Home
ಸುದ್ದಿಜಾಲ

ಭಾರತದಲ್ಲಿ ಫೈರ್-ಬೋಲ್ಟ್ ಡೈಮಂಡ್ ಸ್ಮಾರ್ಟ್‌ವಾಚ್‌ ಲಾಂಚ್‌! ಸ್ಟೈಲಿಶ್‌ ಲುಕ್‌, ಜಬರ್ದಸ್ತ್‌ ಫೀಚರ್ಸ್‌!

ಫೈರ್‌ಬೋಲ್ಟ್‌ ಕಂಪೆನಿಯ ಸ್ಮಾರ್ಟ್‌ವಾಚ್‌ಗಳಿಗೆ ಭಾರತದಲ್ಲಿ ಭಾರಿ ಡಿಮ್ಯಾಂಡ್‌ ಇದೆ. ತನ್ನ ವಿಭಿನ್ನ ಶೈಲಿಯ ಸ್ಮಾರ್ಟ್‌ವಾಚ್‌ಗಳನ್ನು ಪರಿಚಯಿಸುತ್ತಾ ಬಂದಿರುವ ಫೈರ್‌ಬೋಲ್ಟ್‌ ಇದೀಗ ಹೊಸ ಫೈರ್-ಬೋಲ್ಟ್ ಡೈಮಂಡ್ ಸ್ಮಾರ್ಟ್‌ವಾಚ್‌ ಬಿಡುಗಡೆ ಮಾಡಿದೆ. ಇದು ಪ್ರೀಮಿಯಂ ದರ್ಜೆಯ ಮಾದರಿಯ ವಾಚ್‌ ಆಗಿದ್ದು, ಐಷಾರಾಮಿ ಎಲೈಟ್ ಆವೃತ್ತಿಯ ಸ್ಮಾರ್ಟ್‌ವಾಚ್ ಆಗಿದೆ.

ಹೌದು, ಫೈರ್-ಬೋಲ್ಟ್ (Fire-Boltt) ಡೈಮಂಡ್ ಸ್ಮಾರ್ಟ್‌ವಾಚ್‌ ಭಾರತದಲ್ಲಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ವಾಚ್‌ ಬ್ಲೂಟೂತ್‌ ಕಾಲಿಂಗ್‌ ಫೀಚರ್ಸ್‌ ಅನ್ನು ಒಳಗೊಂಡಿದೆ. ಇದಕ್ಕಾಗಿ ಇನ್‌ಬಿಲಟ್‌ ಸ್ಪೀಕರ್‌ ಮತ್ತು ಮೈಕ್ರೊಫೋನ್‌ಗಳನ್ನು ಹೊಂದಿದೆ. ಇನ್ನು ಸ್ಮಾರ್ಟ್‌ವಾಚ್‌ 4GB ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಫೈರ್-ಬೋಲ್ಟ್ ಡೈಮಂಡ್ ಸ್ಮಾರ್ಟ್‌ವಾಚ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತದಲ್ಲಿ ಫೈರ್-ಬೋಲ್ಟ್ ಡೈಮಂಡ್ ಸ್ಮಾರ್ಟ್‌ವಾಚ್‌ ಲಾಂಚ್‌! ಸ್ಟೈಲಿಶ್‌ ಲುಕ್‌!

ಫೈರ್-ಬೋಲ್ಟ್ ಡೈಮಂಡ್ ಫೀಚರ್ಸ್‌ ಹೇಗಿದೆ?
ಫೈರ್-ಬೋಲ್ಟ್ ಡೈಮಂಡ್ ಸ್ಮಾರ್ಟ್‌ವಾಚ್‌ 1.43 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ಆಲ್‌ವೇಸ್‌ ಆನ್‌ ಫೀಚರ್ಸ್‌ ಹೊಂದಿದೆ. ಇನ್ನು ಡಿಸ್‌ಪ್ಲೇ 75Hz ರಿಫ್ರೆಶ್ ರೇಟ್‌ ಬೆಂಬಲದೊಂದಿಗೆ ಬರಲಿದೆ. ಇದು 466 x 466 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ವಾಚ್‌ ಬ್ಲೂಟೂತ್‌ ಕಾಲಿಂಗ್‌ ಫೀಚರ್ಸ್‌ ಒಳಗೊಂಡಿದೆ. ಇದಕ್ಕಾಗಿ ಇನ್‌ಬಿಲ್ಟ್‌ ಸ್ಪೀಕರ್‌ ಮತ್ತು ಮೈಕ್ರೊಫೋನ್‌ ಅನ್ನು ಒಳಗೊಂಡಿದೆ.

ಇನ್ನು ಈ ಸ್ಮಾರ್ಟ್‌ವಾಚ್‌ 4GB ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ನಿಮ್ಮ ನೆಚ್ಚಿನ ಹಾಡುಗಳನ್ನು ಸ್ಟೋರೇಜ್‌ ಮಾಡಲು ಅವಕಾಶ ನೀಡಲಿದೆ. ಅಲ್ಲದೆ ಸ್ಮಾರ್ಟ್‌ವಾಚ್‌ 120ಕ್ಕೂ ಹೆಚ್ಚು ವಾಚ್ ಫೇಸ್‌ಗಳನ್ನು ಇರಿಸಲು ಸಹಾಯ ಮಾಡಲಿದೆ. ಈ ಸ್ಮಾರ್ಟ್‌ವಾಚ್‌ ಕೂಡ ಹಲವು ಆಕರ್ಷಕ ಹೆಲ್ತ್‌ ಫೀಚರ್ಸ್‌ಗಳನ್ನು ಒಳಗೊಂಡಿದೆ. ಇದರಿಲ್ಲಿ ಪ್ರಮುಖವಾಗಿ ಹೃದಯ ಬಡಿತ ಟ್ರ್ಯಾಕಿಂಗ್, SpO2 ರಕ್ತದ ಆಮ್ಲಜನಕದ ಮ್ಯಾಪಿಂಗ್, ನಿದ್ರೆಯ ಮೇಲ್ವಿಚಾರಣೆ ಮತ್ತು ಋತುಚಕ್ರದ ಟ್ರ್ಯಾಕಿಂಗ್ ಅನ್ನು ಅನುಮತಿಸಲಿದೆ.

ಭಾರತದಲ್ಲಿ ಫೈರ್-ಬೋಲ್ಟ್ ಡೈಮಂಡ್ ಸ್ಮಾರ್ಟ್‌ವಾಚ್‌ ಲಾಂಚ್‌! ಸ್ಟೈಲಿಶ್‌ ಲುಕ್‌!

ಫೈರ್‌ಬೋಲ್ಟ್‌ ಡೈಮಂಡ್ ಸ್ಮಾರ್ಟ್‌ವಾಚ್‌ನಲ್ಲಿ 300ಕ್ಕೂ ಹೆಚ್ಚು ಸ್ಪೋರ್ಟ್ಸ್ ಮೋಡ್‌ಗಳನ್ನು ಕಾಣಬಹುದು. ಇದಲ್ಲದೆ ಸ್ಮಾರ್ಟ್ ನೋಟಿಫಿಕೇಶನ್‌ ಮತ್ತು ಹೆಚ್ಚುವರಿ ರಕ್ಷಣೆಗಾಗಿ IP67 ರೇಟಿಂಗ್‌ ಹೊಂದಿದೆ. ಇದರಿಂದ ಸ್ಮಾರ್ಟ್‌ವಾಚ್‌ ನೀರು ಮತ್ತು ಧೂಳಿನಿಂದ ರಕ್ಷಣೆಯನ್ನು ಪಡೆಯಲಿದೆ. ಜೊತೆಗೆ ಸ್ಮಾರ್ಟ್‌ವಾಚ್‌ 260mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 4 ದಿನಗಳ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ನೀಡಲಿದೆ.

ಭಾರತದಲ್ಲಿ ಫೈರ್-ಬೋಲ್ಟ್ ಡೈಮಂಡ್ ಸ್ಮಾರ್ಟ್‌ವಾಚ್‌ ಲಾಂಚ್‌! ಸ್ಟೈಲಿಶ್‌ ಲುಕ್‌!

ಫೈರ್-ಬೋಲ್ಟ್ ಡೈಮಂಡ್ ಬೆಲೆ ಮತ್ತು ಲಭ್ಯತೆ
ಫೈರ್-ಬೋಲ್ಟ್ ಡೈಮಂಡ್ ಸ್ಮಾರ್ಟ್ ವಾಚ್ ಭಾರತದಲ್ಲಿ 4,999ರೂ ಬೆಲೆಯನ್ನು ಹೊಂದಿದೆ. ಇದು ರೋಸ್ ಗೋಲ್ಡ್ ಪ್ರೀಮಿಯಂ, ಗೋಲ್ಡ್ ಪ್ರೀಮಿಯಂ, ಬ್ಲಾಕ್ ಪ್ರೀಮಿಯಂ, ಬ್ಲ್ಯಾಕ್ ಬೇಸಿಕ್, ಸಿಲ್ವರ್ ಬೇಸಿಕ್ ಮತ್ತು ಸಿಲ್ವರ್ ಪ್ರೀಮಿಯಂ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ವಾಚ್‌ ಅನ್ನು ಬ್ರ್ಯಾಂಡ್‌ನ ಅಧಿಕೃತ ವೆಬ್‌ಸೈಟ್ ಮತ್ತು ಅಮೆಜಾನ್ ಇಂಡಿಯಾದಲ್ಲಿ ಖರೀದಿಸಬಹುದಾಗಿದೆ. ಸ್ಮಾರ್ಟ್‌ವಾಚ್‌ ಅಕ್ಟೋಬರ್ 25ರಿಂದ ಸೇಲ್‌ ಆಗಲಿದೆ.

ಇನ್ನು ಇತ್ತೀಚಿಗೆ ಫೈರ್-ಬೋಲ್ಟ್ ಕಂಪೆನಿ ಹೊಸ ಫೈರ್‌ಬೋಲ್ಟ್‌ ಫೀನಿಕ್ಸ್ ಅಮೋಲೆಡ್‌ ಸ್ಮಾರ್ಟ್‌ವಾಚ್ ಪರಿಚಯಿಸಿತ್ತು. ಈ ಸ್ಮಾರ್ಟ್‌ವಾಚ್‌ 1.43 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 466x466 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ವಾಚ್ ಬ್ಲೂಟೂತ್ ಕಾಲಿಂಗ್‌ ಅನ್ನು ಬೆಂಬಲಿಸಲಿದೆ. ಇದರಿಂದ ಸ್ಮಾರ್ಟ್‌ವಾಚ್‌ ಮೂಲಕವೇ ಫೋನ್‌ ಕರೆಗಳನ್ನು ಸ್ವೀಕರಿಸಬಹುದಾಗಿದೆ. ಇದಲ್ಲದೆ ಸ್ಮಾರ್ಟ್‌ವಾಚ್‌ ಬ್ಲಡ್ ಆಕ್ಸಿಜನ್ ಸ್ಯಾಚುರೇಶನ್ (SpO2) ಮಾನಿಟರಿಂಗ್, ಹೃದಯ ಬಡಿತ ಮಾನಿಟರಿಂಗ್, ಸ್ತ್ರೀ ಆರೋಗ್ಯ ಟ್ರ್ಯಾಕರ್ ಮತ್ತು ಸ್ಲೀಪ್ ಟ್ರ್ಯಾಕಿಂಗ್‌ನಂತಹ ಸ್ಮಾರ್ಟ್ ಹೆಲ್ತ್ ಮಾನಿಟರಿಂಗ್ ಫೀಚರ್ಸ್‌ಗಳನ್ನು ಒಳಗೊಂಡಿದೆ.

Best Mobiles in India

English summary
Fire-Boltt Diamond with an all-metal design launched in india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+