ಬಜೆಟ್ ಬೆಲೆಯ ಈ 5G ಫೋನ್ ಬೆಲೆಯಲ್ಲಿ ಇಳಿಕೆ; ಇದರ ಡಿಸ್‌ಪ್ಲೇಗೆ ನೀವು ಫಿದಾ ಆಗ್ತೀರಾ!
ಇ ಕಾಮರ್ಸ್ ದಿಗ್ಗಜ ಪ್ಲಾಟ್‌ಫಾರ್ಮ್ ಅಮೆಜಾನ್ ತಾಣವು ಇದೀಗ ರಕ್ಷಾ ಬಂಧನ ಪ್ರಯುಕ್ತ ಮೊಬೈಲ್‌ಗಳಿಗೆ ಭರ್ಜರಿ ರಿಯಾಯಿತಿ ತಿಳಿಸಿದೆ. ಈ ಮಾರಾಟದಲ್ಲಿ ಆಯ್ದ ಕೆಲವು ಫೋನ್‌ಗಳು ವಿಶೇಷ ಡಿಸ್ಕೌಂಟ್ ಪಡೆದಿದ್ದು, ಆ ಪೈಕಿ ಲಾವಾ ಬ್ಲೇಜ್ X 5G (Lava Blaze X 5G) ಫೋನ್ ಸೂಪರ್ ಬೆಲೆ ಇಳಿಕೆ ಪಡೆದಿದೆ. ಅಂದಹಾಗೆ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 SoC ಪ್ರೊಸೆಸರ್ ಪವರ್ ಪಡೆದಿದ್ದು ಪ್ರಮುಖ ಹೈಲೈಟ್ ಎನಿಸಿಕೊಂಡಿದೆ.
ಹೌದು, ಅಮೆಜಾನ್ ಆಯೋಜಿಸಿರುವ ಈ ಸೇಲ್‌ನಲ್ಲಿ ಲಾವಾ ಕಂಪನಿಯ ಲಾವಾ ಬ್ಲೇಜ್ X 5G (Lava Blaze X 5G) ಫೋನ್ ಶೇ. 14% ರಷ್ಟು ನೇರ ಡಿಸ್ಕೌಂಟ್ ಪಡೆದಿದೆ. ಈ ಮೊಬೈಲ್‌ನ 4GB RAM + 128GB ಸ್ಟೋರೇಜ್ ವೇರಿಯಂಟ್ ಆಫರ್‌ನಲ್ಲಿ 14,999ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಸಹ ಪಡೆಯಬಹುದಾಗಿದೆ.

ಇನ್ನು ಈ ಮೊಬೈಲ್ ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್ ಟೈಟಾನಿಯಂ ಗ್ರೇ ಮತ್ತು ಸ್ಟಾರ್‌ಲೈಟ್ ಪರ್ಪಲ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನುಳಿದಂತೆ ಲಾವಾ ಬ್ಲೇಜ್ X 5G ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.
ಲಾವಾ ಬ್ಲೇಜ್ X 5G - ಫೀಚರ್ಸ್
ಲಾವಾ ಬ್ಲೇಜ್ X 5G ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇಯು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಇದೆ. ಇನ್ನು ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಪಡೆದಿದ್ದು, 800 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಲೆವೆಲ್ ಪಡೆದಿದೆ.
ಲಾವಾ ಬ್ಲೇಜ್ X 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 SoC ಪ್ರೊಸೆಸರ್ ಪವರ್ ಅನ್ನು ಹೊಂದಿದ್ದು, ಇದು ಆಂಡ್ರಾಯ್ಡ್ 14 ಓಎಸ್ ಬೆಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ. ಇದರ ಜೊತೆಗೆ ಮಾಲಿ-G68 MC4 GPU ಸಪೋರ್ಟ್ ಪಡೆದಿದೆ. ಇದರೊಂದಿಗೆ 4GB + 128 GB, 6GB + 256GB ಹಾಗೂ 8GB + 256GB ಸ್ಟೋರೇಜ್ ಸಾಮರ್ಥ್ಯದ ಆಯ್ಕೆಗಳನ್ನು ಪಡೆದಿದೆ.
ಲಾವಾ ಬ್ಲೇಜ್ X 5G ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ದ್ವಿತೀಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.
ಲಾವಾ ಬ್ಲೇಜ್ X 5G ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಅನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ಬಿ ಟೈಪ್-ಸಿ ಆಡಿಯೋ, ಎಫ್‌ಎಂ ರೇಡಿಯೋ, ಸ್ಟಿರಿಯೊ ಸ್ಪೀಕರ್‌ಗಳು, ಡಾಲ್ಬಿ ಅಟ್ಮಾಸ್, 5G, ಡ್ಯುಯಲ್ 4G VoLTE, Wi-Fi 6, ಬ್ಲೂಟೂತ್ 5.2, ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸ್ನ್ಯಾನರ್, ಯುಎಸ್‌ಬಿ ಟೈಪ್-ಸಿ ಅನ್ನು ಸಪೋರ್ಟ್ ಮಾಡುತ್ತದೆ.


Click it and Unblock the Notifications








