Doogee ಕಂಪೆನಿಯಿಂದ 12,000mAh ಬ್ಯಾಟರಿ ಸಾಮರ್ಥ್ಯದ ಸ್ಮಾರ್ಟ್‌ಫೋನ್ ಬಿಡುಗಡೆ!
ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿದೆ. ಇವುಗಳಲ್ಲಿ ಅನೇಕ ರಗಡ್ ಸ್ಮಾರ್ಟ್‌ಫೋನ್‌ಗಳು ಕೂಡ ಸೇರಿವೆ. ಈ ಸಾಲಿಗೆ ಡೋಗಿ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಸೇರಿವೆ. ಸದ್ಯ ಇದೀಗ ಡೋಗಿ ಕಂಪೆನಿ ತನ್ನ ಹೊಸ ಡೋಗಿ S89 ಮತ್ತು S89 ಪ್ರೊ ಸ್ಮಾರ್ಟ್‌ಫೋನ್‌ಗಳು ಬಿಡುಗಡೆಯಾಗಿವೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು ಮೀಡಿಯಾಟೆಕ್ ಹಿಲಿಯೋ P90 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿವೆ. ಜೊತೆಗೆ 12,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿವೆ.

ಹೌದು, ಡೋಗಿ ಕಂಪೆನಿ ಟೆಕ್ ಮಾರುಕಟ್ಟೆಯಲ್ಲಿ ಹೊಸ ಡೋಗಿ S89 ಮತ್ತು S89 ಪ್ರೊ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಈ ಎರಡು ಸ್ಮಾರ್ಟ್‌ಫೀನ್‌ಗಳು ರಗಡ್ ವಿನ್ಯಾಸವನ್ನು ಒಳಗೊಂಡಿವೆ. ಇದಲ್ಲದೆ ಡೋಗಿ S89 ಮತ್ತು S89 ಪ್ರೊ ಸ್ಮಾರ್ಟ್‌ಫೋನ್‌ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿವೆ. ಈ ಸ್ಮಾರ್ಟ್‌ಫೋನ್‌ಗಳು ಕಪ್ಪು ಮತ್ತು ಕಿತ್ತಳೆ ಬಣ್ಣದ ಆಯ್ಕೆಗಳಲ್ಲಿ ಬರಲಿವೆ. ಹಾಗಾದ್ರೆ ಡೋಗಿ S89 ಮತ್ತು S89 ಪ್ರೊ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡೋಗಿ S89 ಪ್ರೊ ಸ್ಮಾರ್ಟ್‌ಫೋನ್ ಫೀಚರ್ಸ್
ಡೋಗಿ S89 ಪ್ರೊ ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೋ P90 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಎರಡನೇ ಕ್ಯಾಮೆರಾ 20 ಮೆಗಾಪಿಕ್ಸೆಲ್ ಸೋನಿ ಸೆನ್ಸಾರ್, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಹೊಂದಿದೆ.

ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 65W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಬೆಂಬಲಿಸುವ 12,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 4 ರಿಂದ 6 ದಿನಗಳ ಬ್ಯಾಟರಿ ಬಾಳಿಕೆ ಮತ್ತು 36 ದಿನಗಳ ಸ್ಟ್ಯಾಂಡ್‌ಬೈ ಸಮಯವನ್ನು ಪಡೆಯುತ್ತದೆ ಎಂದು ಹೇಳಲಾಗಿದೆ. ಇದು NFC ಬೆಂಬಲ, ಡ್ಯುಯಲ್-ಬ್ಯಾಂಡ್ Wi-Fi ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ.

ಡೋಗಿ S89 ಸ್ಮಾರ್ಟ್‌ಫೋನ್ ಫೀಚರ್ಸ್
ಡೋಗಿ S89 ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಅನ್ನು ಹೊಂದಿದೆ.ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೋ P90 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.

ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 20 ಮೆಗಾಪಿಕ್ಸೆಲ್ ಸೋನಿ ಸೆನ್ಸಾರ್, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಕೂಡ 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಬೆಂಬಲಿಸುವ 12,000mAh ಬ್ಯಾಟರಿ ಬಲವನ್ನು ಒಳಗೊಂಡಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಫೇಸ್ ಅನ್‌ಲಾಕ್ ಫೀಚರ್ಸ್ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಡೋಗಿ ಕಂಪೆನಿಯ ಡೋಗಿ S89 ಸ್ಮಾರ್ಟ್‌ಫೋನ್ ಬೆಲೆ $309.99 (ಅಂದಾಜು 24,800ರೂ). ಬೆಲೆ ಹೊಂದಿದೆ. ಹಾಗೆಯೇ ಡೋಗಿ S89 ಪ್ರೊ ಸ್ಮಾರ್ಟ್‌ಫೋನ್ ಬೆಲೆ $359.99 (ಅಂದಾಜು 28,800ರೂ)ಆಗಿದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು ಆಲಿ ಎಕ್ಸ್‌ಪ್ರೆಸ್ ಮತ್ತು ಡೋಗಿಮಾಲ್ ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ.


Click it and Unblock the Notifications








