Home
ಸುದ್ದಿಜಾಲ

32ಎಂಪಿ ಸೆಲ್ಫಿ ಕ್ಯಾಮೆರಾ ಇರುವ ಫೋನ್‌ಗಳ ಲಿಸ್ಟ್‌ ಇಲ್ಲಿದೆ!..ನಿಮ್ಮ ಆಯ್ಕೆ ಯಾವುದು?

ಇತ್ತೀಚಿಗೆ ಮಾರುಕಟ್ಟೆಗೆ ಲಾಂಚ್‌ ಆಗುವ ಬಹುತೇಕ ಸ್ಮಾರ್ಟ್‌ಫೋನ್‌ಗಳು ಬೆಸ್ಟ್‌ ಕ್ಯಾಮೆರಾ ಫೀಚರ್‌ ಪಡೆದಿರುತ್ತವೆ. ಹಿಂಬದಿಯ ರಿಯರ್‌ ಕ್ಯಾಮೆರಾ ಆಯ್ಕೆಯ ಜೊತೆಗೆ ಮುಂಭಾಗದಲ್ಲಿ ಸೆಲ್ಫಿ ಕ್ಯಾಮೆರಾಗೂ ಹೆಚ್ಚಿನ ಆದ್ಯತೆ ನೀಡುತ್ತಿವೆ. ಈ ನಿಟ್ಟಿನಲ್ಲಿ ಕೆಲವು ಫೋನ್‌ಗಳು ತಮ್ಮ ಸೆಲ್ಫಿ ಕ್ಯಾಮೆರಾ ಫೀಚರ್‌ ಮೂಲಕ ಗ್ರಾಹಕರ ದಿಲ್‌ ಗೆದ್ದಿವೆ.

ಹೌದು, ಮಾರುಕಟ್ಟೆಯಲ್ಲಿ ಅತ್ಯುತ್ತಮ ಸೆಲ್ಫಿ ಕ್ಯಾಮೆರಾಗಳಿಗೆ ಡಿಮ್ಯಾಂಡ್‌ ಇದೆ. ಕೆಲವರು ಬಜೆಟ್‌ ದರದಲ್ಲಿನ ಸೆಲ್ಫಿ ಕ್ಯಾಮೆರಾ ಫೋನ್‌ ಆಯ್ಕೆ ಮಾಡಿಕೊಂಡರೆ, ಮತ್ತೆ ಕೆಲವರು ಮೀಡ್‌ರೇಂಜ್‌ ಬೆಲೆಯಲ್ಲಿ ಲಭ್ಯ ಇರುವ ಬೆಸ್ಟ್‌ ಸೆಲ್ಫಿ ಕ್ಯಾಮೆರಾ ಖರೀದಿಗೆ ಮುಂದಾಗುತ್ತಾರೆ. ವಿಶೇಷವಾಗಿ 32 ಮೆಗಾ ಪಿಕ್ಸಲ್‌ ಸೆಲ್ಫಿ ಕ್ಯಾಮೆರಾ ಫೋನ್‌ಗಳು ಹೆಚ್ಚು ಸೂಕ್ತ ಎನಿಸಿವೆ. ಹಾಗಾದರೇ ಗ್ರಾಹಕ ಸ್ನೇಹಿ ಬೆಲೆಯಲ್ಲಿ ಲಭ್ಯವಿರುವ ಕೆಲವು 32ಎಂಪಿ ಸೆಲ್ಫಿ ಕ್ಯಾಮೆರಾ ಫೋನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

32ಎಂಪಿ ಸೆಲ್ಫಿ ಕ್ಯಾಮೆರಾ ಇರುವ ಫೋನ್‌ಗಳ ಲಿಸ್ಟ್‌ ಇಲ್ಲಿದೆ!..ನಿಮ್ಮ ಆಯ್ಕೆ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 5G ಮೊಬೈಲ್‌

ಸ್ಯಾಮ್‌ಸಂಗ್‌ ಸಂಸ್ಥೆಯ ಈ ಫೋನ್‌ ಹಿಂಬದಿಯಲ್ಲಿ ತ್ರಿವಳಿ ರಿಯರ್‌ ಕ್ಯಾಮೆರಾ ರಚನೆ ಪಡೆದಿದ್ದು, ಮುಂಭಾಗದಲ್ಲಿ 32 ಮೆಗಾ ಪಿಕ್ಸಲ್‌ ಸೆಲ್ಫಿ ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇಯು 1,080x2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

32ಎಂಪಿ ಸೆಲ್ಫಿ ಕ್ಯಾಮೆರಾ ಇರುವ ಫೋನ್‌ಗಳ ಲಿಸ್ಟ್‌ ಇಲ್ಲಿದೆ!..ನಿಮ್ಮ ಆಯ್ಕೆ?

ಇನ್ನು ಈ ಸ್ಮಾರ್ಟ್‌ಫೋನ್‌ Exynos 1480 SoC ಪ್ರೊಸೆಸರ್‌ ಸಾಮರ್ಥ್ಯದ ವೇಗದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಇದೆ. ಇದರ ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದು 25W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಒಪ್ಪೋ F25 ಪ್ರೊ 5G ಮೊಬೈಲ್‌

ಒಪ್ಪೋ ಸಂಸ್ಥೆಯ ಈ ಫೋನ್‌ ಹಿಂಬದಿಯಲ್ಲಿ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದಿದ್ದು, ಮುಂಭಾಗದಲ್ಲಿ 32 ಮೆಗಾ ಪಿಕ್ಸಲ್‌ ಸೆಲ್ಫಿ ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಇನ್ನು ಇದು 6.7 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಇದಕ್ಕೆ ಅನುಗುಣವಾಗಿ ಈ ಡಿಸ್‌ಪ್ಲೇಯು 2412 × 1080 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಪಡೆದುಕೊಂಡಿದೆ.

32ಎಂಪಿ ಸೆಲ್ಫಿ ಕ್ಯಾಮೆರಾ ಇರುವ ಫೋನ್‌ಗಳ ಲಿಸ್ಟ್‌ ಇಲ್ಲಿದೆ!..ನಿಮ್ಮ ಆಯ್ಕೆ?

ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7050 6nm ಪ್ರೊಸೆಸರ್ ವೇಗದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಇದೆ. ಇದರ ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದು 67W ಸೂಪರ್‌ವೂಕ್‌ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಮೊಟೊರೊಲಾ ಎಡ್ಜ್ 40 ನಿಯೋ ಮೊಬೈಲ್‌

ಮೊಟೊರೊಲಾ ಸಂಸ್ಥೆಯ ಈ ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಒಳಗೊಂಡಿದ್ದು, ಹಾಗೆಯೇ 32 ಮೆಗಾ ಪಿಕ್ಸಲ್‌ ಸೆಲ್ಫಿ ಕ್ಯಾಮೆರಾ ಸೌಲಭ್ಯ ಪಡೆದುಕೊಂಡಿದೆ. ಇನ್ನು ಇದು 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಪೋಲೆಡ್‌ ಡಿಸ್‌ಪ್ಲೇ ಹೊಂದಿದ್ದು, ಡಿಸ್‌ಪ್ಲೇಯು 2400 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ.

ಇದರೊಂದಿಗೆ ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7030 SoC ಪ್ರೊಸೆಸರ್ ವೇಗದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಇದೆ. ಇದರ ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದು 68W ಚಾರ್ಜಿಂಗ್ ಸಪೋರ್ಟ್‌ ಪಡೆದುಕೊಂಡಿದೆ.

Best Mobiles in India

English summary
Few Best 32MP Selfie Camera Phones in India 2024. phones camera and all specifications details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+