Home
ಸುದ್ದಿಜಾಲ

ಸ್ಯಾಮ್‌ಸಂಗ್‌ನ ಅತ್ಯುತ್ತಮ ಕ್ಯಾಮೆರಾ ಫೋನ್‌ ಬೇಕೆ?..ಹಾಗಿದ್ರೆ ಈ ಡಿಸ್ಕೌಂಟ್‌ ಬಿಡಬೇಡಿ!

ಜನಪ್ರಿಯ ಫ್ಲಿಪ್‌ಕಾರ್ಟ್‌ನಲ್ಲಿ ( Flipkart ) ಇ ಕಾಮರ್ಸ್‌ ತಾಣದಲ್ಲಿ ಮೊಬೈಲ್‌ಗಳಿಗೆ ಒಂದಿಲ್ಲೊಂದು ಆಫರ್‌ ಇರುತ್ತದೆ. ಇನ್ನು ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣವು ಎಲ್ಲ ವಿಭಾಗದ ಸ್ಮಾರ್ಟ್‌ಫೋನ್‌ಗಳಿಗೂ ಸಹ ಆಕರ್ಷಕ ರಿಯಾಯಿತಿ ನೀಡುತ್ತಾ ಸಾಗಿದೆ. ಆ ಪೈಕಿ ಸದ್ಯ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A35 5G (Samsung Galaxy A35 5G) ಫೋನ್‌ ಭರ್ಜರಿ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ.

ಹೌದು, ಜನಪ್ರಿಯ ಇ ಕಾಮರ್ಸ್‌ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A35 5G ಸ್ಮಾರ್ಟ್‌ಫೋನ್‌ ಶೇ. 13% ರಷ್ಟು ನೇರ ಡಿಸ್ಕೌಂಟ್‌ ಪಡೆದಿದೆ. ಈ ಫೋನ್‌ 8GB RAM + 128GB ಸ್ಟೋರೇಜ್‌ ವೇರಿಯಂಟ್‌ 29,499ರೂ. ಗಳ ಆಫರ್‌ ದರದಲ್ಲಿ ಖರೀದಿಗೆ ಲಭ್ಯ ಇದೆ. ಇದರ ಜೊತೆಗೆ ಆಯ್ದ ಬ್ಯಾಂಕ್‌ಗಳಿಂದ ಸಹ ಆಕರ್ಷಕ ರಿಯಾಯಿತಿ ಸಹ ದೊರೆಯಲಿದೆ.

ಸ್ಯಾಮ್‌ಸಂಗ್‌ನ ಅತ್ಯುತ್ತಮ ಕ್ಯಾಮೆರಾ ಫೋನ್‌ ಬೇಕೆ?..ಈ ಡಿಸ್ಕೌಂಟ್‌ ಬಿಡಬೇಡಿ!

ಹಾಗೆಯೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A35 5G ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದೆ. ಅಲ್ಲದೇ ಈ ಫೋನಿನ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೌಲಭ್ಯ ಒಳಗೊಂಡಿದ್ದು, ಇದರ ಸೆಲ್ಫಿ ಕ್ಯಾಮೆರಾವು 13 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗಾದರೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A35 5G ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ

ಡಿಸ್‌ಪ್ಲೇ ಡಿಸೈನ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A35 5G ಫೋನ್‌ 1080 × 2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೊಲೆಡ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಪ್ರತಿ ಇಂಚಿನ ಪಿಕ್ಸಲ್‌ ಸಾಂದ್ರತೆಯು 389 PPI ಆಗಿದ್ದು, 120 Hz ರಿಫ್ರೆಶ್‌ ರೇಟ್‌ ಸೌಲಭ್ಯ ಸಹ ಪಡೆದಿದೆ.

ಪ್ರೊಸೆಸರ್‌ ಬಲ ಯಾವುದು

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A35 5G ಫೋನ್‌ Exynos 1380 ಚಿಪ್‌ಸೆಟ್‌ ಪ್ರೊಸೆಸರ್ ಸೌಲಭ್ಯ ಅನ್ನು ಒಳಗೊಂಡಿದ್ದು, ಇದರ ಜೊತೆಗೆ ಮಾಲಿ G68 GPUಸಪೋರ್ಟ್ ಅನ್ನು ಪಡೆದಿದೆ. ಹಾಗೆಯೇ ಇದು ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಕೂಡಾ ಒಳಗೊಂಡಿದೆ. ಇದು 8GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ.

ಕ್ಯಾಮೆರಾ ಸೆನ್ಸಾರ್‌ ಮಾಹಿತಿ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A35 5G ಫೋನ್‌ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸಲ್‌ ಸೌಲಭ್ಯದಲ್ಲಿ ಇದೆ ಹಾಗೂ ಮೂರನೇ ಕ್ಯಾಮೆರಾವು 5 ಮೆಗಾ ಪಿಕ್ಸಲ್‌ ಸೆನ್ಸಾರ್‌ ಹೊಂದಿವೆ. ಇನ್ನು ಸೆಲ್ಫಿ ಕ್ಯಾಮೆರಾವು 13 ಮೆಗಾ ಪಿಕ್ಸಲ್‌ ಸೆನ್ಸಾರ್‌ ಆಗಿದೆ.

ಬಿಗ್‌ ಬ್ಯಾಟರಿ ಬ್ಯಾಕ್‌ಅಪ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A35 5G ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ. ಇದಕ್ಕೆ ಪೂರಕವಾಗಿ 25W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಒಳಗೊಂಡಿದೆ. ಇನ್‌ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ ಸೌಲಭ್ಯ ಸಹ ಪಡೆದುಕೊಂಡಿದೆ.

ಮೆಮೊರಿ ಹಾಗೂ ಕಲರ್ ಆಯ್ಕೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A35 5G ಫೋನ್‌ 8 GB + 128 GB ಸ್ಟೋರೇಜ್ ವೇರಿಯಂಟ್‌ ಹಾಗೂ 8 GB + 256 GB ಸ್ಟೋರೇಜ್ ವೇರಿಯಂಟ್‌ ಆಯ್ಕೆ ಗಳನ್ನು ಒಳಗೊಂಡಿದೆ. ಇನ್ನು ಈ ಫೋನ್‌ ಆಸ್ಸಮ್ ಐಸ್‌ ಬ್ಲೂ, ಆಸ್ಸಮ್ ಲೈಲಾಕ್ ಹಾಗೂ ಆಸ್ಸಮ್ ನಾವಿ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಸಿಗಲಿದೆ.

Best Mobiles in India

English summary
Fantastic Price Drop on Samsung Galaxy A35 5G on Flipkart End of Season Sale. Check out offers, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+