Home
ಸುದ್ದಿಜಾಲ

ಶೀಘ್ರದಲ್ಲೇ ಭಾರತದಲ್ಲಿ ಶಿಯೋಮಿ ಮಿ 11 ಲೈಟ್ ಸ್ಮಾರ್ಟ್‌ಫೋನ್‌ ಬಿಡುಗಡೆ!

ಜನಪ್ರಿಯ ಶಿಯೋಮಿ ಕಂಪೆನಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಭಾರತದ ಮಾರುಕಟ್ಟೆಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಸದ್ಯ ಇದೀಗ ಭಾರತದಲ್ಲಿ ಮಿ 11 ಲೈಟ್ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲು ಸಜ್ಜಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಜೂನ್ 22 ರಂದು ಲಾಂಚ್‌ ಆಗಲಿದೆ. ಇದನ್ನು ಜೂನ್ 22 ರ ಮಧ್ಯಾಹ್ನ 12:00 ಗಂಟೆಗೆ ಲೈವ್ ಸ್ಟ್ರೀಮ್ ಮೂಲಕ ಅನಾವರಣಗೊಳಿಸಲಾಗುತ್ತದೆ ಎನ್ನಲಾಗಿದೆ.

ಶಿಯೋಮಿ

ಹೌದು, ಶಿಯೋಮಿ ಹೊಸ ಮಿ 11 ಲೈಟ್ ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕವನ್ನು ನಿಗದಿಪಡಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.55-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಜೊತೆಗೆ 4,250mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಶಿಯೋಮಿ ಮಿ 11 ಲೈಟ್ ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 402 ಪಿಪಿಐ ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿರಲಿದೆ ಎಂದು ನಿರೀಕ್ಷಿಸಲಾಗಿದೆ. ಜೊತೆಗೆ 90Hz ರಿಫ್ರೆಶ್ ರೇಟ್‌ ಹೊಂದಿದೆ. ಇದು 240Hz ನ ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಸಹ ಹೊಂದಿರಲಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಮಿ 11 ಲೈಟ್ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 64GB , 6GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 5ಮೆಗಾಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್ ಅನ್ನು ಪಡೆದುಕೊಂಡಿದೆ. ಇದಲ್ಲದೆ 20ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಮಿ 11 ಲೈಟ್ ಸ್ಮಾರ್ಟ್‌ಫೋನ್‌ 4,250mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಯುಎಸ್‌ಬಿ ಟೈಪ್‌ ಸಿ 2ಯನ್ನು ಬೆಂಬಲಿಸಲಿದೆ ಎನ್ನಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮಿ 11 ಲೈಟ್‌ ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಸ್ಟೋರೇಜ್ ಮಾದರಿಗೆ ಚೀನಾದಲ್ಲಿ ಬೆಲೆ ಆರ್‌ಎಂಬಿ 2,299 (ಅಂದಾಜು 25,500 ರೂ.) ಆಗಿದೆ. 256GB ಸಂಗ್ರಹಣೆಯನ್ನು ಹೊಂದಿರುವ ರೂಪಾಂತರವು RMB 2,599 (ಅಂದಾಜು 28,800 ರೂ.) ಬೆಲೆ ಹೊಂದಿದೆ. ಇದೇ ಮಾದರಿಯ ಬೆಲೆಯನ್ನು ಭಾರತದಲ್ಲಿ ಹೊಂದುವ ಸಾದ್ಯತೆ ಇದೆ.

Best Mobiles in India

English summary
The Xiaomi Mi 11 Lite ships with a 6.55-inch FHD+ AMOLED panel that refreshes at 90Hz.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+