗಳ ಹಿಂದೆ ಘೋಷಿಸಲಾಗಿದೆ. ಇನ್ನು ಈ ಕೊಡುಗೆಯು Mi.com ನಲ್ಲಿ ಮತ್ತು ಆಫ್‌ಲೈನ್ ಸ್ಟೋರ್‌ಗಳಲ್ಲಿಯೂ ಲಭ್ಯವಿದೆ. ನೂತನ ರೆಡ್ಮಿ K50i (Redmi K50i) ಸ್ಮಾರ್ಟ್‌ಫೋನ್ 30,000ರೂ. ಪ್ರೈಸ್ ಟ್ಯಾಗ್‌ನ ವಿಭಾಗದಲ್ಲಿ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಹಾಗಾದರೇ ಈ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ K50i ಫೋನ್ ಬೆಲೆ
ಭಾರತದಲ್ಲಿ ರೆಡ್ಮಿ K50i ಫೋನಿನ 6GB RAM + 128GB ಸ್ಟೋರೇಜ್ ಆಯ್ಕೆಗೆ 25,999 ರೂ.ಗಳ ಆಗಿದೆ. ಹಾಗೆಯೇ 8GB + 256GB ಸ್ಟೋರೇಜ್ ಫೋನ್ ಬೆಲೆ 28,999 ರೂ. ಆಗಿದೆ. ಇನ್ನು ಈ ಫೋನ್ ಕ್ವಿಕ್ ಸಿಲ್ವರ್, ಸ್ಟೆಲ್ತ್ ಬ್ಲ್ಯಾಕ್ ಮತ್ತು ಫ್ಯಾಂಟಮ್ ಬ್ಲೂ ಎಂಬ ಮೂರು ಬಣ್ಣಗಳಲ್ಲಿ ಲಭ್ಯವಿರುತ್ತದೆ. ಇದು 30,000 ರೂ. ಒಳಗಿನ ಅತ್ಯುತ್ತಮ 5G ಫೋನ್‌ಗಳಲ್ಲಿ ಒಂದಾಗಿದೆ.

ರೆಡ್ಮಿ K50i: ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ
ರೆಡ್ಮಿ K50i ಸ್ಮಾರ್ಟ್‌ಫೋನ್ 6.6 ಇಂಚಿನ ಐಪಿಎಸ್ ಎಲ್‌ಸಿಡಿ ಮಾದರಿಯ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಈ ಫೋನ್ 20.5:9 ರಚನೆಯನ್ನು ಹೊಂದಿದ್ದು, ಫೋನಿನ ಮೇಲ್ಭಾಗದ ಮಧ್ಯದಲ್ಲಿ ಪಂಚ್‌ಹೋಲ್ ರಚನೆ ಇದೆ. ಜೊತೆಗೆ 144Hz ರಿಫ್ರೇಶ್ ರೇಟ್ ಅನ್ನು ಒಳಗೊಂಡಿದ್ದು, ಡಾಲ್ಬಿ ವಿಷನ್ ಮತ್ತು HDR10 ಸಪೋರ್ಟ್ ಸಹ ಪಡೆದಿದೆ.

ರೆಡ್ಮಿ K50i: ಪ್ರೊಸೆಸರ್ ಪವರ್
ರೆಡ್ಮಿ K50i ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100 SoC ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಬೆಂಬಲ ಪಡೆದಿದೆ. ಇದರೊಂದಿಗೆ ಈ ಫೋನ್ ಎರಡು ವೇರಿಯಂಟ್ ಮಾಡೆಲ್‌ಗಳಲ್ಲಿ ಕಾಣಿಸಿಕೊಂಡಿದೆ. ಅವುಗಳು ಕ್ರಮವಾಗಿ 8GB + 256GB ಮತ್ತು 6GB RAM + 128GB ಸ್ಟೋರೇಜ್ ವೇರಿಯಂಟ್ ಆಗಿವೆ. ಇನ್ನು ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶದ ಬಗ್ಗೆ ಮಾಹಿತಿ ಇಲ್ಲ.

ರೆಡ್ಮಿ K50i: ಕ್ಯಾಮೆರಾ ಸೆನ್ಸಾರ್ ರಚನೆ
ರೆಡ್ಮಿ K50i ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದ್ದು, ತೃತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ.

ರೆಡ್ಮಿ K50i: ಬ್ಯಾಟರಿ ಪವರ್ ಹಾಗೂ ಇತರೆ
ರೆಡ್ಮಿ K50i ಸ್ಮಾರ್ಟ್‌ಫೋನ್ 5,080mAh ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 67W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ಪಡೆದಿದೆ. ಇದು ಲಿಕ್ವಿಡ್‌ಕೂಲ್ 2.0 ಸೌಲಭ್ಯ ಹೊಂದಿದೆ. ಹಾಗೆಯೇ ಇದು ಆಂಡ್ರಾಯ್ಡ್ 12 ಆಧಾರಿತ MIUI 13 ನಲ್ಲಿ ಕಾರ್ಯನಿರ್ವಹಿಸುತ್ತದೆ. ಅಲ್ಲದೇ IP53 ರೇಟಿಂಗ್, ಡಾಲ್ಬಿ ಅಟ್ಮೋಸ್, X-Axis ಮೋಟಾರ್, 12 5G ಬ್ಯಾಂಡ್‌ಗಳು, Wi-Fi 6, 3.5mm ಹೆಡ್‌ಫೋನ್ ಜ್ಯಾಕ್, ಬ್ಲೂಟೂತ್ ಜೊತೆಗೆ ಡ್ಯುಯಲ್ ಸ್ಪೀಕರ್‌ಗಳನ್ನು ಒಳಗೊಂಡಿದೆ. 5.3, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಐಆರ್ ಬ್ಲಾಸ್ಟರ್.

ರೆಡ್ಮಿ K50i: ಬೆಲೆ ಎಷ್ಟು ಮತ್ತು ಲಭ್ಯತೆ
ರೆಡ್ಮಿ K50i ಸ್ಮಾರ್ಟ್‌ಫೋನ್ 6GB + 128GB ರೂಪಾಂತರಕ್ಕೆ 25,999 ರೂ. ಗಳು ಆಗಿದೆ. ಹಾಗೆಯೇ 8GB + 256GB ಸ್ಟೋರೇಜ್ ಫೋನ್ ಬೆಲೆ 28,999 ರೂ. ಆಗಿದೆ. ಇನ್ನು ಈ ಫೋನ್ ಕ್ವಿಕ್ ಸಿಲ್ವರ್, ಸ್ಟೆಲ್ತ್ ಬ್ಲ್ಯಾಕ್ ಮತ್ತು ಫ್ಯಾಂಟಮ್ ಬ್ಲೂ ಎಂಬ ಮೂರು ಬಣ್ಣಗಳಲ್ಲಿ ಲಭ್ಯವಿರುತ್ತದೆ.

ರೆಡ್ಮಿ 10 ಪವರ್ ಫೀಚರ್ಸ್
ಇತ್ತೀಚಿಗೆ ಬಿಡುಗಡೆ ಆಗಿರುವ ರೆಡ್ಮಿ 10 ಪವರ್ ಫೋನ್ ಕೆಲವು ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ 6.7 ಇಂಚಿನ HD+ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20.6:9 ರಚನೆಯ ಅನುಪಾತವನ್ನು ಹೊಂದಿದೆ. ಇದು 400 ನಿಟ್ಸ್ ಬ್ರೈಟ್‌ನೆಸ್ ಅನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಪಡೆದುಕೊಂಡಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.

ಇದರಲ್ಲಿ 3GB ವರೆಗಿನ ಇಂಟರ್‌ಬಿಲ್ಟ್ ಸ್ಟೋರೇಜ್ 3GB ವರೆಗೆ ಬಳಸಿಕೊಂಡು ಬಳಕೆದಾರರು ಲಭ್ಯವಿರುವ RAM ಅನ್ನು ವಾಸ್ತವಿಕವಾಗಿ ವಿಸ್ತರಿಸಬಹುದು. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ ವಿಸ್ತರಿಸಬಹುದಾಗಿದೆ 512GBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಹಾಗೆಯೇ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ v5, GPS/ A-GPS, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಒಳಗೊಂಡಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470