Home
ಸುದ್ದಿಜಾಲ

ಹೊಸ ಸ್ಟೈಲಿಶ್‌ ಐಕ್ಯೂ ಮೊಬೈಲ್‌ ಖರೀದಿಸುವ ಪ್ಲ್ಯಾನ್‌ ಇದ್ರೆ, ಇಲ್ಲಿ ಗಮನಿಸಿ!

ಭಾರತೀಯ ಮೊಬೈಲ್‌ ಮಾರುಕಟ್ಟೆಯಲ್ಲಿ ಐಕ್ಯೂ (IQOO) ಸಂಸ್ಥೆಯು ಭಿನ್ನ ಶ್ರೇಣಿಯ ಮೊಬೈಲ್‌ಗಳ ಮೂಲಕ ಗ್ರಾಹಕರನ್ನು ಸೆಳೆದಿದೆ. ಮುಖ್ಯವಾಗಿ ಐಕ್ಯೂ ಸಂಸ್ಥೆಯು ಅಗ್ಗದ, ಬಜೆಟ್‌ ಬೆಲೆಯ ಹಾಗೂ ಮೀಡ್‌ರೇಂಜ್‌ ಪ್ರೈಸ್‌ಟ್ಯಾಗ್‌ನ ಸ್ಮಾರ್ಟ್‌ಫೋನ್‌ ಆಯ್ಕೆಯನ್ನು ಖರೀದಿದಾರರಿಗೆ ನೀಡಿದೆ. ಅದಾಗ್ಯೂ, ಐಕ್ಯೂ ಸಂಸ್ಥೆಯ ಕೆಲವು ಮೊಬೈಲ್‌ಗಳು ಡಿಸೈನ್‌, ಬೊಂಬಾಟ್‌ ಫೀಚರ್ಸ್‌ಗಳಿಂದ ಸದ್ದು ಮಾಡಿವೆ.

ಹೌದು, ಐಕ್ಯೂ ಮೊಬೈಲ್‌ ಸಂಸ್ಥೆಯು ಹಲವು ಸ್ಮಾರ್ಟ್‌ಫೋನ್‌ಗಳ ಆಯ್ಕೆ ಪಡೆದುಕೊಂಡಿದೆ. ಅವುಗಳಲ್ಲಿ ಇತ್ತೀಚಿನ ಐಕ್ಯೂ Z9X 5G ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಹೆಚ್ಚಿನ ಗಮನ ಸೆಳೆದಿವೆ. ಈ ಫೋನ್‌ ಅಗ್ಗದ ಬೆಲೆಯನ್ನು ಪಡೆದಿದ್ದು, ಇದರ ಜೊತೆಗೆ ಡಿಸ್‌ಪ್ಲೇ, ಬ್ಯಾಟರಿ, ಪ್ರೊಸೆಸರ್‌ ಮತ್ತು ಇತರೆ ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡಿದೆ. ಹಾಗಾದರೆ ಸದ್ಯ ಅತ್ಯುತ್ತಮ ಎನಿಸಿರುವ ಕೆಲವು ಐಕ್ಯೂ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಹೊಸ ಸ್ಟೈಲಿಶ್‌ ಐಕ್ಯೂ ಮೊಬೈಲ್‌ ಖರೀದಿಸುವ ಪ್ಲ್ಯಾನ್‌ ಇದ್ರೆ, ಇಲ್ಲಿ ಗಮನಿಸಿ!

ಐಕ್ಯೂ Z9x 5G ಫೋನ್‌

ಐಕ್ಯೂ Z9x 5G ಮೊಬೈಲ್‌ 6.72 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದರ ಡಿಸ್‌ಪ್ಲೇಯು ಫುಲ್‌ ಹೆಚ್‌ಡಿ+ ರೆಸಲ್ಯೂಶನ್ ಪಡೆದಿದೆ. ಹಾಗೆಯೇ 120Hz ರಿಫ್ರೆಶ್ ರೇಟ್ ಮತ್ತು 1,000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಆಯ್ಕೆ ಒಳಗೊಂಡಿದೆ. ಜೊತೆಗೆ ಸ್ನಾಪ್‌ಡ್ರಾಗನ್ 6 ಜನ್ 1 ಪ್ರೊಸೆಸರ್‌ ಪವರ್‌ ಸೌಲಭ್ಯವನ್ನು ಪಡೆದಿದೆ.

ಹಾಗೆಯೇ ಇದು ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಪಡೆದಿದ್ದು, ಫೋನ್‌ 12GB RAM ಮತ್ತು 256 GB ಹಾಗೂ 8GB RAM ಮತ್ತು 128 GB ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಜೊತೆಗೆ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿ ಇದೆ. ಅಲ್ಲದೇ 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಇದ್ದು, ಇದಕ್ಕೆ ಪೂರಕವಾಗಿ 44W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ ಇದೆ.

ಐಕ್ಯೂ Z9 5G ಫೋನ್‌

ಐಕ್ಯೂ Z9 5G ಮೊಬೈಲ್‌ 6.67 ಇಂಚಿನ ಫುಲ್‌ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, 120Hz ರಿಫ್ರೆಶ್ ರೇಟ್ ಪಡೆದುಕೊಂಡಿದೆ. ಹಾಗೆಯೇ ಇದು 1,800 ನಿಟ್ಸ್‌ ಬ್ರೈಟ್‌ನೆಸ್ ಆಯ್ಕೆ ಹಾಗೂ 2400 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ ಹೊಂದಿದೆ. ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7200 ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ನಿರ್ವಹಿಸಲಿದೆ.

ಹಾಗೆಯೇ ಇದು ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಪಡೆದಿದ್ದು, ಜೊತೆಗೆ 8GB RAM ಮತ್ತು 128GB/256GB ಸ್ಟೋರೇಜ್‌ ಆಯ್ಕೆ ಒಳಗೊಂಡಿದೆ. ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿ ಇದೆ. ಅಲ್ಲದೇ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್ ಪಡೆದಿದ್ದು, ಇದಕ್ಕೆ ಪೂರಕವಾಗಿ 44W ವೇಗದ ಚಾರ್ಜಿಂಗ್ ಬೆಂಬಲ ಹೊಂದಿದೆ.

ಐಕ್ಯೂ ನಿಯೋ 9 ಪ್ರೊ ಫೋನ್‌

ಐಕ್ಯೂ ಸಂಸ್ಥೆಯ ಈ ಮೊಬೈಲ್‌ 6.78 ಇಂಚಿನ LTPO AMOLED ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದು 1260 x 2800 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 ಜೆನ್‌ 2 SoC ಪ್ರೊಸೆಸರ್‌ ಪವರ್‌ ಅನ್ನು ಪಡೆದಿದ್ದು, ಆಂಡ್ರಾಯ್ಡ್ 14 ಓಎಸ್‌ ಸಪೋರ್ಟ್‌ನಲ್ಲಿ ಕೆಲಸ ನಿರ್ವಹಿಸಲಿದೆ.

ಇದು ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX920 ಸೆನ್ಸಾರ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ 5160 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ 120W FlashCharge ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್ ಪಡೆದಿದೆ.

Best Mobiles in India

English summary
Few best iQOO Phones in India 2024. Check mobile list and specifications and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+