Home
ಸುದ್ದಿಜಾಲ

ಭರ್ಜರಿ ಸಿಹಿಸುದ್ದಿ: ಹೊಸ FASTag ಪಾಸ್ ಘೋಷಣೆ, ವಾರ್ಷಿಕ 3,000 ರೂ. ಮಾತ್ರ!

ದೇಶಾದ್ಯಂತ ರಾಷ್ಟ್ರೀಯ ರಸ್ತೆಗಳಲ್ಲಿ ಸುಗಮ ಮತ್ತು ವೆಚ್ಚ-ಪರಿಣಾಮಕಾರಿ ಪ್ರಯಾಣಕ್ಕಾಗಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಇಂದು ಖಾಸಗಿ ವಾಹನ ಮಾಲೀಕರಿಗೆ ಭರ್ಜರಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಟೋಲ್ ಪ್ಲಾಜಾಗಳಲ್ಲಿ ಪದೇ ಪದೇ ಟೋಲ್ ಪಾವತಿಸುವ ಚಿಂತೆಯಿಂದ ಮುಕ್ತಿ ಪಡೆಯಲು ವಾರ್ಷಿಕ ಪಾಸ್ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಸಚಿವಾಲಯವು ತಿಳಿಸಿದ್ದು, ಕೇಂದ್ರ ಸಚಿವ ನಿತಿನ್ ಗಡ್ಕರಿ ತಮ್ಮ ಅಧಿಕೃತ X (ಹಿಂದೆ ಟ್ವಿಟರ್) ಪುಟದಲ್ಲಿ ಈ ಸುದ್ದಿಯನ್ನು ದೃಢಪಡಿಸಿದ್ದಾರೆ. ಈ ಮೂಲಕ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸುವುದು ಈಗ ಇನ್ನಷ್ಟು ಸುಲಭ ಮತ್ತು ಕಡಿಮೆ ವೆಚ್ಚದಾಯಕವಾಗಲಿದೆ. ಈ ಹೊಸ ವ್ಯವಸ್ಥೆಯಿಂದ ಟೋಲ್ ವೆಚ್ಚ ಎಷ್ಟು ಕಡಿಮೆಯಾಗಲಿದೆ ಎಂದರೆ, ಒಂದು ಟ್ರಿಪ್‌ಗೆ ಕೇವಲ ₹15 ರಷ್ಟು ಟೋಲ್ ಪಾವತಿಸಿದಂತಾಗುತ್ತದೆ.! ಈ ಕುರಿತ ಸಂಪೂರ್ಣ ಮಾಹಿತಿಯನ್ನು ಮುಂದೆ ಓದಿ ತಿಳಿಯೋಣ ಬನ್ನಿ.

ಏನಿದು ಫಾಸ್ಟ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್?
ಸರ್ಕಾರವು ₹3,000 ಮೊತ್ತದ ಫಾಸ್ಟ್‌ಟ್ಯಾಗ್ (FASTag) ಆಧಾರಿತ ವಾರ್ಷಿಕ ಪಾಸ್ ಸೌಲಭ್ಯವನ್ನು ಪ್ರಾರಂಭಿಸಲಿದೆ ಎಂದು ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಈ ಪಾಸ್ ಅನ್ನು ಆಗಸ್ಟ್ 15, 2025 ರಿಂದ ನೀಡಲಾಗುವುದು. ಈ ಸೌಲಭ್ಯವು ವಾಣಿಜ್ಯೇತರ ಖಾಸಗಿ ವಾಹನಗಳಿಗೆ ಮಾತ್ರ ಲಭ್ಯವಿರುತ್ತದೆ. ಈ ಪಾಸ್ ಅನ್ನು ಸಕ್ರಿಯಗೊಳಿಸಿದ ದಿನಾಂಕದಿಂದ ಒಂದು ವರ್ಷದವರೆಗೆ ಅಥವಾ 200 ಟ್ರಿಪ್‌ಗಳಿಗೆ (ಯಾವುದು ಮೊದಲು ಬರುತ್ತದೆಯೋ ಅದು) ಮಾನ್ಯವಾಗಿರುತ್ತದೆ.

ಭರ್ಜರಿ ಸಿಹಿಸುದ್ದಿ: ಹೊಸ FASTag ಪಾಸ್ ಘೋಷಣೆ, ವಾರ್ಷಿಕ 3,000 ರೂ. ಮಾತ್ರ!

ಪ್ರಯಾಣದ ವೆಚ್ಚದಲ್ಲಿ ಭಾರಿ ಇಳಿಕೆ
ಪ್ರಸ್ತುತ, ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್ ಪ್ಲಾಜಾಗಳಲ್ಲಿ ₹100 ರಿಂದ ₹200 ವರೆಗೆ ಟೋಲ್ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆದರೆ, ಈ ಹೊಸ ವಾರ್ಷಿಕ ಪಾಸ್ ಅಡಿಯಲ್ಲಿ, ಒಂದು ಟ್ರಿಪ್‌ಗೆ ಕೇವಲ ₹15 ರಷ್ಟು ಟೋಲ್ ಪಾವತಿಸಿದಂತಾಗುತ್ತದೆ. ಇದು ಖಾಸಗಿ ವಾಹನ ಸವಾರರಿಗೆ ಪ್ರಯಾಣದ ವೆಚ್ಚದಲ್ಲಿ ಗಣನೀಯ ಇಳಿಕೆಗೆ ಸಹಾಯಕವಾಗಲಿದೆ. ಇದರಿಂದ ವಾಹನ ಸವಾರರು ಸಾವಿರಾರು ರೂಪಾಯಿ ಹಣವನ್ನು ಉಳಿಸಲು ಸಾಧ್ಯವಾಗಲಿದೆ.

ಫಾಸ್ಟ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಪಡೆಯುವುದು ಹೇಗೆ?
ಈ ವಾರ್ಷಿಕ ಪಾಸ್ ಅನ್ನು ಸಕ್ರಿಯಗೊಳಿಸಲು ಮತ್ತು ನವೀಕರಿಸಲು ಪ್ರತ್ಯೇಕ ಲಿಂಕ್ ಅನ್ನು ಶೀಘ್ರದಲ್ಲೇ ರಾಜ್‌ಮಾರ್ಗ್ ಯಾತ್ರಾ ಅಪ್ಲಿಕೇಶನ್ ಹಾಗೂ NHAI (ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ) ಮತ್ತು MoRTH (ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ) ಅಧಿಕೃತ ವೆಬ್‌ಸೈಟ್‌ಗಳಲ್ಲಿ ಲಭ್ಯವಾಗುವಂತೆ ಮಾಡಲಾಗುವುದು ಎಂದು ಗಡ್ಕರಿ ಅವರು ತಿಳಿಸಿದ್ದಾರೆ.

ನಿತಿನ್ ಗಡ್ಕರಿ ಅವರು ಹೇಳಿದ್ದೇನೆ?
ಸಚಿವ ನಿತಿನ್ ಗಡ್ಕರಿ ಅವರು ತಮ್ಮ ಅಧಿಕೃತ 'ಎಕ್ಸ್' ಖಾತೆಯಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. "ತೊಂದರೆರಹಿತ ಹೆದ್ದಾರಿ ಪ್ರಯಾಣದತ್ತ ಪರಿವರ್ತಕ ಹೆಜ್ಜೆಯಾಗಿ, ನಾವು ₹3,000 ಬೆಲೆಯ ಫಾಸ್ಟ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಅನ್ನು ಪರಿಚಯಿಸುತ್ತಿದ್ದೇವೆ, ಇದು ಆಗಸ್ಟ್ 15, 2025 ರಿಂದ ಜಾರಿಗೆ ಬರುತ್ತದೆ. ಸಕ್ರಿಯಗೊಳಿಸಿದ ದಿನಾಂಕದಿಂದ ಒಂದು ವರ್ಷ ಅಥವಾ 200 ಟ್ರಿಪ್‌ಗಳವರೆಗೆ ಮಾನ್ಯವಾಗಿರುತ್ತದೆ - ಈ ಪಾಸ್ ಅನ್ನು ಕಾರುಗಳು, ಜೀಪ್‌ಗಳು, ಮತ್ತು ವ್ಯಾನ್‌ಗಳಂತಹ ವಾಣಿಜ್ಯೇತರ ಖಾಸಗಿ ವಾಹನಗಳಿಗೆ ಪ್ರತ್ಯೇಕವಾಗಿ ವಿನ್ಯಾಸಗೊಳಿಸಲಾಗಿದೆ" ಎಂದು ಅವರು ತಿಳಿಸಿದ್ದಾರೆ.

ಯೋಜನೆಯ ಉದ್ದೇಶ ಮತ್ತು ಪ್ರಯೋಜನಗಳು
ಈ ಹೊಸ ನೀತಿಯು 60 ಕಿಲೋಮೀಟರ್ ವ್ಯಾಪ್ತಿಯೊಳಗೆ ಇರುವ ಟೋಲ್ ಪ್ಲಾಜಾಗಳಿಗೆ ಸಂಬಂಧಿಸಿದ ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ನೀಡಲಿದೆ. ಒಂದೇ, ಕೈಗೆಟುಕುವ ವಹಿವಾಟಿನ ಮೂಲಕ ಟೋಲ್ ಪಾವತಿಗಳನ್ನು ಸರಳಗೊಳಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಇದು ಟೋಲ್ ಪ್ಲಾಜಾಗಳಲ್ಲಿ ಕಾಯುವ ಸಮಯವನ್ನು ಕಡಿಮೆ ಮಾಡುತ್ತದೆ, ಸಂಚಾರ ದಟ್ಟಣೆಯನ್ನು ತಗ್ಗಿಸುತ್ತದೆ ಮತ್ತು ಟೋಲ್ ಪಾವತಿಗಳಿಗೆ ಸಂಬಂಧಿಸಿದ ವಿವಾದಗಳನ್ನು ಕಡಿಮೆ ಮಾಡುತ್ತದೆ. ವಾರ್ಷಿಕ ಪಾಸ್ ಲಕ್ಷಾಂತರ ಖಾಸಗಿ ವಾಹನ ಮಾಲೀಕರಿಗೆ ವೇಗವಾದ ಮತ್ತು ಸುಗಮ ಪ್ರಯಾಣದ ಅನುಭವವನ್ನು ನೀಡುವ ಗುರಿಯನ್ನು ಹೊಂದಿದೆ. ಈ ಕ್ರಮವು ರಸ್ತೆ ಪ್ರಯಾಣವನ್ನು ಇನ್ನಷ್ಟು ಅನುಕೂಲಕರವಾಗಿ ಮಾಡುವ ಭರವಸೆ ನೀಡಿದೆ. ಈ ಕುರಿತಂತೆ ನಿಮ್ಮ ಅಭಿಪ್ರಾಯ ಏನು ಎಂಬುದನ್ನು ಈ ಕೆಳಗೆ ಕಾಮೆಂಟ್ ಮಾಡಿ ತಿಳಿಸಿ

Best Mobiles in India

English summary
Union Minister Nitin Gadkari confirmed this information on his official X (formerly Twitter) account, stating that the FASTag-based Annual Pass will be priced at Rs 3,000 and will take effect on August 15, 2025.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+