Home
ಸುದ್ದಿಜಾಲ

ಸ್ಟೈಲಿಶ್‌ ಲುಕ್‌ನಲ್ಲಿರುವ ಈ Vivo ಫೋನ್‌ ಬೆಲೆಯಲ್ಲಿ ಸಖತ್‌ ಇಳಿಕೆ!

ಆಕರ್ಷಕ ರಿಯಾಯಿತಿ ಸೇಲ್‌ ಮೇಳವನ್ನು ಘೋಷಿಸುವ ಮೂಲಕ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ ಶಾಪಿಂಗ್‌ ಪ್ರಿಯರನ್ನು ತನ್ನತ್ತ ಸೆಳದಿದೆ. ಈ ವೆಬ್‌ಸೈಟ್‌ ಬಹುತೇಕ ಎಲ್ಲ ವಿಭಾಗದ ಉತ್ಪನ್ನಗಳಿಗೂ ಅತ್ಯುತ್ತಮ ಕೊಡುಗೆ ಲಭ್ಯ ಮಾಡಿರುತ್ತದೆ. ಅದಾಗ್ಯೂ, ವಿಶೇಷವಾಗಿ ಫೋನ್‌ಗಳಿಗೆ OMG ಎನ್ನುವಂತಹ ಡಿಸ್ಕೌಂಟ್‌ ಕೊಡುಗೆಗಳನ್ನು ಘೋಷಿಸುತ್ತದೆ. ಇದೀಗ ಅಮೆಜಾನ್‌ ವೆಬ್‌ಸೈಟ್‌ನಲ್ಲಿ ವಿವೋ ಸಂಸ್ಥೆಯು ಅಗ್ಗದ ಬೆಲೆಯಲ್ಲಿ ಇರುವ ವಿವೋ T3 ಲೈಟ್‌ 5G (vivo T3 Lite 5G) ಮೊಬೈಲ್‌ ಸಖತ್ ಆಫರ್‌ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರು OMG ಎನ್ನುವಂತೆ ಆಗಿದೆ.

ಹೌದು, ಇ ಕಾಮರ್ಸ್‌ ಹಿರಿಯಣ್ಣ ಎನಿಸಿರುವ ಅಮೆಜಾನ್‌ ಪ್ಲಾಟ್‌ಫಾರ್ಮ್ನಲ್ಲಿ ಈಗ ವಿವೋ T3 ಲೈಟ್‌ 5G (vivo T3 Lite 5G) ಫೋನ್‌ ಶೇ. 27% ರಷ್ಟು ನೇರ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ 4GB RAM + 128GB ವೇರಿಯಂಟ್‌ 10,499ರೂ. ಗಳ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿ ಮಾಡಲು ಅವಕಾಶ ಇದೆ. ಇದರೊಂದಿಗೆ ಈ ಮೊಬೈಲ್‌ಗೆ ಕೆಲವು ಆಯ್ದ ಬ್ಯಾಂಕ್‌ ಆಫರ್‌ ಕೂಡಾ ಲಭ್ಯ ಇರುತ್ತವೆ.

ಸ್ಟೈಲಿಶ್‌ ಲುಕ್‌ನಲ್ಲಿರುವ ಈ Vivo ಫೋನ್‌ ಬೆಲೆಯಲ್ಲಿ ಸಖತ್‌ ಇಳಿಕೆ!

ಇನ್ನು ಈ ಫೋನ್‌ ವೈಬ್ರೆಂಟ್‌ ಗ್ರೀನ್ ಮತ್ತು ಮೆಜೆಸ್ಟಿಕ್ ಬ್ಲ್ಯಾಕ್‌ ಕಲರ್‌ ಆಯ್ಕೆಯಲ್ಲಿ ಈ ಫೋನ್‌ ಖರೀದಿಗೆ ಲಭ್ಯ ಆಗಲಿದೆ. ಇದರೊಂದಿಗೆ ಇದು 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಹಾಗೆಯೇ 15W ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯವನ್ನು ಪಡೆದುಕೊಂಡಿದೆ. ಇನ್ನುಳಿದಂತೆ ವಿವೋ T3 ಲೈಟ್‌ 5G ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ವಿವೋ T3 ಲೈಟ್‌ 5G - ಫೀಚರ್ಸ್‌ ಮಾಹಿತಿ
ವಿವೋ T3 ಲೈಟ್‌ 5G ಫೋನ್‌ 6.56 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ 90Hz ರಿಫ್ರೆಶ್ ರೇಟ್‌ ಆಯ್ಕೆ ಒಳಗೊಂಡಿದ್ದು, ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ ಬಲದಲ್ಲಿ ಕಾರ್ಯ ನಿರ್ವಹಿಸಲಿದೆ. ಅಲ್ಲದೇ ಇದು ಇತ್ತೀಚಿನ ಆಂಡ್ರಾಯ್ಡ್‌ 14 ಓಎಸ್‌ ಬೆಂಬಲ ಕೂಡಾ ಮಾಡುತ್ತದೆ.

ವಿವೋ T3 ಲೈಟ್‌ 5G ಫೋನ್‌ 4GB RAM + 128 GB ಹಾಗೂ 6GB RAM + 128 GB ಸ್ಟೋರೇಜ್‌ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸರ್ ಸೌಲಭ್ಯ ಪಡೆದಿದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಸೌಲಭ್ಯ ಪಡೆದುಕೊಂಡಿದೆ.

ವಿವೋ T3 ಲೈಟ್‌ 5G ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದಿದ್ದು, ಇದಕ್ಕೆ ಅನುಗುಣವಾಗಿ 15W ಫಾಸ್ಟ್ ಚಾರ್ಜಿಂಗ್ ಸಪೋರ್ಟ್‌ ಸಹ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್‌ ಡ್ಯುಯಲ್ 4G VoLTE, ವೈ ಫೈ 6, ಜಿಪಿಎಸ್‌, ಯುಎಸ್‌ಬಿ ಟೈಪ್-ಸಿ, ಸೈಡ್‌ ಮೌಂಟ್‌ ಫಿಂಗರ್‌ಫ್ರಿಂಟ್ ಸೆನ್ಸಾರ್ ಆಯ್ಕೆಗಳನ್ನು ಒಳಗೊಂಡಿದೆ.

Best Mobiles in India

English summary
Fabulous Price Cut on Vivo T3 Lite 5G Phone on Flipkart India. check out all details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+