ಈ ವರ್ಷದ ಅತ್ಯುತ್ತಮ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳ ಲಿಸ್ಟ್‌ ಇಲ್ಲಿದೆ ನೋಡಿ!

|

ಸಾಮಾನ್ಯವಾಗಿ ಗ್ರಾಹಕರು ನೂತನ ಸ್ಮಾರ್ಟ್‌ಫೋನ್‌ ಖರೀದಿ ಮಾಡುವಾಗ ಕ್ಯಾಮೆರಾ ಫೀಚರ್‌ಗೆ ಹೆಚ್ಚಿನ ಮಹತ್ವ ನೀಡುತ್ತದೆ. ಈ ನಿಟ್ಟಿನಲ್ಲಿ ಮೊಬೈಲ್‌ ತಯಾರಿಕಾ ಕಂಪನಿಗಳು ಸಹ ಕ್ಯಾಮೆರಾ ಸೆನ್ಸಾರ್‌ನಲ್ಲಿ ಭಿನ್ನ ಮೆಗಾ ಪಿಕ್ಸಲ್‌ ಸೆನ್ಸಾರ್‌ ಆಯ್ಕೆಯನ್ನು ನೀಡುತ್ತಿವೆ. ಸದ್ಯ ಕ್ವಾಡ್‌ ಕ್ಯಾಮೆರಾ ಆಯ್ಕೆ ಈಗ ಹೆಚ್ಚು ಆಕರ್ಷಕ ಆಗಿ ಉಳಿದಿಲ್ಲ. ಬದಲಾಗಿ ಡ್ಯುಯಲ್‌ ಹಾಗೂ ಟ್ರಿಪಲ್‌ ಕ್ಯಾಮೆರಾ ರಚನೆಯ ಫೋನ್‌ಗಳು ಹೆಚ್ಚು ಸದ್ದು ಮಾಡುತ್ತಿವೆ.

ವರ್ಷದಲ್ಲಿಯೂ

ಪ್ರಸಕ್ತ ವರ್ಷದಲ್ಲಿಯೂ ಮೊಬೈಲ್‌ ಸಂಸ್ಥೆಗಳು ಕೆಲವು ಅತ್ಯುತ್ತಮ ಕ್ಯಾಮೆರಾ ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರನ್ನು ಸೆಳೆದಿವೆ. ಹೈ ಎಂಡ್‌ ಸೆನ್ಸಾರ್ ಸಾಮರ್ಥ್ಯ ಹೊಂದಿರುವ ಫೋನ್‌ಗಳು ದುಬಾರಿ ಪ್ರೈಸ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿವೆ. ಆದರೆ ಕ್ಯಾಮೆರಾ ಗುಣಮಟ್ಟದಲ್ಲಿ ಈ ಫೋನ್‌ಗಳು ರಾಜಿ ಇಲ್ಲ. ಹಾಗಾದರೆ ಈ ವರ್ಷದಲ್ಲಿನ ಕೆಲವು ಅತ್ಯುತ್ತಮ ಕ್ಯಾಮೆರಾ ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ಗೂಗಲ್‌ ಪಿಕ್ಸೆಲ್‌ 7 ಸ್ಮಾರ್ಟ್‌ಫೋನ್‌

ಗೂಗಲ್‌ ಪಿಕ್ಸೆಲ್‌ 7 ಸ್ಮಾರ್ಟ್‌ಫೋನ್‌

ಗೂಗಲ್‌ ಪಿಕ್ಸೆಲ್‌ 7 ಸ್ಮಾರ್ಟ್‌ಫೋನ್‌ 6.32 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದ್ದು, OLED ಡಿಸ್‌ಪ್ಲೇ ಪಡೆದಿದೆ. ಇನ್ನು ನಥಿಂಗ್ ಫೋನ್ (1) 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದ್ದು, AMOLED ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಜೊತೆಗೆ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಆದರೆ ಭಿನ್ನ ಸೆನ್ಸಾರ್ ಆಯ್ಕೆ ಹೊಂದಿವೆ. ಈ ಎರಡು ಫೋನ್‌ಗಳ ಮುಖ್ಯ ಕ್ಯಾಮೆರಾ ಸೆನ್ಸಾರ್ 50 ಮೆಗಾ ಪಿಕ್ಸಲ್‌ ಸಾಮರ್ಥ್ಯದಲ್ಲಿವೆ.

ಆಪಲ್‌ ಐಫೋನ್‌ 14 ಪ್ರೊ

ಆಪಲ್‌ ಐಫೋನ್‌ 14 ಪ್ರೊ

ಐಫೋನ್ 14 ಪ್ರೊ ಫೋನ್ 6.1 ಇಂಚಿನ ಸೂಪರ್ ರೆಟಿನಾ ಎಕ್ಸ್‌ಡಿಆರ್ ಡಿಸ್‌ಪ್ಲೇ ಹೊಂದಿದ್ದು, ಮೊದಲ ಬಾರಿಗೆ ಆಲ್ವೇಸ್‌ ಆನ್ ಡಿಸ್‌ಪ್ಲೇ ನೀಡುತ್ತದೆ. ಹಿಂಬದಿಯ ಕ್ಯಾಮೆರಾ ವ್ಯವಸ್ಥೆಯು 48 ಮೆಗಾ ಪಿಕ್ಸೆಲ್ ಕ್ವಾಡ್ ಪಿಕ್ಸೆಲ್ ಕ್ಯಾಮೆರಾವನ್ನು 65 ಪ್ರತಿಶತ ದೊಡ್ಡ ಸಂವೇದಕವನ್ನು ಹೊಂದಿದೆ. ಇದು ಆಟೋಫೋಕಸ್, ಕ್ರ್ಯಾಶ್ ಡಿಟೆಕ್ಷನ್ ಮತ್ತು Emergency SOS via satellite ಸಂಪರ್ಕವನ್ನು ಬಳಸಿಕೊಂಡು ಸುಧಾರಿತ ಮುಂಭಾಗದ ಕ್ಯಾಮೆರಾ ಹೊಂದಿದೆ.

ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌

ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌

ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌ 1,440 x 3,216 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ QHD+ ಲಿಕ್ವಿಡ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಹಾಗೆಯೇ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಜೊತೆಗೆ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೋನಿ IMX789 ಸೆನ್ಸಾರ್‌ ಇದಲ್ಲದೆ 32 ಮೆಗಾ ಪಿಕ್ಸೆಲ್ ಸೋನಿ IMX615 ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.

ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌

ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌

ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌ 6.72 ಇಂಚಿನ WQHD+ E5 ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,440 x 3,200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX707 ಸೆನ್ಸಾರ್‌ ಅನ್ನು ಹೊಂದಿದ್ದು, ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ವಿವೋ X80 ಪ್ರೊ ಸ್ಮಾರ್ಟ್‌ಫೋನ್‌

ವಿವೋ X80 ಪ್ರೊ ಸ್ಮಾರ್ಟ್‌ಫೋನ್‌

ವಿವೋ X80 ಪ್ರೊ ಸ್ಮಾರ್ಟ್‌ಫೋನ್‌ 1,440 x 3,200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.78 ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 12 ಆಧಾರಿತ OriginOS ನಲ್ಲಿ ಕಾರ್ಯನಿರ್ವಹಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ನಲ್ಲಿದೆ.

Best Mobiles in India

English summary
Few best smartphone cameras of 2022.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X