ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌ ಖರೀದಿಸುವವರಿಗೆ ಇಲ್ಲಿದೆ ಸುವರ್ಣಾವಕಾಶ!

|

ದಕ್ಷಿಣ ಕೊರಿಯಾದ ಟೆಕ್‌ ದೈತ್ಯ ಸ್ಯಾಮ್‌ಸಂಗ್‌ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಇನ್ನು ತನ್ನ ಗ್ರಾಹಕರ ಅನುಕೂಲಕ್ಕಾಗಿ ವಿಶೇಷ ಆಫರ್‌ ಸೇಲ್‌ಗಳನ್ನು ಕೂಡ ನಡೆಸುತ್ತಾ ಬಂದಿದೆ. ಸದ್ಯ ಇದೀಗ ತನ್ನ ಪ್ರಮುಖ ಮತ್ತು ಫೋಲ್ಡೆಬಲ್‌ ಸ್ಮಾರ್ಟ್‌ಫೋನ್‌ ಖರೀದಿದಾರರಿಗೆ ಹೊಸ "ಈಗ ಖರೀದಿಸಿ, ನಂತರ ಪಾವತಿಸಿ" (Buy now, Pay later) ಆಯ್ಕೆಯನ್ನು ಪ್ರಕಟಿಸಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಕಂಪೆನಿ ತನ್ನ ಗ್ರಾಹಕರಿಗೆ 'ಈಗ ಖರೀದಿಸಿ, ನಂತರ ಪಾವತಿಸಿ' ಎಂಬ ಆಯ್ಕೆಯನ್ನು ಪ್ರಕಟಿಸಿದೆ. ಈ ಆಯ್ಕೆಯ ಮೂಲಕ ಗ್ರಾಹಕರು ಸ್ಯಾಮ್‌ಸಂಗ್‌ ಕಂಪೆನಿಯ ಆಯ್ದ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಬಹುದು, ನಂತರ ಹಣವನ್ನು ಪಾವತಿಸುವುದಕ್ಕೆ ಅವಕಾಶ ಸಿಗಲಿದೆ. ಅದರಂತೆ ಗ್ರಾಹಕರು ಇದೀಗ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22 ಸರಣಿ, ಗ್ಯಾಲಕ್ಸಿ Z ಫೊಲ್ಡ್‌ 3 ಮತ್ತು ಗ್ಯಾಲಕ್ಸಿ Z ಫ್ಲಿಪ್‌ 3 ಫೋನ್‌ಗಳನ್ನು ಈ ಆಫರ್‌ನಲ್ಲಿ ಖರೀದಿಸಬಹುದಾಗಿದೆ.

ಸ್ಯಾಮ್‌ಸಂಗ್‌

ಇನ್ನು ಸ್ಯಾಮ್‌ಸಂಗ್‌ ಕಂಪೆನಿಯ ಈ ಆಯ್ಕೆಯು ICICI ಬ್ಯಾಂಕ್ ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ಲಭ್ಯವಿದೆ. ಇದನ್ನು ಭಾರತದಲ್ಲಿರುವ ರಿಟೇಲ್‌ ಸ್ಟೋರ್‌ಗಳಲ್ಲಿ ಪಡೆದುಕೊಳ್ಳಬಹುದು. ಅದರಂತೆ ಈ ಆಫರ್‌ನಲ್ಲಿ, ಖರೀದಿದಾರರು ಹ್ಯಾಂಡ್‌ಸೆಟ್‌ನ ಒಟ್ಟು ಬೆಲೆಯ 60% ಹಣವನ್ನು 18 ಸಮಾನ ಮಾಸಿಕ ಕಂತುಗಳಲ್ಲಿ ಪಾವತಿಸಬೇಕಾಗುತ್ತದೆ. ಇನ್ನುಳಿದ 40% ಮೊತ್ತವನ್ನು 19ನೇ ಕಂತಿನಲ್ಲಿ ಬುಲೆಟ್ ಪಾವತಿಯಾಗಿ ಪಾವತಿಸಬೇಕಾಗುತ್ತದೆ. ಹಾಗಾದ್ರೆ ಈ ಆಫರ್‌ನಲ್ಲಿ ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌ ಖರೀದಿಸಲು ಗ್ರಾಹಕರು ಏನು ಮಾಡಬೇಕು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಸ್ಯಾಮ್‌ಸಂಗ್‌

ಸ್ಯಾಮ್‌ಸಂಗ್‌ ಕಂಪೆನಿ ತನ್ನ ಕೆಲವು ಆಯ್ದ ಸ್ಮಾರ್ಟ್‌ಫೋನ್‌ಗಳನ್ನು ಗ್ರಾಹಕರು ಹಣವಿಲ್ಲದೆ ಹೋದರು ಖರೀದಿಸುವುದಕ್ಕೆ ಅವಕಾಶ ನೀಡಿದೆ. ಆದರೆ ನಂತರದ ದಿನಗಳಲ್ಲಿ ಹಣ ಪಾವತಿಸುವುದಕ್ಕೆ ಅವಕಾಶ ನೀಡಿದೆ. ಹಾಗಂತ ಇದು ಎಲ್ಲಾ ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌ಗಳಿಗೆ ಅನ್ವಯವಾಗುವುದಿಲ್ಲ. ಈಗ ಖರೀದಿಸಿ ನಂತರ ಪಾವತಿಸಿ ಎನ್ನುವ ಈ ಹೊಸ ಆಯ್ಕೆಯಲ್ಲಿ ನೀವು ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22 ಸರಣಿ, ಗ್ಯಾಲಕ್ಸಿ Z ಫೊಲ್ಡ್‌ 3 ಮತ್ತು ಗ್ಯಾಲಕ್ಸಿ Z ಫ್ಲಿಪ್‌ 3 ಫೋನ್‌ಗಳನ್ನು ಖರೀದಿಸಬಹುದು. ಆದರೆ ಇದು ಐಸಿಐಸಿಐ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ಹೊಂದಿರುವವರಿಗೆ ಮಾತ್ರ ಲಭ್ಯವಾಗಲಿದೆ.

ಸ್ಯಾಮ್‌ಸಂಗ್‌

ಸ್ಯಾಮ್‌ಸಂಗ್‌ ತನ್ನ ವಿಶೇಷ ಆಯ್ಕೆಯ ಮೂಲಕ ಮೊದಲಿಗೆ ಸ್ಮಾರ್ಟ್‌ಫೋನ್‌ ಖರೀದಿಸುವುದಕ್ಕೆ ಅವಕಾಶ ನೀಡಿದೆ ನಿಜ. ಆದರೆ ಈ ಕೊಡುಗೆಗೆ ಆರ್ಹರಾಗಬೇಕಾದರೆ ಕೆಲವು ‍ಷರತ್ತುಗಳು ಕೂಡ ಅನ್ವಯವಾಗಲಿದೆ. ಅದರಂತೆ ಐಸಿಐಸಿಐ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ಹೊಂದಿರುವ ಗ್ರಾಹಕರು ಕನಿಷ್ಠ 1.5 ಲಕ್ಷ ರೂಪಾಯಿಗಳ ಕ್ರೆಡಿಟ್ ಮಿತಿಯನ್ನು ಹೊಂದಿರಬೇಕಾಗುತ್ತದೆ. ಅಂತಹ ಗ್ರಾಹಕರಿಗೆ ಮಾತ್ರ ಈ ಆಫರ್‌ನಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಲು ಅವಕಾಶ ಸಿಗಲಿದೆ.

ಸ್ಯಾಮ್‌ಸಂಗ್‌

ಇನ್ನು ಸ್ಯಾಮ್‌ಸಂಗ್‌ ಕಂಪೆನಿ ತನ್ನ ಪ್ರಮುಖ ಸ್ಮಾರ್ಟ್‌ಫೋನ್‌ಗಳಲ್ಲಿ ಜಿರೋ ಡೌನ್ ಪೇಮೆಂಟ್ ಮತ್ತು ಕೇವಲ 1% ಸಂಸ್ಕರಣಾ ಶುಲ್ಕವನ್ನು ಸಹ ನೀಡುತ್ತಿದೆ. ಇದಲ್ಲದೆ ಹೆಚ್ಚುವರಿಯಾಗಿ, ಗ್ಯಾಲಕ್ಸಿ S22 ಅಲ್ಟ್ರಾ 5G ಸ್ಮಾರ್ಟ್‌ಫೋನ್‌ ಖರೀದಿಸುವ ಗ್ರಾಹಕರು ಗ್ಯಾಲಕ್ಸಿ ವಾಚ್‌ 4 ಅನ್ನು ಕೇವಲ 2,999ರೂ.ಬೆಲೆಯಲ್ಲಿ ಖರೀದಿಸಬಹುದಾಗಿದೆ. ಹಾಗೆಯೇ ಗ್ಯಾಲಕ್ಸಿ S22+ ಮತ್ತು ಗ್ಯಾಲಕ್ಸಿ S22 5G ಸ್ಮಾರ್ಟ್‌ಫೋನ್‌ ಖರೀದಿಸುವವರು ಗ್ಯಾಲಕ್ಸಿ ಬಡ್ಸ್‌ 2 ಅನ್ನು 2,999ರೂ.ಗಳಿಗೆ ಪಡೆದುಕೊಳ್ಳಬಹುದಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22 ಸ್ಮಾರ್ಟ್‌ಫೋನ್‌ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಬರುತ್ತದೆ. ಇದರ 8GB RAM+256GB ಸ್ಟೋರೇಜ್ ವೇರಿಯಂಟ್ ಬೆಲೆ 76,999ರೂ. ಆಗಿದೆ. ಹಾಗೆಯೇ 8GB RAM+128GB ವೇರಿಯಂಟ್ ಬೆಲೆ 72,999 ರೂ. ಆಗಿದೆ. ಈ ಸ್ಮಾರ್ಟ್‌ಫೋನ್‌ ಫ್ಯಾಂಟಮ್ ಬ್ಲಾಕ್, ಫ್ಯಾಂಟಮ್ ವೈಟ್ ಮತ್ತು ಗ್ರೀನ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.1 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದೆ. ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 3700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22+

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22+

ಇನ್ನು ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22+ ಸ್ಮಾರ್ಟ್‌ಫೋನ್‌ 8GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಯು 84,999ರೂ.ಬೆಲೆ ಹೊಂದಿದೆ. ಹಾಗೆಯೇ 8GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಯು 88,999ರೂ.ಬೆಲೆ ಹೊಂದಿದೆ. ಇದು ಫ್ಯಾಂಟಮ್ ಬ್ಲ್ಯಾಕ್, ಫ್ಯಾಂಟಮ್ ವೈಟ್ ಮತ್ತು ಗ್ರೀನ್ ಬಣ್ಣದ ರೂಪಾಂತರಗಳಲ್ಲಿ ಬರುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿವೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಗ್ಯಾಲಕ್ಸಿ S22+ 4,500mAh ಸಾಂರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 45W ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22 ಅಲ್ಟ್ರಾ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22 ಅಲ್ಟ್ರಾ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22 ಅಲ್ಟ್ರಾ ಸ್ಮಾರ್ಟ್‌ಫೋನ್‌ 12GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಯು 1,09,999ರೂ. ಬೆಲೆ ಹೊಂದಿದೆ. ಹಾಗೆಯೇ 12 GB RAM + 512GB ರೂಪಾಂತರವು 1,18,999ರೂ.ಬೆಲೆಗೆ ದೊರೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.8 ಇಂಚಿನ ಎಡ್ಜ್ QHD+ ಡೈನಾಮಿಕ್ ಅಮೋಲೆಡ್‌ 2X ಡಿಸ್‌ಪ್ಲೇ ಹೊಂದಿದೆ. ಇದು 1,750ನಿಟ್‌ಗಳ ಗರಿಷ್ಠ ಬ್ರೈಟ್‌ನೆಸ್‌ ಮಟ್ಟವನ್ನು ಹೊಂದಿದೆ. ಈ ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 45W ನಲ್ಲಿ ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ.

Best Mobiles in India

English summary
Fantastic Deals and discounts on samsung flagship smartphones.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X