ಅಗ್ಗದ ದರದಲ್ಲಿ ಲಭ್ಯವಿರುವ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸೌಲಭ್ಯದ ಪ್ಲ್ಯಾನ್‌ಗಳು!
ಭಾರತೀಯ ಟೆಲಿಕಾಂ ಸಂಸ್ಥೆಗಳು ಇತ್ತೀಚಿಗಿನ ದಿನಗಳಲ್ಲಿ ಅಧಿಕ ಡೇಟಾ, ಹೆಚ್ಚಿನ ವ್ಯಾಲಿಡಿಟಿ ಸೌಲಭ್ಯ ನೀಡಿ ಗ್ರಾಹಕರನ್ನು ಆಕರ್ಷಿಸುತ್ತಿವೆ. ಇದರೊಂದಿಗೆ ಜೊತೆಗೆ ಕೆಲವು ಆಯ್ದ ಪ್ರೀಪೇಯ್ಡ್ ಪ್ಲ್ಯಾನ್‌ಗಳಿಗೆ ಹೆಚ್ಚುವರಿಯಾಗಿ OTT ಸೇವಗಳ ಪ್ರಯೋಜನ ಘೋಷಿಸಿವೆ. ಈ ಪೈಕಿ ಏರ್‌ಟೆಲ್ ಹಾಗೂ ಜಿಯೋ ಟೆಲಿಕಾಂಗಳು ಕೆಲವು ಪ್ಲ್ಯಾನ್‌ಗಳಲ್ಲಿ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ತಿಳಿಸಿದೆ. ಅದರ ಬೆನ್ನಲೇ ಇದೀಗ ಮತ್ತೆ ಎರಡು ಹೊಸ ಪ್ರೀಪೇಯ್ಡ್ ಪ್ಲ್ಯಾನ್‌ಗಳಿಗೆ ಭರ್ಜರಿ ಕೊಡುಗೆ ಘೋಷಿಸಿದೆ.

ಹೌದು, ಏರ್‌ಟೆಲ್ ಹಾಗೂ ಜಿಯೋ ಟೆಲಿಕಾಂಗಳು ಜನಪ್ರಿಯ ಓಟಿಟಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವದ ಪ್ಲ್ಯಾನ್‌ಗಳನ್ನು ಹೊಂದಿವೆ. ಅವುಗಳು ಸುಮಾರು 600ರೂ. ಪ್ರೈಸ್‌ಟ್ಯಾಗ್‌ನ ಒಳಗೆ ಇರುವುದು ಗ್ರಾಹಕರಿಗೆ ಆಕರ್ಷಕ ಅನಿಸಿವೆ. ಅವುಗಳು ಭಿನ್ನ ದರದಲ್ಲಿದ್ದು, ಭಿನ್ನ ವ್ಯಾಲಿಡಿಟಿ ಸೌಲಭ್ಯದ ಆಯ್ಕೆಗಳನ್ನು ಪಡೆದಿವೆ. ಹಾಗಾದರೇ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸೌಲಭ್ಯದ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಬಗ್ಗೆ ಮುಂದೆ ಓದಿರಿ.

ಏರ್‌ಟೆಲ್ 448ರೂ. ಪ್ಲ್ಯಾನ್
ಏರ್‌ಟೆಲ್ ಸಂಸ್ಥೆಯ ಈ ಹೊಸ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಇದರೊಂದಿಗೆ ಯಾವುದೇ ನೆಟವರ್ಕ್ ಅನಿಯಮಿತ ಉಚಿತ ವಾಯಿಸ್ ಕರೆ ಹಾಗೂ ಪ್ರತಿದಿನ 100ಎಸ್‌ಎಮ್‌ಎಸ್ ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ.

ಜಿಯೋ 401ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋದ ಈ ಪ್ರೀಪೇಯ್ಡ್ ಪ್ಲಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ ಒಟ್ಟು 90GB ಡೇಟಾ ಪ್ರಯೋಜನವನ್ನು ಒಳಗೊಂಡಿದೆ. ಜಿಯೋ ಟು ಜಿಯೋ ಉಚಿತ ವಾಯಿಸ್ ಕರೆ ಹಾಗೂ ಜಿಯೋ ಟು ಇತರೆ ಟೆಲಿಕಾಂಗಳ ಕರೆಗಳು ಸಹ ಅನಿಯಮಿತ ಉಚಿತ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಹ ಇದೆ. ಹಾಗೆಯೇ ಜಿಯೋ ಆಪ್ಸ್ ಲಭ್ಯ.

ಏರ್‌ಟೆಲ್ 599ರೂ. ಪ್ಲ್ಯಾನ್
ಏರ್‌ಟೆಲ್ ಸಂಸ್ಥೆಯ ಈ ಹೊಸ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ದೊರೆಯುತ್ತದೆ. ಇದರೊಂದಿಗೆ ಯಾವುದೇ ನೆಟವರ್ಕ್ ಅನಿಯಮಿತ ಉಚಿತ ವಾಯಿಸ್ ಕರೆ ಹಾಗೂ ಪ್ರತಿದಿನ 100ಎಸ್‌ಎಮ್‌ಎಸ್ ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ.

ಏರ್‌ಟೆಲ್ 401ರೂ. ಪ್ಲ್ಯಾನ್
ಏರ್‌ಟೆಲ್ ಸಂಸ್ಥೆಯ ಈ ಹೊಸ ಪ್ರೀಪೇಯ್ಡ್ ಪ್ಲ್ಯಾನ್ 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಆದರೆ ಈ ಪ್ಲ್ಯಾನಿನಲ್ಲಿ ಯಾವುದೇ ಉಚಿತ ಕರೆ ಹಾಗೂ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಿರುವುದಿಲ್ಲ.


Click it and Unblock the Notifications