ಪೊಕೊ X6 ನಿಯೋ ಫೋನ್ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ! ಈ ಆಫರ್ ಬಿಡಬೇಡಿ!
ಪೊಕೊ (POCO) ಸಂಸ್ಥೆಯು ಕೆಲವು ಜನಪ್ರಿಯ ಮೊಬೈಲ್‌ಗಳು ಈಗಾಗಲೇ ಮಾರುಕಟ್ಟೆಯಲ್ಲಿ ಸೈ ಎನಿಸಿಕೊಂಡಿವೆ. ಆ ಪೈಕಿ ಸಂಸ್ಥೆಯ X ಸರಣಿಯ ಫೋನ್‌ಗಳು ಮೀಡ್‌ರೇಂಜ್ ವಿಭಾಗದಲ್ಲಿ ಮೊಬೈಲ್ ಪ್ರಿಯರ ಗಮನ ಸೆಳೆದಿದೆ. ಸಂಸ್ಥೆಯು ಇದೀಗ ಪೊಕೊ X6 ನಿಯೋ (POCO X6 Neo 5G) ಸ್ಮಾರ್ಟ್‌ಫೋನ್ ಸಖತ್ ಫೀಚರ್ಸ್ ಜೊತೆಗೆ 108 ಮೆಗಾ ಪಿಕ್ಸಲ್ ಸೆನ್ಸಾರ್ ಸೌಲಭ್ಯದ ಕ್ಯಾಮೆರಾ ಅನ್ನು ಒಳಗೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಪೊಕೊ ಸಂಸ್ಥೆಯ ಪೊಕೊ X6 ನಿಯೋ (POCO X6 Neo 5G) ಮೊಬೈಲ್ ಬಿಗ್ ಡಿಸ್ಕೌಂಟ್‌ನಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಫೋನಿನ 12 GB RAM + 256 GB ಸ್ಟೋರೇಜ್‌ನ ವೇರಿಯಂಟ್ ಶೇ. 29% ರಷ್ಟು ರಿಯಾಯಿತಿ ಪಡೆದಿದೆ. ಇದನ್ನು ಗ್ರಾಹಕರು 15,499ರೂ. ಗಳ ಆಫರ್ ಬೆಲೆಯಲ್ಲಿ ಖರೀದಿ ಮಾಡಬಹುದು.

ಪೊಕೊ X6 ನಿಯೋ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಹಾಗೆಯೇ 33W ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ. ಅಲ್ಲದೇ ಆಸ್ಟ್ರಲ್ ಬ್ಲ್ಯಾಕ್, ಹರೈಸನ್ ಬ್ಲೂ ಮತ್ತು ಆರೆಂಜ್ ಕಲರ್ ಆಯ್ಕೆಯಲ್ಲಿ ಲಭ್ಯ ಇದೆ. ಇನ್ನುಳಿದಂತೆ ಪೊಕೊ X6 ನಿಯೋ (POCO X6 Neo 5G) ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಪೊಕೊ X6 ನಿಯೋ - ಫೀಚರ್ಸ್
ಪೊಕೊ X6 ನಿಯೋ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಒಳಗೊಂದಿದ್ದು, ಈ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 120Hz, 1000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಲೆವೆಲ್ ಅನ್ನು ಸಪೋರ್ಟ್ ಮಾಡುತ್ತದೆ. ಜೊತೆಗೆ ಇದರ ಡಿಸ್‌ಪ್ಲೇಯು 88.9% ಸ್ಕ್ರೀನ್-ಟು-ಬಾಡಿ ಅನುಪಾತದಲ್ಲಿ ಇದ್ದು, 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.
ಪೊಕೊ X6 ನಿಯೋ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ (6 nm) ಪ್ರೊಸೆಸರ್ ಬಲ ಪಡೆದಿದ್ದು, ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಬೆಂಬಲ ಜೊತೆಗೆ ಕಾರ್ಯ ನಿರ್ವಹಿಸಲಿದೆ. ಅಲ್ಲದೇ ಇದು 8GB + 128GB ಸ್ಟೋರೇಜ್ ಮತ್ತು 12GB + 256GB ಸ್ಟೋರೇಜ್ ಆಯ್ಕೆಗಳನ್ನು ಒಳಗೊಂಡಿದೆ. ಅಲ್ಲದೇ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೂ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆ ಒಳಗೊಂಡಿದೆ.
ಪೊಕೊ X6 ನಿಯೋ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಇದರ ಮೊದಲ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದರ ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಇದರ ಜೊತೆಗೆ ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ.
ಪೊಕೊ X6 ನಿಯೋ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದು 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಒದಗಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ವೈಫೈ, ಯುಎಸ್‌ಬಿ ಟೈಪ್ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ. ಇನ್ನು ಈ ಫೋನ್ 8GB + 128GB ಸ್ಟೋರೇಜ್ ವೇರಿಯಂಟ್ ಹಾಗೂ 12GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಯಲ್ಲಿ ಸಿಗಲಿದೆ. ಇನ್ನು ಈ ಮೊಬೈಲ್ ಆಸ್ಟ್ರಲ್ ಬ್ಲ್ಯಾಕ್, ಹರೈಸನ್ ಬ್ಲೂ ಮತ್ತು ಆರೆಂಜ್ ಕಲರ್ ಆಯ್ಕೆ ಹೊಂದಿದೆ.


Click it and Unblock the Notifications








