Home
ಮೊಬೈಲ್

ಬಜೆಟ್‌ ದರದಲ್ಲಿ 256GB ಸ್ಟೋರೇಜ್‌ ಸೌಲಭ್ಯದ ಅತ್ಯುತ್ತಮ ಫೋನ್‌ಗಳ ಲಿಸ್ಟ್‌ ಇಲ್ಲಿದೆ!

ಇಂದಿನ ದಿನಗಳಲ್ಲಿ ಸ್ಮಾರ್ಟ್‌ಫೋನ್‌ ಎಲ್ಲರಿಗೂ ಅಗತ್ಯ ಹಾಗೂ ಅವಶ್ಯ ಡಿವೈಸ್‌ ಎನಿಸಿದೆ. ಇನ್ನು ಹೊಸ ಫೋನ್‌ ಖರೀದಿಸುವ ಗ್ರಾಹಕರು ಅವರ ಅನುಕೂಲಕ್ಕೆ ಅನುಗುಣವಾಗಿ ಮೊಬೈಲ್‌ ಆಯ್ಕೆ ಮಾಡಿಕೊಳ್ಳುತ್ತಾರೆ. ಆದರೆ ಬಹುತೇಕರು ಅಧಿಕ ಸ್ಟೋರೇಜ್‌ ಸೌಲಭ್ಯ ಇರುವ ಸ್ಮಾರ್ಟ್‌ಫೋನ್‌ ಅನ್ನು ಆಯ್ಕೆ ಮಾಡಲು ಇಚ್ಛಿಸುತ್ತಾರೆ. ಅದರಲ್ಲಿಯೂ 256GB ಇದ್ರೆ ಬೆಸ್ಟ್‌ ಎಂದು ಯೋಚಿಸುತ್ತಾರೆ.

ಹೌದು, ನೂತನ ಫೋನ್‌ ಖರೀದಿಸುವಾಗ ಅನೇಕ ಗ್ರಾಹಕರು ಗ್ರಾಹಕ ಸ್ನೇಹಿ ದರದಲ್ಲಿ ಹೆಚ್ಚಿನ ಸ್ಟೋರೇಜ್‌ ಪಡೆದಿರುವ ಫೋನ್‌ಗಳತ್ತ ಮುಖ ಮಾಡುತ್ತಾರೆ. ಅಧಿಕ ಸ್ಟೋರೇಜ್‌ ಜೊತೆಗೆ ಅತ್ಯುತ್ತಮ ಕ್ಯಾಮೆರಾ, ವೇಗದ ಪ್ರೊಸೆಸರ್‌, ಕರ್ವ್ಡ್‌ ಡಿಸ್‌ಪ್ಲೇ ಗಳಂತಹ ಸೌಲಭ್ಯ ಪಡೆದಿರುವ ಫೋನ್‌ಗಳು ಹೆಚ್ಚಿನ ಗಮನ ಸೆಳೆಯುತ್ತವೆ. ಹಾಗಾದರೇ 256GB ಸ್ಟೋರೇಜ್‌ ಸೌಲಭ್ಯ ಪಡೆದ ಕೆಲವು ಅತ್ಯುತ್ತಮ ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ಬಜೆಟ್‌ ದರದಲ್ಲಿ 256GB ಸ್ಟೋರೇಜ್‌ ಸೌಲಭ್ಯದ ಫೋನ್‌ಗಳ ಲಿಸ್ಟ್‌ ಇಲ್ಲಿದೆ!

ಇನ್ಫಿನಿಕ್ಸ್‌ ನೋಟ್‌ 40 ಪ್ರೊ 5G

ಇನ್ಫಿನಿಕ್ಸ್‌ ಸಂಸ್ಥೆಯ ಈ ಹೊಸ ಮೊಬೈಲ್‌ 8GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಅನ್ನು ಪಡೆದುಕೊಂಡಿದೆ. ಇದರೊಂದಿಗೆ 6.78 ಇಂಚಿನ ಫುಲ್‌ HD+ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದು 1,080 x 2,436 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಅಲ್ಲದೇ ಮೀಡಿಯಾ ಟೆಕ್ ಡೈಮೆನ್ಸಿಟಿ 7020 SoC ಪ್ರೊಸೆಸರ್‌ ಸೌಲಭ್ಯದ ಜೊತೆ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಪಡೆದಿದೆ.

ಅದೇ ರೀತಿ ಈ ಫೋನಿನ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದ್ದು, ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದಿದೆ. ಇದಲ್ಲದೆ ಸೆಲ್ಫಿಗಾಗಿ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಇದೆ. ಹಾಗೆಯೇ 5000mAh ಬ್ಯಾಟರಿ ಬ್ಯಾಕ್‌ಅಪ್‌ ಕೂಡಾ ಲಭ್ಯ.

ಬಜೆಟ್‌ ದರದಲ್ಲಿ 256GB ಸ್ಟೋರೇಜ್‌ ಸೌಲಭ್ಯದ ಫೋನ್‌ಗಳ ಲಿಸ್ಟ್‌ ಇಲ್ಲಿದೆ!

ಟೆಕ್ನೋ ಪೋವಾ 6 ಪ್ರೊ 5G

ಟೆಕ್ನೋ ಸಂಸ್ಥೆಯ ಈ ಮೊಬೈಲ್‌ 8GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಅನ್ನು ಪಡೆದುಕೊಂಡಿದೆ. ಇದರೊಂದಿಗೆ ಇದು 6.78 ಇಂಚಿನ FHD+ ಅಮೋಲೆಡ್‌ ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, 1,300 ನಿಟ್ಸ್‌ ನ ಗರಿಷ್ಠ ಬ್ರೈಟ್‌ನೆಸ್ ಆಯ್ಕೆ ಪಡೆದುಕೊಂಡಿದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 ಪ್ರೊಸೆಸರ್‌ ಬಲದೊಂದಿಗೆ ಕೆಲಸ ನಿರ್ವಹಿಸಲಿದ್ದು, ಹಾಗೆಯೇ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಕೂಡಾ ಪಡೆದಿದೆ.

ಅಲ್ಲದೇ ಟೆಕ್ನೋ ಪೋವಾ 6 ಪ್ರೊ 5G ಫೋನಿನ ಪ್ರಾಥಮಿಕ ಕ್ಯಾಮೆರಾವು 108 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದರ ಜೊತೆಗೆ 6000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, 70W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸಪೋರ್ಟ್‌ ಪಡೆದುಕೊಂಡಿದೆ.

ರಿಯಲ್‌ಮಿ ನಾರ್ಜೋ 70 ಪ್ರೊ 5G

ರಿಯಲ್‌ಮಿ ಸಂಸ್ಥೆಯ ಇತ್ತೀಚಿಗಿನ ಈ ಮೊಬೈಲ್‌ ಕೂಡಾ 8GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಅನ್ನು ಒಳಗೊಂಡಿದೆ. ಇನ್ನು ಈ ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ OLED ಡಿಸ್‌ಪ್ಲೇ ಅನ್ನು ಪಡೆದಿದ್ದು, ಹಾಗೆಯೇ ಈ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಸಹ ಪಡೆದುಕೊಂಡಿದೆ.

ಇದರೊಂದಿಗೆ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್‌ ಪವರ್‌ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಸಪೋರ್ಟ್‌ ಸಹ ಪಡೆದಿದೆ. ಹಾಗೆಯೇ ಟ್ರಿಪಲ್‌ ಕ್ಯಾಮೆರಾ ರಚನೆ ಹೊಂದಿದ್ದು, 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಜತೆಗೆ ಪೂರಕವಾಗಿ 67W SUPERVOOC ಫಾಸ್ಟ್‌ ಚಾರ್ಜಿಂಗ್‌ ವ್ಯವಸ್ಥೆ ಪಡೆದಿದೆ.

Best Mobiles in India

English summary
Few Best 256 GB Internal Storage Phones Under Rs 30000 in April 2024. Check phone list here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+