ಅಧಿಕ RAM ಸಾಮರ್ಥ್ಯದ ಟಾಪ್‌ ಸ್ಮಾರ್ಟ್‌ಫೋನ್‌ಗಳ ಲಿಸ್ಟ್‌ ಇಲ್ಲಿದೆ!

|

ಪ್ರಸ್ತುತ ಮೊಬೈಲ್‌ಗಳು ಎಲ್ಲರಿಗೂ ಅಗತ್ಯ ಮತ್ತು ಅವಶ್ಯ ಸಾಧನ ಆಗಿದೆ. ಬಹುತೇಕ ಆನ್‌ಲೈನ್‌ ಕೆಲಸಗಳು ಸ್ಮಾರ್ಟ್‌ಫೋನ್ ಮೂಲಕವೇ ನಡೆಯುತ್ತವೆ. ಹೀಗಾಗಿ ಗ್ರಾಹಕರು ಹೆಚ್ಚಿನ RAM ಫೀಚರ್ ಇರುವ ಸ್ಮಾರ್ಟ್‌ ಫೋನ್‌ಗಳನ್ನು ಖರೀದಿಸಲು ಇಷ್ಟಪಡುತ್ತಾರೆ. ಈ ನಿಟ್ಟಿನಲ್ಲಿ ಪ್ರಮುಖ ಮೊಬೈಲ್ ಕಂಪನಿಗಳು ಸಹ ಅಧಿಕ RAM ಸಾಮರ್ಥ್ಯದ ವೇರಿಯಂಟ್ ಆಯ್ಕೆಗಳನ್ನು ಲಾಂಚ್ ಮಾಡುವತ್ತ ಮುನ್ನಡೆದಿವೆ.

ವೈಖರಿ

ಹೆಚ್ಚಿನ RAM ಹಾಗೂ ವೇಗದ ಪ್ರೊಸೆಸರ್‌ ಬಲ ಒಳಗೊಂಡಿರುವ ಸ್ಮಾರ್ಟ್‌ಫೋನ್‌ ಗಳು ಮಲ್ಟಿ ಟಾಸ್ಕ್ ಕೆಲಸ ಮಾಡುವಾಗ ಮತ್ತು ಅಪ್ಲಿಕೇಶನ್ ಇನ್‌ ಸ್ಟಾಲ್‌ ಮಾಡುವಾಗ ಕಾರ್ಯ ವೈಖರಿ ಯಾವುದೇ ಅಡೆ ತಡೆ ಆಗುವ ಸಾಧ್ಯತೆ ಕಡಿಮೆ. ಹೀಗಾಗಿ ಮಲ್ಟಿ ಟಾಸ್ಕ್‌ ಕೆಲಸಗಳನ್ನು ಹೆಚ್ಚಾಗಿ ಬಳಕೆ ಮಾಡುವ ಗ್ರಾಹಕರು ಹಾಗೂ ಹೈ ಎಂಡ್ ಮೊಬೈಲ್‌ ಗೇಮ್‌ ಆಡುವ ಬಳಕೆದಾರರು 8GB ಮತ್ತು ಅದಕ್ಕಿಂತ ಅಧಿಕ RAM ಸಾಮರ್ಥ್ಯದ ಫೋನ್‌ಗಳನ್ನು ಖರೀದಿಸಲು ಇಚ್ಛಿಸುತ್ತಾರೆ. ಅಂತಹ ಕೆಲವು ಟಾಪ್‌ ಫೋನ್‌ಗಳ ಬಗ್ಗೆ ಇಲ್ಲಿದೆ ಮಾಹಿತಿ.

ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್‌

ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್‌

ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್‌ 6.78 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಸಕ್ರಿಯಗೊಳಿಸುತ್ತದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 12 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ.

ವಿವೋ X80 ಪ್ರೊ ಸ್ಮಾರ್ಟ್‌ಫೋನ್‌

ವಿವೋ X80 ಪ್ರೊ ಸ್ಮಾರ್ಟ್‌ಫೋನ್‌

ವಿವೋ X80 ಪ್ರೊ ಸ್ಮಾರ್ಟ್‌ಫೋನ್‌ 1,440x3,200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.78 ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 12 ಆಧಾರಿತ OriginOS ನಲ್ಲಿ ಕಾರ್ಯನಿರ್ವಹಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಸ್ಮಾರ್ಟ್‌ಫೋನ್‌ 6.8 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಫೋನ್ 12 GB RAM ಮತ್ತು ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ ಈ ಫೋನ್ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ಈ ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ.

ಆಸುಸ್ ROG ಫೋನ್ 5 ಸ್ಮಾರ್ಟ್‌ಫೋನ್‌

ಆಸುಸ್ ROG ಫೋನ್ 5 ಸ್ಮಾರ್ಟ್‌ಫೋನ್‌

ಆಸುಸ್ ROG ಫೋನ್ 5 ಸ್ಮಾರ್ಟ್‌ಫೋನ್‌ 1,080 x 2,448 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888SoC ಪ್ರೊಸೆಸರ್‌ ಅನ್ನು ಹೊಂದಿದೆ. ಹಾಗೆಯೇ 12 GB RAM + 512 GB ಸಾಮರ್ಥ್ಯವನ್ನು ವೇರಿಯಂಟ್ ಆಯ್ಕೆ ಹೊಂದಿದೆ. ಹಾಗೆಯೇ ಈ ಫೋನಿನ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಹೊಂದಿದೆ. ಇದಲ್ಲದೆ 24 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌

ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌

ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌ 6.72 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,440 x 3,200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಆಕ್ಟಾ ಕೋರ್‌ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಈ ಫೋನಿನ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ.

Best Mobiles in India

English summary
Few Best Highest RAM Smartphones in India 2022.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X