Home
ಸುದ್ದಿಜಾಲ

ಒನ್‌ಪ್ಲಸ್‌ ಮೊಬೈಲ್‌ ಖರೀದಿಸುವ ಗ್ರಾಹಕರೇ, ಈ ಲಿಸ್ಟ್‌ ನೋಡಿ!

ಭಾರತೀಯ ಮೊಬೈಲ್‌ ಮಾರುಕಟ್ಟೆಯಲ್ಲಿ ಒನ್‌ಪ್ಲಸ್‌ (OnePlus) ಸಂಸ್ಥೆಯು ಕೆಲವು ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಗಮನ ಸೆಳೆದಿದೆ. ಒನ್‌ಪ್ಲಸ್‌ ಮೀಡ್‌ರೇಂಜ್‌ ಬೆಲೆಯ ಫೋನ್‌ಗಳ ಜೊತೆಗೆ ಆಕರ್ಷಕ ಹೈ ಎಂಡ್‌ ದರದ ಫೋನ್‌ಗಳ ಲಿಸ್ಟ್‌ ಅನ್ನು ಗ್ರಾಹಕರ ನೀಡಿದೆ. ಅದಾಗ್ಯೂ, ಮೀಡ್‌ರೇಂಜ್‌ ಹಾಗೂ ಬಜೆಟ್‌ ಪ್ರೈಸ್‌ ಟ್ಯಾಗ್‌ನಲ್ಲಿನ ಕೆಲವು ಒನ್‌ಪ್ಲಸ್‌ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಹೆಚ್ಚಿನ ಆಕರ್ಷಕಯಲ್ಲಿ ಕಾಣಿಸಿಕೊಂಡಿವೆ.

ಹೌದು, ಒನ್‌ಪ್ಲಸ್‌ ಸಂಸ್ಥೆಯು ನಾರ್ಡ್‌ ಸರಣಿಯ ಹಾಗೂ CE ಸರಣಿಯ ಫೋನ್‌ಗಳನ್ನು ಮಾರುಕಟ್ಟೆಯಲ್ಲಿ ಅಧಿಕ ಟ್ರೆಂಡ್‌ನಲ್ಲಿವೆ. ಒನ್‌ಪ್ಲಸ್‌ ಸ್ಮಾರ್ಟ್‌ಫೋನ್‌ಗಳು ಮೀಡ್‌ರೇಂಜ್‌ ದರದ ಜೊತೆಗೆ ಅತ್ಯುತ್ತಮ ಕ್ಯಾಮೆರಾ, ವೇಗದ ಪ್ರೊಸೆಸರ್‌, ಬಿಗ್ ಬ್ಯಾಟರಿಗಳಂತಹ ಆಯ್ಕೆಗಳಿಂದಲೂ ಗ್ರಾಹಕರ ಗಮನ ಸೆಳೆದಿವೆ. ಹಾಗಾದರೆ ಈ ಲೇಖನದಲ್ಲಿ ಒನ್‌ಪ್ಲಸ್‌ ಸಂಸ್ಥೆಯ ಫೋನ್‌ಗಳ ಬಗ್ಗೆ ತಿಳಿಯೋಣ ಬನ್ನಿರಿ.

ಒನ್‌ಪ್ಲಸ್‌ ಮೊಬೈಲ್‌ ಖರೀದಿಸುವ ಗ್ರಾಹಕರೇ, ಈ ಲಿಸ್ಟ್‌ ನೋಡಿ!

ಒನ್‌ಪ್ಲಸ್‌ ನಾರ್ಡ್‌ 2T 5G : ಒನ್‌ಪ್ಲಸ್‌ ನಾರ್ಡ್‌ 2T 5G ಸ್ಮಾರ್ಟ್‌ಫೋನ್‌ 6.43 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್‌ ಅನ್ನು ಹೊಂದಿದೆ. ಜೊತೆಗೆ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಆಗಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 80W SuperVOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G : ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G ಸ್ಮಾರ್ಟ್‌ಫೋನ್‌ 1,080 x 2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.59 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಹಾಗೆಯೇ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗ್ನ್ 695 SoC ಪ್ರೊಸೆಸರ್‌ ಪ್ರೊಸೆಸರ್‌ ಬಲವನ್ನು ಪಡೆದಿದೆ. ಅಲ್ಲದೇ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಒನ್‌ಪ್ಲಸ್‌ ಮೊಬೈಲ್‌ ಖರೀದಿಸುವ ಗ್ರಾಹಕರೇ, ಈ ಲಿಸ್ಟ್‌ ನೋಡಿ!

ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G : ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಸ್ಮಾರ್ಟ್‌ಫೋನ್‌ 6.72 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ.ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಇದು ಆಂಡ್ರಾಯ್ಡ್ 13 ನಲ್ಲಿ ಆಕ್ಸಿಜನ್‌ OS 13.1 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರೊಂದಿಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಒನ್‌ಪ್ಲಸ್‌ 11 5G : ಒನ್‌ಪ್ಲಸ್‌ 11 5G ಸ್ಮಾರ್ಟ್‌ಫೋನ್‌ 6.7 ಇಂಚಿನ ಕ್ವಾಡ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,440 x 3,216 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 ಜೆನ್ 2 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಆಗಿದೆ. ಇದರೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 100W SuperVOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

Best Mobiles in India

English summary
Few Best OnePlus Mobiles In India May 2023: Check this list.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+