Home
ಸುದ್ದಿಜಾಲ

ಒನ್‌ಪ್ಲಸ್‌ನ ಈ 8GB RAM ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಆಕರ್ಷಕ ಇಳಿಕೆ!

ಇ ಕಾಮರ್ಸ್‌ ದಿಗ್ಗಜ ಎನಿಸಿಕೊಂಡಿರುವ ಅಮೆಜಾನ್‌ ಮೊಬೈಲ್‌ಗಳಿಗೆ ಆಕರ್ಷಕ ಕೊಡುಗೆ ನೀಡುತ್ತದೆ. ಈ ಪ್ಲಾಟ್‌ಫಾರ್ಮ್ ಅಗ್ಗದ ಎಲ್ಲ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೂ ಆಕರ್ಷಕ ರಿಯಾಯಿತಿ ಲಭ್ಯ ಮಾಡುತ್ತದೆ. ಇದೀಗ ಅಮೆಜಾನ್‌ನಲ್ಲಿ ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಮೊಬೈಲ್‌ ಭರ್ಜರಿ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ.

ಹೌದು, ಅಮೆಜಾನ್‌ ಪ್ಲಾಟ್‌ಫಾರ್ಮ್ನಲ್ಲಿ ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಮೊಬೈಲ್ ಶೇ. 10% ರಷ್ಟು ಡಿಸ್ಕೌಂಟ್‌ ಪಡೆದಿದೆ. ಈ ಫೋನಿನ 8GB RAM + 128 GB ಸ್ಟೋರೇಜ್‌ ವೇರಿಯಂಟ್‌ ಅನ್ನು ಖರೀದಿದಾರರು 17,999ರೂ. ಗಳ ಆಫರ್‌ ಬೆಲೆಯಲ್ಲಿ ತಮ್ಮದಾಗಿಸಿಕೊಳ್ಳಬಹುದು. ಇದಲ್ಲದೇ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳಿಂದ ಇತರೆ ರಿಯಾಯಿತಿ ಕೂಡಾ ಲಭ್ಯ.

ಒನ್‌ಪ್ಲಸ್‌ನ ಈ 8GB RAM ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಆಕರ್ಷಕ ಇಳಿಕೆ!

ಹಾಗೆಯೇ ಈ ಮೊಬೈಲ್‌ 8GB RAM ಮತ್ತು 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದ್ದು, ಇದರೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಹ ಪಡೆದಿದೆ. ಇನ್ನು ಇದು ಡೈಮಂಡ್ ಡಸ್ಟ್ ಬ್ಲಾಕ್, ಎಥೆರಿಯಲ್ ಬ್ಲೂ ಮತ್ತು ಮಿಸ್ಟಿಕಲ್ ಗ್ರೀನ್ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೇ ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಫೀಚರ್ಸ್‌

ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಮೊಬೈಲ್‌ 6.72 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಪಡೆದಿದ್ದು, ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 91.4% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದುಕೊಂಡಿದೆ. ಇದಲ್ಲದೆ ಡಿಸ್‌ಪ್ಲೇ 391ppi ಪಿಕ್ಸೆಲ್ ಸಾಂದ್ರತೆಯನ್ನು ಪಡೆದಿದೆ.

ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಮೊಬೈಲ್‌ ಆಕ್ಟಾ-ಕೋರ್ ಸ್ನ್ಯಾಪ್‌ಡ್ರಾಗನ್‌ 695 SoC ಪ್ರೊಸೆಸರ್‌ ಪವರ್‌ ಹೊಂದಿದ್ದು, ಇದು ಆಂಡ್ರಾಯ್ಡ್ 13 ನಲ್ಲಿ ಆಕ್ಸಿಜನ್‌ OS 13.1 ನಲ್ಲಿ ಕಾರ್ಯ ನಿರ್ವಹಿಸಲಿದೆ. ಅಲ್ಲದೇ 8GB RAM ಮತ್ತು 256GB ಆಂತರೀಕ ಸ್ಟೋರೇಜ್‌ ಆಯ್ಕೆ ಪಡೆದಿದ್ದು, ಇದರೊಂದಿಗೆ RAM ಅನ್ನು ವಾಸ್ತವಿಕವಾಗಿ 8GB ವರೆಗೆ ವಿಸ್ತರಿಸಲು ಅವಕಾಶ ಇದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಇದೆ.

ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಮೊಬೈಲ್‌ ಮೂರು ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಪಡೆದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒದಗಿಸಲಾಗಿದೆ. ಸ್ಲೋ ಮೋಷನ್‌ ವಿಡಿಯೋ, ಡ್ಯುಯಲ್ ವ್ಯೂ ವಿಡಿಯೋ, HDR, ನೈಟ್‌ಸ್ಕೇಪ್, ಪೋಟ್ರೇಟ್ ಮೋಡ್ ಆಯ್ಕೆ ಇವೆ.

ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದು 67W ಸೂಪರ್‌ ವೂಕ್‌ ವೈರ್ಡ್‌ ಚಾರ್ಜಿಂಗ್‌ ಅನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G LTE, Wi-Fi, 3.5mm ಆಡಿಯೋ ಜಾಕ್, ಬ್ಲೂಟೂತ್ 5.1, GPS/ A-GPS ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ನೀಲಿಬಣ್ಣದ ಲೈಮ್ ಮತ್ತು ಕ್ರೋಮ್ಯಾಟಿಕ್ ಗ್ರೇ ಬಣ್ಣ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Best Mobiles in India

English summary
Fabulous Price Drop on OnePlus Nord CE 3 Lite 5G on amazon India. check out offer price and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+