ದೀಪಾವಳಿ ಹಬ್ಬಕ್ಕೆ ವಿವೋ ಫೋನ್ ಖರೀದಿಸುವ ಪ್ಲ್ಯಾನ್ ಇದ್ರೆ, ಇಲ್ಲಿ ಗಮನಿಸಿ!
ಇನ್ನೇನು ದೀಪಾವಳಿ ಹಬ್ಬ ಬಂದೇ ಬಿಡ್ತು. ಈ ಹಬ್ಬದಲ್ಲಿ ಅನೇಕರು ಹೊಸ ಗ್ಯಾಡ್ಜೆಟ್ಸ್‌ಗಳನ್ನು ಖರೀದಿ ಮಾಡಲು ಮುಂದಾಗುತ್ತಾರೆ. ಅದರಲ್ಲಿಯೂ ಮೊಬೈಲ್ ಖರೀದಿ ಮಾಡುವವರ ಸಂಖ್ಯೆ ಕೂಡಾ ಅಧಿಕ. ಬಜೆಟ್ ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯ ಇರುವ ಫೋನ್‌ಗಳಲ್ಲಿ ವಿವೋ ಸಂಸ್ಥೆಯ ಮೊಬೈಲ್‌ಗಳು ಗ್ರಾಹಕರ ಗಮನ ಸೆಳೆದಿವೆ. ಹೀಗೆ ನೀವೇನಾದರೂ ಹೊಸ ಫೋನ್ ಖರೀದಿಸಲು ಯೋಚಿಸಿದ್ದರೆ, ಇಲ್ಲಿ ಗಮನಿಸಿ.
ಹೌದು, ವಿವೋ ಸಂಸ್ಥೆಯು ಭಿನ್ನ ಬೆಲೆಯಲ್ಲಿ ಹಲವು ಫೋನ್ ಮಾದರಿಗಳನ್ನು ಒಳಗೊಂಡಿದೆ. ಆ ಪೈಕಿ ಬಜೆಟ್ ರೇಂಜ್‌ನಲ್ಲಿ ಸಿಗುವ ಮೊಬೈಲ್‌ಗಳು ಆಕರ್ಷಕ ಫೀಚರ್ಸ್ ಮೂಲಕ ಟ್ರೆಂಡಿ ಎನಿಸಿವೆ. ಈ ಹಬ್ಬದ ಸಂದರ್ಭದಲ್ಲಿ ನೀವೇನಾದರೂ ಬಜೆಟ್ ದರದಲ್ಲಿ ಹೊಸ ವಿವೋ ಫೋನ್ ಖರೀದಿ ಮಾಡಲು ಪ್ಲ್ಯಾನ್ ಮಾಡಿದ್ರೆ, ಈ ಲೇಖನದಲ್ಲಿ ತಿಳಿಸಲಾದ ಕೆಲವು ಅತ್ಯುತ್ತಮ ಫೋನ್‌ಗಳ ಪಟ್ಟಿ ನಿಮಗೆ ಉಪಯುಕ್ತ ಎನಿಸಲಿದೆ. ಮುಂದೆ ಓದಿರಿ.

ವಿವೋ T1x ಫೋನ್
ವಿವೋ T1x ಸ್ಮಾರ್ಟ್‌ಫೋನ್ 6.58 ಇಂಚಿನ ಫುಲ್ ಹೆಚ್‌ಡಿ ಪ್ಲಸ್ LCD ಡಿಸ್‌ಪ್ಲೇಯನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ 1,080 x 2,408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಪವರ್ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದ್ದು, ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಮೊದಲ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಇದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಅನ್ನು ಪಡೆದುಕೊಂಡಿದೆ.

ವಿವೋ T2 ಪ್ರೊ 5G ಫೋನ್
ವಿವೋ ಕಂಪನಿಯ ಈ ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್‌ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಆಯ್ಕೆ ಪಡೆದುಕೊಂಡಿದೆ. ಇದರ ಜೊತೆಗೆ ಮೀಡಿಯಾಟೆಕ್ ಡೈಮೆನ್ಸಿಟಿ 7200 ಚಿಪ್‌ಸೆಟ್ ಮೂಲಕ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು ಆಂಡ್ರಾಯ್ಡ್ 13 ಅನ್ನು ಆಧರಿಸಿ ಫನ್‌ಟಚ್ ಓಎಸ್ 13 ಸಪೋರ್ಟ್ ಕೂಡಾ ಪಡೆದುಕೊಂಡಿದೆ. ಡ್ಯುಯಲ್ ಕ್ಯಾಮೆರಾ ರಚನೆ ಇದ್ದು, 4,600mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಕೂಡಾ ಪಡೆದುಕೊಂಡಿದೆ.

ವಿವೋ Y36 ಫೋನ್
ವಿವೋ Y36 ಮೊಬೈಲ್ 6.51 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದ್ದು, 720 x 1600 ಪಿಕ್ಸೆಲ್ ರೆಸಲ್ಯೂಶನ್ ಪಡೆದುಕೊಂಡಿದೆ. ಇದು 90Hz ರಿಫ್ರೆಶ್ ರೇಟ್ ಪಡೆದಿದ್ದು, ಉತ್ತಮ ppi ಪಿಕ್ಸೆಲ್ ಸಾಂದ್ರತೆ ಈ ಮೊಬೈಲ್ ಡಿಸ್‌ಪ್ಲೇನಲ್ಲಿ ಇದೆ. ಇದಕ್ಕೆ ಅನುಗುಣವಾಗಿ ಡೈಮೆನ್ಸಿಟಿ 700 ಚಿಪ್‌ಸೆಟ್ ಪ್ರೊಸೆಸರ್ ನಲ್ಲಿ ಕೆಲಸ ನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಹೊಂದಿದೆ. ಹಿಂಭಾಗದಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಇದ್ದು, 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಆಯ್ಕೆ ಪಡೆದುಕೊಂಡಿದೆ.
ವಿವೋ Y100A 5G ಫೋನ್
ವಿವೋ Y100A 5G ಮೊಬೈಲ್ 6.38 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಅಲ್ಲದೇ ಸ್ನ್ಯಾಪ್‌ಡ್ರಾಗನ್ 695 SoC ಪ್ರೊಸೆಸರ್ ಪವರ್ ಅನ್ನು ಹೊಂದಿದ್ದು, ಇದು ಆಂಡ್ರಾಯ್ಡ್ 13 ಆಧಾರಿತ ಓಎಸ್ ಇದೆ. ಜೊತೆಗೆ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದರೊಂದಿಗೆ 4,500mAh ಸಾಮರ್ಥ್ಯದ ಬ್ಯಾಟರಿ ಅನ್ನು ಹೊಂದಿದೆ.


Click it and Unblock the Notifications








