Home
ಸುದ್ದಿಜಾಲ

ಮೊಟೊರೊಲಾದ ಈ ಅಗ್ಗದ ಫೋನಿಗೆ ಭಾರೀ ಡಿಸ್ಕೌಂಟ್‌; ಆಫರ್‌ ತಿಳಿದ್ರೆ ವಾವ್‌ ಅಂತೀರಾ!

ಇ ಕಾಮರ್ಸ್‌ ವೆಬ್‌ಸೈಟ್‌ಗಳ ಪೈಕಿ ಪ್ರಮುಖ ಸ್ಥಾನದಲ್ಲಿ ಕಾಣಿಸಿಕೊಂಡಿರುವ ಫ್ಲಿಪ್‌ಕಾರ್ಟ್‌ ಎಲ್ಲ ವರ್ಗದ ಸ್ಮಾರ್ಟ್‌ಫೋನ್‌ಗಳಿಗೂ ಭರ್ಜರಿ ರಿಯಾಯಿತಿ ನೀಡುವ ಮೂಲಕ ಆನ್‌ಲೈನ್‌ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಇದೀಗ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ಕೆಲವು ಅಗ್ಗದ ಮೊಬೈಲ್‌ಗಳಿಗೆ ಸಖತ್ ರಿಯಾಯಿತಿ ಡಿಸ್ಕೌಂಟ್‌ ತಿಳಿಸಿದ್ದು, ಆ ಪೈಕಿ ಮೊಟೊರೊಲಾ ಸಂಸ್ಥೆಯ ಎಂಟ್ರಿ ಲೆವೆಲ್‌ ಫೋನ್‌ಗಳಲ್ಲಿ ಒಂದಾದ ಮೊಟೊರೊಲಾ g14 (Motorola g14) ಮೊಬೈಲ್‌ ವಾವ್‌ ಎನಿಸುವ ಆಫರ್‌ ಪಡೆದಿದೆ. ಈ ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಪಡೆದಿದೆ.

ಹೌದು, ಮೊಟೊರೊಲಾ g14 ಮೊಬೈಲ್‌ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ನಲ್ಲಿ ಶೇ. 34% ರಷ್ಟು ನೇರ ರಿಯಾಯಿತಿ ಬೆಲೆಯಲ್ಲಿ ಕಾಣಬಹುದಾಗಿದೆ. ಈ ಫೋನಿನ 4 GB RAM + 128 GB ಸ್ಟೋರೇಜ್‌ ವೇರಿಯಂಟ್‌ 8,499ರೂ. ಗಳ ಆಫರ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಅಂದಹಾಗೆ ಈ ಫೋನ್‌ ಯುನಿಸೋಕ್‌ T616 SoC ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ.

ಮೊಟೊರೊಲಾದ ಈ ಅಗ್ಗದ ಫೋನಿಗೆ ಭಾರೀ ಡಿಸ್ಕೌಂಟ್‌; ಆಫರ್‌ ತಿಳಿದ್ರೆ ವಾವ್‌ ಅಂತೀರಾ!

ಇನ್ನು ಮೊಟೊರೊಲಾ g14 ಮೊಬೈಲ್‌ ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯವನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇನ್ನು ಸ್ಮಾರ್ಟ್‌ಫೋನ್‌ ಸ್ಕೈ ಬ್ಲೂ ಮತ್ತು ಸ್ಟೀಲ್ ಗ್ರೇ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ. ಹಾಗಾದರೇ ಮೊಟೊರೊಲಾ ಈ ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಮೊಟೊರೊಲಾ g14 ಮೊಬೈಲ್‌ ಫೀಚರ್ಸ್‌

ಮೊಟೊರೊಲಾ g14 ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇನ್ನು ಡಿಸ್‌ಪ್ಲೇ 2400×1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 20:9 ರಚನೆಯ ಅನುಪಾತವನ್ನು ಒಳಗೊಂಡಿದ್ದು, 60Hz ರಿಫ್ರೆಶ್ ರೇಟ್‌, 120Hz ಟಚ್‌ ಸ್ಯಾಪ್ಲಿಂಗ್‌ ರೇಟ್‌ ಬೆಂಬಲಿಸಲಿದೆ. ಜೊತೆಗೆ ಡಿಸ್‌ಪ್ಲೇಯು 89.47% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದಿದೆ.

ಮೊಟೊರೊಲಾ g14 ಸ್ಮಾರ್ಟ್‌ಫೋನ್‌ ಯುನಿಸೋಕ್‌ T616 SoC ಪ್ರೊಸೆಸರ್‌ ವೇಗವನ್ನು ಪಡೆದಿದೆ. ಇದು Mali-G57 GPU ಸಪೋರ್ಟ್‌ ಪಡೆದಿದ್ದು, ಆಂಡ್ರಾಯ್ಡ್ 13 ಸಪೋರ್ಟ್‌ ಜೊತೆಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಮೊಟೊರೊಲಾ g14 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಪಡೆದಿದೆ. ದ್ವಿತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಮೊಟೊರೊಲಾ g14 ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಇದು 20W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್‌ ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5.0, GPS, USB ಟೈಪ್-C, 3.5 ಎಂಎಂ ಆಡಿಯೊ ಜಾಕ್ ಅನ್ನು ಹೊಂದಿದೆ. ಇದಲ್ಲದೆ ಸ್ಟಿರಿಯೊ ಸ್ಪೀಕರ್‌ಗಳು, ಡಾಲ್ಬಿ ಅಟ್ಮಾಸ್, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ಒಳಗೊಂಡಿದೆ.

ಮೊಟೊರೊಲಾ g14 ಸ್ಮಾರ್ಟ್‌ಫೋನ್‌ ಭಾರತದಲ್ಲಿ 4GB + 128GB ಸ್ಟೋರೇಜ್‌ ಆಯ್ಕೆಯಲ್ಲಿ ಲಭ್ಯವಿದೆ. ಇನ್ನು ಸ್ಮಾರ್ಟ್‌ಫೋನ್‌ ಸ್ಕೈ ಬ್ಲೂ ಮತ್ತು ಸ್ಟೀಲ್ ಗ್ರೇ ಬಣ್ಣಗಳಲ್ಲಿ ಲಭ್ಯವಾಗಲಿದೆ. ಖರೀದಿದಾರರು ಈ ಮೊಬೈಲ್‌ ಅನ್ನು ಫ್ಲಿಪ್‌ಕಾರ್ಟ್‌ ತಾಣದ ಮೂಲಕ ಖರೀದಿ ಮಾಡಬಹುದಾಗಿದೆ.

Best Mobiles in India

English summary
Fabulous Price Cut on Motorola g14 on Flipkart India. check offer price and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+