ಹಬ್ಬಕ್ಕೆ Xiaomi ತನ್ನ 'ಮಿ 11X ಪ್ರೊ' ಫೋನಿಗೆ ಎಷ್ಟು ಡಿಸ್ಕೌಂಟ್‌ ನೀಡಿದೆ ಗೊತ್ತಾ?

|

ಸದ್ಯ ಹಬ್ಬ ಪ್ರಯುಕ್ತ ಇ ಕಾಮರ್ಸ್‌ ತಾಣಗಳು ಹಾಗೂ ಮೊಬೈಲ್‌ ಕಂಪನಿಗಳು ಫೋನ್‌ಗಳಿಗೆ ಭರ್ಜರಿ ಆಫರ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಜನಪ್ರಿಯ ಶಿಯೋಮಿ ಸಹ ತನ್ನ ದೀಪಾವಳಿ ವಿತ್ ಮಿ ಮಾರಾಟ ಆಯೋಜಿಸಿದೆ. ತನ್ನ ಕೆಲವು ಆಯ್ದ ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ ಘೋಷಿಸಿದೆ. ಆ ಪೈಕಿ ಹೈ ಎಂಡ್‌ ಮಾದರಿಯ ಫೀಚರ್ಸ್‌ಗಳಿಂದ ಗಮನ ಸೆಳೆದಿರುವ ಶಿಯೋಮಿ ಮಿ 11X ಪ್ರೊ ಸ್ಮಾರ್ಟ್‌ಫೋನ್‌ ದೊಡ್ಡ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ.

ಹಬ್ಬಕ್ಕೆ Xiaomi 'ಮಿ 11X ಪ್ರೊ' ಫೋನಿಗೆ ಎಷ್ಟು ಡಿಸ್ಕೌಂಟ್‌ ನೀಡಿದೆ ಗೊತ್ತಾ?

ಹೌದು, ಶಿಯೋಮಿ ತನ್ನ ಮಿ 11X ಪ್ರೊ ಸ್ಮಾರ್ಟ್‌ಫೋನಿಗೆ ಹೆಚ್ಚಿನ ರಿಯಾಯಿತಿ ತಿಳಿಸಿದೆ. 8GB RAM ಮತ್ತು 128GB ಸ್ಟೋರೇಜ್‌ ವೇರಿಯಂಟ್‌ ಹಬ್ಬದ ಸೇಲ್‌ನಲ್ಲಿ ಈಗ 30,999ರೂ.ಗಳಿಗೆ ಲಭ್ಯ ಆಗಲಿದೆ. ಹಾಗೆಯೇ ಗ್ರಾಹಕರು 9,000ರೂ.ಗಳ ಎಕ್ಸ್‌ಚೇಂಜ್ ಕೊಡುಗೆ ಅನ್ನು ಪಡೆಯುತ್ತಾರೆ ಎಂದು ಕಂಪನಿಯು ಘೋಷಿಸಿದೆ. ಇದಲ್ಲದೇ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳೊಂದಿಗೆ 3,000ರೂ. ತ್ವರಿತ ರಿಯಾಯಿತಿಯನ್ನು ಸಹ ಸಿಗಲಿದೆ. ಹಾಗಾದರೇ ಶಿಯೋಮಿ ಮಿ 11X ಪ್ರೊ ಸ್ಮಾರ್ಟ್‌ಫೋನ್ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಹಬ್ಬಕ್ಕೆ Xiaomi 'ಮಿ 11X ಪ್ರೊ' ಫೋನಿಗೆ ಎಷ್ಟು ಡಿಸ್ಕೌಂಟ್‌ ನೀಡಿದೆ ಗೊತ್ತಾ?

ಡಿಸ್‌ಪ್ಲೇ ವಿನ್ಯಾಸ ಮತ್ತು ರಚನೆ
ಶಿಯೋಮಿ ಮಿ 11X ಪ್ರೊ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ AMOLED 120Hz ರಿಫ್ರೆಶ್ ರೇಟ್‌, 360Hz ಟಚ್ ಸ್ಯಾಂಪ್ಲಿಂಗ್ ರೇಟ್‌, 1,300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ ಹೆಚ್‌ಡಿಆರ್ 10 + ಬೆಂಬಲ, 100% ಡಿಸಿಐ-ಪಿ3 ಯನ್ನು ಹೊಂದಿದೆ. ಸಿನಿಮಾ, ಯೂಟ್ಯೂಬ್ ವೀಡಿಯೊಗಳು ವೀಕ್ಷಣೆ ಮಾಡಲು ಪೂರಕವೆನಿಸಿದೆ. ಬ್ರೈಟ್ನೆಸ್‌ ಸಹ ಅತ್ಯುತ್ತಮವಾಗಿದ್ದು, ಹೆಚ್ಚು ಪ್ರಕಾಶಮಾನವಾಗಿ ಕಾಣುತ್ತದೆ.

ಪ್ರೊಸೆಸರ್‌ ಕಾರ್ಯವೈಖರಿ
ಶಿಯೋಮಿ ಮಿ 11X ಪ್ರೊ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಮಲ್ಟಿಟಾಸ್ಕ್ ಕೆಲಸಗಳಿಗೆ ಈ ಪ್ರೊಸೆಸರ್‌ ಪೂರಕವಾಗಿದೆ. ಅಧಿಕ ಗ್ರಾಫಿಕ್‌ ಗೇಮ್‌ಗಳನ್ನು ಪ್ಲೇ ಮಾಡಲು ಇದು ಪೂರಕವಾಗಿದೆ.

ಹಬ್ಬಕ್ಕೆ Xiaomi 'ಮಿ 11X ಪ್ರೊ' ಫೋನಿಗೆ ಎಷ್ಟು ಡಿಸ್ಕೌಂಟ್‌ ನೀಡಿದೆ ಗೊತ್ತಾ?

ಟ್ರಿಪಲ್ ಕ್ಯಾಮೆರಾ ಸೆನ್ಸಾರ್
ಶಿಯೋಮಿ ಮಿ 11X ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಪೋರ್ಟ್ರೇಟ್ ಮೋಡ್, ನೈಟ್ ಮೋಡ್, 30 ಎಫ್‌ಪಿಎಸ್‌ನಲ್ಲಿ 4 ಕೆ ವೀಡಿಯೊಗಳು, ಬ್ಯೂಟಿ ಮೋಡ್, ವ್ಲಾಗ್ ಮೋಡ್ ಆಯ್ಕೆಗಳನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಮಿ 11X ಪ್ರೊ ಸ್ಮಾರ್ಟ್‌ಫೋನ್‌ 4,520mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಮತ್ತು 2.5W ನಲ್ಲಿ ವೈರ್ಡ್ ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಸ್ಮಾರ್ಟ್‌ಫೋನ್‌ ಡಾಲ್ಬಿ ಅಟ್ಮೋಸ್ ಬೆಂಬಲದೊಂದಿಗೆ ಡ್ಯುಯಲ್ ಸ್ಪೀಕರ್‌ಗಳನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಡ್ಯುಯಲ್-ಬ್ಯಾಂಡ್ ವೈ-ಫೈ, ವೈ-ಫೈ 6, ಜಿಪಿಎಸ್, ಎಜಿಪಿಎಸ್, ನ್ಯಾವಿಕ್ ಬೆಂಬಲ, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು, ಹೈ-ರೆಸ್ ಆಡಿಯೋ ಮತ್ತು ಡಾಲ್ಬಿ ಅಟ್ಮೋಸ್ ಜೋರಾಗಿ ಮತ್ತು ಸಮತೋಲಿತ ಆಡಿಯೊ ವ್ಯವಸ್ಥೆ ನೀಡುತ್ತವೆ.

Best Mobiles in India

English summary
Xiaomi has announced that customers will get an exchange bonus of Rs 9,000 which will bring down the effective cost of the phone to Rs 30,999.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X