ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಸೌಲಭ್ಯದ ಬೆಸ್ಟ್ ಸ್ಮಾರ್ಟ್‌ಫೋನ್‌ಗಳು!
ಇತ್ತೀಚಿನ ನೂತನ ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಹೊಸ ಅಪ್‌ಡೇಟ್ ನೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ. ಅವುಗಳಲ್ಲಿ ಸೆನ್ಸಾರ್ ವಿಭಾಗದಲ್ಲಿಯೂ ಅಪ್‌ಡೇಟ್ ಕಾಣಬಹುದಾಗಿದೆ. ಕೆಲವು ಫೋನ್‌ಗಳು ಸೈಡ್ ಮೌಂಟೆಡ್ ಸೆನ್ಸಾರ್ ಹೊಂದಿದ್ದರೇ, ಮತ್ತೆ ಕೆಲವು ಫೋನ್‌ಗಳು ಇನ್ ಡಿಸ್‌ಪ್ಲೇ ಸೆನ್ಸಾರ್ ಹೊಂದಿವೆ. ಇವುಗಳಲ್ಲಿ ಅನೇಕಕ ಗ್ರಾಹಕರು ಇನ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಆಯ್ಕೆ ಇಷ್ಟಪಡುತ್ತಾರೆ.
ಇನ್ ಡಿಸ್‌ಪ್ಲೇ ಅಥವಾ ಅಂಡರ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಆಕರ್ಷಕ ಎನಿಸಿದೆ. ಸ್ಯಾಮ್‌ಸಂಗ್, ಒನ್‌ಪ್ಲಸ್ ಮತ್ತು ಆಪಲ್‌ನಂತಹ ಪ್ರಮುಖ ಬ್ರ್ಯಾಂಡ್‌ಗಳು ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಬಳಸುತ್ತವೆ. ಫಿಂಗರ್‌ಪ್ರಿಂಟ್ ಸೆನ್ಸಾರ್ ಆಯ್ಕೆಯ ಫೋನ್‌ಗಳಲ್ಲಿ ಸ್ಕ್ರೀನ್ ಅನ್‌ಲಾಕ್ ಮಾಡುವುದು ಸುಲಭ ಎನಿಸುತ್ತದೆ. ಹಾಗಾದರೆ ಇನ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿರುವ ಕೆಲವು ಬೆಸ್ಟ್ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ : ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್ 6.8 ಇಂಚಿನ ಎಡ್ಜ್ QHD+ ಡೈನಾಮಿಕ್ ಅಮೋಲೆಡ್ 2X ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಡೈನಾಮಿಕ್ ರಿಫ್ರೆಶ್ ರೇಟ್ 1-120Hz ಬೆಂಬಲಿಸಲಿದೆ. ಅಲ್ಲದೆ ಇನ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಆಯ್ಕೆ ಪಡೆದಿದೆ. ಗೇಮ್ ಮೋಡ್‌ನಲ್ಲಿ 240Hz ಟಚ್ ಸ್ಯಾಂಪ್ಲಿಂಗ್ ರೇಟಿಂಗ್ ಅನ್ನು ಬೆಂಬಲಿಸಲಿದೆ. ಹಾಗೆಯೇ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ನ ಕಸ್ಟಮ್ ಆವೃತ್ತಿಯನ್ನು ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾ 200 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ.
ಒನ್‌ಪ್ಲಸ್ 11 : ಈ ಸ್ಮಾರ್ಟ್‌ಫೋನ್ 6.7 ಇಂಚಿನ QHD+ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1440 x 3216 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 120Hz ರಿಫ್ರೆಶ್ ರೇಟ್ ಹೊಂದಿದ್ದು, ಇನ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ. ಹಾಗೆಯೇ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 ಪ್ರೊಸೆಸರ್ ಬಲವನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, ಇದು 100W ವೇಗದ ಚಾರ್ಜಿಂಗ್ ಬೆಂಬಲ ಪಡೆದಿದೆ.

ವಿವೋ X80 ಪ್ರೊ : ಈ ಸ್ಮಾರ್ಟ್‌ಫೋನ್ 1,440 x 3,200 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.78 ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, ಇನ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಆಯ್ಕೆ ಹೊಂದಿದೆ. ಇದು ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ಹಾಗೆಯೇ 4,700mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಸಹ ಒಳಗೊಂಡಿದೆ.
ಶಿಯೋಮಿ 13 ಪ್ರೊ : ಈ ಫೋನ್ 6.73 ಇಂಚಿನ WQHD+ ಡಿಸ್‌ಪ್ಲೇ ಹೊಂದಿದ್ದು, ಜೊತೆಗೆ 120Hz ರಿಫ್ರೆಶ್ ರೇಟ್ ಇದರಲ್ಲಿದೆ. ಇದರೊಂದಿಗೆ 1440 x 3200 ಪಿಕ್ಸಲ್ ರೆಸಲ್ಯೂಶನ್ ಅನ್ನು ಪಡೆದಿದ್ದು, ಇನ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಆಯ್ಕೆ ಹೊಂದಿದೆ. ಈ ಫೋನಿನ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ಜೊತೆಗೆ 4,820 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಹಾಗೂ 120W ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಸಹ ಒಳಗೊಂಡಿದೆ.


Click it and Unblock the Notifications








