Just In
Don't Miss
- Movies
Super Queen:ರಜಿನಿಯ ಕಲ್ಪನಾ ಪರ್ಫಾಮೆನ್ಸ್ಗೆ ಫುಲ್ ಫಿದಾ : ರಿಪ್ಲೆ ಮಾಡೋಕಾಗದೆ ನಟಿ ಸುಸ್ತು..!
- Lifestyle
Horoscope Today 6 Feb 2023: ಸೋಮವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Sports
IND VS AUS Test: ಟೆಸ್ಟ್ ಸರಣಿಯಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪರ್ ಅಲ್ಲ: ಪದಾರ್ಪಣೆ ಮಾಡಲು ಸಜ್ಜಾದ ವಿಕೆಟ್ ಕೀಪರ್
- News
ರಾಜ್ಯ ರಾಜಕೀಯದ ಮುಂದಿನ ರಹಸ್ಯವೊಂದನ್ನು ಬೇಧಿಸಿದ ಎಚ್ಡಿಕೆ
- Finance
ಆಧಾರ್ ಕಾರ್ಡ್ ಸಂಖ್ಯೆಯಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಪರಿಶೀಲಿಸಿ, ಹೇಗೆ ಇಲ್ಲಿ ತಿಳಿಯಿರಿ
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಈ ಫೋನ್‌ಗಳಲ್ಲಿ 50 ಮೆಗಾಪಿಕ್ಸಲ್ ಕ್ಯಾಮೆರಾ ಇದೆ!..ಫೋನ್ ಬೆಲೆಯೂ ಕಡಿಮೆ!
ಸದ್ಯ ಸ್ಮಾರ್ಟ್‌ಫೋನ್‌ಗಳಲ್ಲಿ ಕ್ಯಾಮೆರಾ ಫೀಚರ್ ಅತೀ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಹೆಚ್ಚಿನ ಮೆಗಾ ಪಿಕ್ಸಲ್ ಸೆನ್ಸಾರ್ ಆಯ್ಕೆಯನ್ನು ಇತ್ತೀಚಿನ ಸ್ಮಾರ್ಟ್‌ಫೋನ್‌ಗಳಲ್ಲಿ ನೀಡುತ್ತಿದ್ದಾರೆ. ಸದ್ಯ ಸ್ಮಾರ್ಟ್‌ಫೋನ್‌ಗಳಲ್ಲಿ ತ್ರಿವಳಿ ಮತ್ತು ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಸಾಮಾನ್ಯ ಎನ್ನುವಂತಾಗಿದೆ. ಅದರೊಂದಿಗೆ ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್ ಇಲ್ಲವೇ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿರುತ್ತವೆ.

ಹೌದು, ಇಂದಿನ ಬಹುತೇಕ ಬಜೆಟ್ ದರದ ಸ್ಮಾರ್ಟ್‌ಫೋನ್‌ಗಳು ಸಹ ಹೈ ಎಂಡ್ ಕ್ಯಾಮೆರಾ ಸೆನ್ಸಾರ್ ಆಯ್ಕೆ ಒಳಗೊಂಡಿರುತ್ತವೆ. ಮುಖ್ಯವಾಗಿ 50 ಮೆಗಾ ಪಿಕ್ಸಲ್ ಮತ್ತು 64ಎಂಪಿ ಸೆನ್ಸಾರ್ ಕ್ಯಾಮೆರಾಗಳು ಮಾರುಕಟ್ಟೆಯಲ್ಲಿ ಹೊಸ ಟ್ರೆಂಡ್ ರೂಪಿಸಿವೆ. ಬಜೆಟ್ ಬೆಲೆಯಲ್ಲಿಯೇ ಅತ್ಯುತ್ತಮ ಕ್ಯಾಮೆರಾ ಲಭ್ಯವಾಗುತ್ತಿರುವ ಕಾರಣದಿಂದಾಗಿ ಸ್ಮಾರ್ಟ್‌ಫೋನ್ ಖರೀದಿಸುವ ಗ್ರಾಹಕರು 50 ಮೆಗಾ ಪಿಕ್ಸಲ್ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳತ್ತ ಚಿತ್ತ ಹರಿಸುವಂತಾಗಿದೆ. ಹಾಗಾದರೇ ಪ್ರಸ್ತುತ ಲಭ್ಯವಿರುವ 50 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳು ಯಾವುವು ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M13 5G ಸ್ಮಾರ್ಟ್‌ಫೋನ್
ಈ ಫೋನ್ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 400 ನಿಟ್ಸ್ ಬ್ರೈಟ್‌ನೆಸ್ ಅನ್ನು ಪಡೆದುಕೊಂಡಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12.0 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಸ್ಯಾಮ್‌ಸಂಗ್ RAM ಪ್ಲಸ್ ಫೀಚರ್ಸ್ ಮೂಲಕ RAM ಅನ್ನು 12GB ವರೆಗೆ ವಿಸ್ತರಿಸಬಹುದು. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ 5 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ವಿವೋ T1 44W ಸ್ಮಾರ್ಟ್‌ಫೋನ್
ವಿವೋ T1 44W ಸ್ಮಾರ್ಟ್‌ಫೋನ್ 6.44 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಬಲವನ್ನು ಪಡೆದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಇದರಲ್ಲಿ ಪ್ರೈಮೆರಿ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 44W ಫ್ಲ್ಯಾಶ್‌ಚಾರ್ಜ್ ಬೆಂಬಲಿಸಲಿದೆ.

ಒಪ್ಪೋ ರೆನೋ 8
ಈ ಸ್ಮಾರ್ಟ್‌ಫೋನ್ 6.43 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಕಲರ್ ಒಎಸ್ 12.1 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಒನ್‌ಪ್ಲಸ್ ನಾರ್ಡ್ 2T 5G ಸ್ಮಾರ್ಟ್‌ಫೋನ್
ಈ ಸ್ಮಾರ್ಟ್‌ಫೋನ್ 6.43 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಅನ್ನು ಆಕ್ಷಿಜನ್ OS 12.1 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX766 ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೋನಿ IMX615 ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470