ಟ್ವಿಟರ್ ಖರೀದಿಸಿದ ಎಲಾನ್ ಮಸ್ಕ್: 44 ಶತಕೋಟಿ ಡಾಲರ್‌ಗೆ ಡೀಲ್!

|

ವಿಶ್ವದ ಜನಪ್ರಿಯ ಮೈಕ್ರೋಬ್ಲಾಗಿಂಗ್ ಸಾಮಾಜಿಕ ಜಾಲತಾಣ ಟ್ವಿಟರ್ ಸಂಸ್ಥೆಯನ್ನು ವಿಶ್ವದ ಅತ್ಯಂತ ಶ್ರೀಮಂತ ಉದ್ಯಮಿ ಹಾಗೂ ಅಮೆರಿಕದ ಟೆಸ್ಲಾ ಎಲೆಕ್ಟ್ರಿಕ್ ಕಾರ್ ಕಂಪನಿ ಮುಖ್ಯಸ್ಥ ಎಲಾನ್ ಮಸ್ಕ್ ಪ್ರತಿ ಷೇರಿಗೆ 54.20 ಡಾಲರ್​ನಂತೆ 44 ಶತಕೋಟಿ ಡಾಲರ್ ಮೊತ್ತಕ್ಕೆ ಟ್ವಿಟರ್ ಖರೀದಿ ಮಾಡಲು ಒಪ್ಪಿಕೊಂಡಿದ್ದಾರೆಂದು ವರದಿ ಆಗಿದೆ.

ಟ್ವಿಟರ್ ಖರೀದಿಸಿದ ಎಲಾನ್ ಮಸ್ಕ್: 44 ಶತಕೋಟಿ ಡಾಲರ್‌ಗೆ ಡೀಲ್!

ಟ್ವಿಟರ್‌ನ ಪ್ರತಿ ಷೇರಿಗೆ 54.20 ಡಾಲರ್ ನೀಡಿ ಪೂರ್ತಿ ಷೇರು ಖರೀದಿಸುವ ಎಲಾನ್ ಮಸ್ಕ್ ಪ್ರಸ್ತಾಪವನ್ನು ಟ್ವಿಟರ್ ಆಡಳಿತ ಮಂಡಳಿ ಒಪ್ಪಿದ್ದು, ಅದರಂತೆ ಹಲವು ದಿನಗಳಿಂದ ನಡೆಯುತ್ತಿದ್ದ ವ್ಯಾಪಾರ ಒಪ್ಪಂದಕ್ಕೆ ಈಗ ತೆರೆ ಬಿದ್ದಿದೆ. ಎಲಾನ್ ಮಸ್ಕ್ ಅವರು ಟ್ವಿಟರ್‌ನಲ್ಲಿ ಶೇ 9.2ರಷ್ಟು ಷೇರು ಪಾಲು ಹೊಂದಿದ್ದರು. ನಂತರದಲ್ಲಿ ಪ್ರತಿ ಷೇರಿಗೆ 54.20 ಡಾಲರ್‌ (₹4149) ನಂತೆ ಪಾವತಿಸಿ, ಪೂರ್ತಿ ಪಾಲು ಖರೀದಿಗೆ ಆಸಕ್ತಿ ವ್ಯಕ್ತಪಡಿಸಿದ್ದರು.

ಟ್ವಿಟರ್ ಖರೀದಿಸಿದ ಎಲಾನ್ ಮಸ್ಕ್: 44 ಶತಕೋಟಿ ಡಾಲರ್‌ಗೆ ಡೀಲ್!

ಎಲಾನ್ ಮಸ್ಕ್ ಅವರ ಟ್ವಿಟರ್ ಖರೀದಿ ಪ್ರಸ್ತಾಪಕ್ಕೆ ಮಂಡಳಿ ಸಮ್ಮತಿ ಸೂಚಿಸುವುದರೊಂದಿಗೆ, ಕಂಪನಿ ಪೂರ್ತಿಯಾಗಿ ಇದೀಗ ಎಲಾನ್ ಮಸ್ಕ್ ಪಾಲಾಗಿದೆ. 2013ರಿಂದ ಟ್ವಿಟರ್ ಸಾರ್ವಜನಿಕ ಷೇರು ಮೂಲಕ ಹೂಡಿಕೆ ಕಂಪನಿಯಾಗಿ ಬದಲಾಗಿತ್ತು. ಆದರೆ ಈಗ ಪೂರ್ತಿ ಷೇರು ಮಾರಾಟವಾಗಿ, ಎಲಾನ್ ಮಸ್ಕ್ ತೆಕ್ಕೆಗೆ ಬಂದಿರುವುದರಿಂದ, ಮುಂದೆ ಖಾಸಗಿ ಕಂಪನಿಯಾಗಿ ಮುಂದುವರಿಯಲಿದೆ ಎಂದು ತಿಳಿದು ಬಂದಿದೆ.

ಎಲಾನ್ ಮಸ್ಕ್ ಟ್ವೀಟ್ ಮಾಡಿ, ಟ್ವಿಟರ್ ಖರೀದಿಯನ್ನು 'Yessss' ಎಂದು ಸಂಭ್ರಮಿಸಿದ್ದಾರೆ. ವಾಕ್ ಸ್ವಾತಂತ್ರ್ಯವು ಕಾರ್ಯರೂಪದಲ್ಲಿರುವ ಯಾವುದೇ ಪ್ರಜಾಪ್ರಭುತ್ವದ ತಳಹದಿಯಾಗಿದೆ. ಟ್ವಿಟರ್ ಎನ್ನುವ ಡಿಜಿಟಲ್ ಜಗಲಿಯಲ್ಲಿ ಮನುಷ್ಯತ್ವದ ಭವಿಷ್ಯದ ಬಗ್ಗೆ ಚರ್ಚೆಯಾಗುತ್ತದೆ. ಟ್ವಿಟರ್​ನ ಆಲ್ಗೊರಿದಂಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡುವುದಷ್ಟೇ ಅಲ್ಲದೆ, ಎಲ್ಲರನ್ನೂ ತಲುಪುವಂತೆ ಮಾಡಬೇಕಿದೆ. ಟ್ವಿಟರ್​ಗೆ ಅಗಾಧವಾಗಿ ಬೆಳೆಯುವ ಸಾಮರ್ಥ್ಯವಿದೆ. ಅದನ್ನು ಸಾಧ್ಯವಾಗಿಸಲು ಕಂಪನಿಯೊಂದಿಗೆ, ಬಳಕೆದಾರರೊಂದಿಗೆ ಕೆಲಸ ಮಾಡಲು ನಾನು ಬಯಸುತ್ತೇನೆ ಎಂದು ಹೇಳಿದ್ದಾರೆ.

Most Read Articles
Best Mobiles in India

English summary
Elon Musk to acquire Twitter for $44 billion, take it private.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X