Home
ಸುದ್ದಿಜಾಲ

ಹೊಸ ವಿವೋ ಫೋನ್‌ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ!..ಈ ಆಫರ್‌ಗೆ ನೀವು ಫಿದಾ!

ಜನಪ್ರಿಯ ಇ ಕಾಮರ್ಸ್‌ ತಾಣ ಎನಿಸಿರುವ ಫ್ಲಿಪ್‌ಕಾರ್ಟ್‌ ತಾಣದಲ್ಲಿ ದಸರಾ ಹಬ್ಬದ ಅಂಗವಾಗಿ ಸೇಲ್‌ ನಡೆಯುತ್ತಿದ್ದು, ಪ್ರಮುಖ ಮೊಬೈಲ್‌ ಸಂಸ್ಥೆಗಳ ಫೋನ್‌ಗಳಿಗೆ ಬಿಗ್ ಡಿಸ್ಕೌಂಟ್‌ ನೀಡಿದೆ. ಈ ಹಬ್ಬದ ಮಾರಾಟ ಮೇಳದಲ್ಲಿ ವಿವೋ T2 5G ಸ್ಮಾರ್ಟ್‌ಫೋನ್‌ ಹುಬ್ಬೇರಿಸುವಂತಹ ರಿಯಾಯಿತಿ ಪಡೆದುಕೊಂಡಿದ್ದು, ಗ್ರಾಹಕರು ಫೋನಿನತ್ತ ಹಿಂತಿರುಗಿ ನೋಡುವಂತೆ ಆಗಿದೆ.

ಹೌದು, ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್‌ನಲ್ಲಿ ದಸರಾ ಸೇಲ್ ನಡೆಯುತ್ತಿದ್ದು, ವಿವೋ T2 5G ಸ್ಮಾರ್ಟ್‌ಫೋನ್‌ ಶೇ. 20% ರಷ್ಟು ನೇರ ಡಿಸ್ಕೌಂಟ್‌ ಪಡೆದಿದ್ದು, 128 GB ಸ್ಟೋರೇಜ್‌ ವೇರಿಯಂಟ್‌ ಫೋನ್‌ 19,999ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಕೆಲವು ಆಯ್ದ ಬ್ಯಾಂಕ್ ಆಫರ್‌, ಎಕ್ಸ್‌ಚೇಂಜ್ ಆಫರ್‌ ಸಹ ದೊರೆಯುತ್ತವೆ. ಹೀಗಾಗಿ ಎಲ್ಲ ಕೊಡುಗೆ ಸೇರಿ ಗ್ರಾಹಕರು 15,499ರೂ. ಗಳ ಡಿಸ್ಕೌಂಟ್‌ ದರದಲ್ಲಿ ಮೊಬೈಲ್‌ ಖರೀದಿ ಮಾಡಬಹುದು.

ಹೊಸ ವಿವೋ ಫೋನ್‌ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ!..ಈ ಆಫರ್‌ಗೆ ನೀವು ಫಿದಾ!

ಅಂದಹಾಗೆ ವಿವೋದ ಈ ಸ್ಮಾರ್ಟ್‌ಫೋನ್‌ 4,050 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, 44W ಫ್ಲ್ಯಾಶ್‌ಚಾರ್ಜ್ ಚಾರ್ಜಿಂಗ್ ಸೌಲಭ್ಯವನ್ನು ಸಪೋರ್ಟ್‌ ಮಾಡುತ್ತದೆ. ಇನ್ನು ಈ ಮೊಬೈಲ್‌ ಮಿಡ್‌ನೈಟ್ ಬ್ಲೂ ಮತ್ತು ಸನ್‌ಶೈನ್ ಗೋಲ್ಡ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಸಿಗುತ್ತದೆ. ಹಾಗಾದರೆ ಈ ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹಾಗೂ ಪ್ರೊಸೆಸರ್ ಬಲ

ವಿವೋ T2 5G ಮೊಬೈಲ್‌ 6.38 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಮೆಮೊರಿ ಹಾಗೂ ಕ್ಯಾಮೆರಾ ಸೆನ್ಸಾರ್

ಹಾಗೆಯೇ ಈ ಫೋನ್‌ 8GB ವರೆಗೆ ವರ್ಚುವಲ್ RAM ಅನ್ನು ಸಹ ನೀಡಲಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಕಲ್ಪಿಸಿದೆ. ಇನ್ನು ಈ ಮೊಬೈಲ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಹಾಗೂ ಇತರೆ ಫೀಚರ್ಸ್‌

ಈ ಫೋನಿನ ಕ್ಯಾಮೆರಾ ಫೀಚರ್ಸ್‌ನಲ್ಲಿ ಪೋರ್ಟ್ರೇಟ್, ಮೈಕ್ರೋ, ಪನೋರಮಾ, ಸ್ಲೋ ಮೋಷನ್, ಡ್ಯುಯಲ್ ವ್ಯೂ ವೀಡಿಯೋ ಮತ್ತು ಡಬಲ್ ಎಕ್ಸ್‌ಪೋಸರ್ ಸೌಲಭ್ಯ ಬೆಂಬಲಿಸಲಿದೆ. ಇದರ ಜೊತೆಗೆ 4500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಕೂಡಾ ಪಡೆದುಕೊಂಡಿದ್ದು, ಇದು 44W ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಸಪೋರ್ಟ್‌ ಮಾಡುತ್ತದೆ.

ಕಲರ್‌ ಆಯ್ಕೆ ಮಾಹಿತಿ ಹಾಗೂ ಲಭ್ಯತೆ

ದೇಶಿಯ ಮಾರುಕಟ್ಟೆಯಲ್ಲಿ ವಿವೋ T2 5G ಸ್ಮಾರ್ಟ್‌ಫೋನ್‌ 6 GB RAM + 128 GB ಸ್ಟೋರೇಜ್ ವೇರಿಯಂಟ್‌ ಆಯ್ಕೆ ಹಾಗೂ 8 GB + 128 GB ವೇರಿಯಂಟ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗೆಯೇ ಈ ಸ್ಮಾರ್ಟ್‌ಫೋನ್‌ ಅನ್ನು ಗ್ರಾಹಕರು ಗೋಲ್ಡ್, ಗ್ಲಿಮ್ಮರ್ ಬ್ಲ್ಯಾಕ್ ಮತ್ತು ಮೆರೈನ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿ ಮಾಡಬಹುದು. ಇನ್ನು ಈ ಮೊಬೈಲ್‌ ಫ್ಲಿಪ್‌ಕಾರ್ಟ್ ಇ ಕಾಮರ್ಸ್‌ ಸ್ಟೋರ್‌ಗಳ ಮೂಲಕ ಖರೀದಿ ಮಾಡಬಹುದಾಗಿದೆ.

Best Mobiles in India

English summary
Exciting price drop on Vivo T2 5G on flipkart website. offer price, specifications and other details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+