Home
ಸುದ್ದಿಜಾಲ

ಭಾರತದಲ್ಲಿ ಫೈರ್‌ಬೋಲ್ಟ್‌ ಗ್ಲಾಡಿಯೇಟರ್‌ ಪ್ಲಸ್‌ ಸ್ಮಾರ್ಟ್‌ವಾಚ್‌ ಲಾಂಚ್‌; ಬೆಲೆ ಎಷ್ಟು?

ಸ್ಮಾರ್ಟ್‌ವಾಚ್‌ ವಲಯದಲ್ಲಿ ಫೈರ್‌ಬೋಲ್ಟ್‌ ಕಂಪೆನಿಯ ವಾಚ್‌ಗಳಿಗೆ ಭಾರಿ ಡಿಮ್ಯಾಂಡ್‌ ಇದೆ. ಇದಕ್ಕೆ ಅನುಗುಣವಾಗಿ ಫೈರ್‌ ಬೋಲ್ಟ್‌ ಕಂಪೆನಿ ಕೂಡ ವಿವಿಧ ಮಾದರಿಯ ವಾಚ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಇದೀಗ ಫೈರ್‌ಬೋಲ್ಟ್‌ ಕಂಪೆನಿ ಹೊಸ ಫೈರ್‌ಬೋಲ್ಟ್‌ ಗ್ಲಾಡಿಯೇಟರ್‌ ಪ್ಲಸ್‌ ಸ್ಮಾರ್ಟ್‌ವಾಚ್‌ ಬಿಡುಗಡೆ ಮಾಡಿದೆ.

ಹೌದು, ಫೈರ್-ಬೋಲ್ಟ್‌ ಕಂಪೆನಿ ಭಾರತದಲ್ಲಿ ಹೊಸ ಫೈರ್‌ಬೋಲ್ಟ್‌ ಗ್ಲಾಡಿಯೇಟರ್ ಪ್ಲಸ್ ಸ್ಮಾರ್ಟ್ ವಾಚ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ವಾಚ್‌ 115 ಕ್ಕೂ ಹೆಚ್ಚು ಸ್ಪೋರ್ಟ್ಸ್‌ ಮೋಡ್‌ಗಳನ್ನು ಬೆಂಬಲಿಸಲಿದೆ. ಇದಲ್ಲದೆ ನೀರು ಮತ್ತು ಧೂಳಿನಿಂದ ರಕ್ಷಣೆ ನೀಡುವುದಕ್ಕಾಗಿ IP67 ರೇಟಿಂಗ್‌ ಅನ್ನು ಪಡೆದುಕೊಂಡಿದೆ. ಇನ್ನು ಸ್ಮಾರ್ಟ್‌ವಾಚ್‌ ಬ್ಲೂಟೂತ್ ಕಾಲಿಂಗ್‌ ಫೀಚರ್ಸ್‌ ಅನ್ನು ಕೂಡ ಬೆಂಬಲಿಸಲಿದೆ. ಇನ್ನುಳಿದಂತೆ ಸ್ಮಾರ್ಟ್‌ವಾಚ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತದಲ್ಲಿ ಫೈರ್‌ಬೋಲ್ಟ್‌ ಗ್ಲಾಡಿಯೇಟರ್‌ ಪ್ಲಸ್‌ ಸ್ಮಾರ್ಟ್‌ವಾಚ್‌ ಲಾಂಚ್‌;

ಫೈರ್‌ಬೋಲ್ಟ್‌ ಗ್ಲಾಡಿಯೇಟರ್‌ ಪ್ಲಸ್‌ ಫೀಚರ್ಸ್‌
ಫೈರ್‌ಬೋಲ್ಟ್‌ ಗ್ಲಾಡಿಯೇಟರ್‌ ಪ್ಲಸ್‌ ಸ್ಮಾರ್ಟ್‌ವಾಚ್‌ 1.96 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 410x502 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಬೆಂಬಲಿಸಲಿದೆ, ಜೊತೆಗೆ 60Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ.

ಇನ್ನು ಈ ಸ್ಮಾರ್ಟ್‌ವಾಚ್ ಬ್ಲೂಟೂತ್ ಕಾಲಿಂಗ್‌ ಫೀಚರ್ಸ್‌ ಅನ್ನು ಬೆಂಬಲಿಸಲಿದೆ. ಇದರಿಂದ ಬಳಕೆದಾರರು ಸ್ಮಾರ್ಟ್‌ವಾಚ್‌ ಮೂಲಕವೇ ಫೋನ್‌ ಕರೆಗಳನ್ನು ಸ್ವೀಕರಿಸಲು ಅನುವು ಮಾಡಿಕೊಡಲಿದೆ. ಸ್ಮಾರ್ಟ್‌ಫೋನ್‌ಗೆ ಬರುವ ಕರೆಗಳನ್ನು ಸ್ಮಾರ್ಟ್‌ವಾಚ್‌ ಮೂಲಕವೇ ನಿಯಂತ್ರಿಸಬಹುದಾಗಿದೆ. ಇದಲ್ಲದೆ ಈ ಸ್ಮಾರ್ಟ್ ವಾಚ್ ಗೂಗಲ್ ಅಸಿಸ್ಟೆಂಟ್ ಮತ್ತು ಸಿರಿಯಂತಹ AI ವಾಯ್ಸ್‌ ಅಸಿಸ್ಟೆಂಟ್‌ಗಳನ್ನು ಬೆಂಬಲಿಸಲಿದೆ.

ಫೈರ್‌ಬೋಲ್ಟ್‌ ಗ್ಲಾಡಿಯೇಟರ್‌ ಪ್ಲಸ್‌ ಸ್ಮಾರ್ಟ್‌ವಾಚ್‌ SpO2 ಮಾನಿಟರಿಂಗ್, ಹಾರ್ಟ್‌ಬೀಟ್‌ ಸೆನ್ಸಾರ್‌, ಸ್ತ್ರೀ ಆರೋಗ್ಯ ಟ್ರ್ಯಾಕರ್ ಮತ್ತು ನಿದ್ರೆಯ ಮೇಲ್ವಿಚಾರಣೆ ಮಾಡುವ ಹೆಲ್ತ್‌ ಟ್ರ್ಯಾಕರ್‌ಗಳನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ವಾಚ್‌ ಅಥ್ಲೆಟಿಕ್ಸ್, ಆಟೋ ರೇಸಿಂಗ್ ಸೇರಿದಂತೆ 115ಕ್ಕೂ ಹೆಚ್ಚು ಸ್ಪೋರ್ಟ್ಸ್‌ ಮೋಡ್‌ಗಳಿಗೆ ಬೆಂಬಲವನ್ನು ನೀಡಲಿದೆ.

ಇನ್ನು ಫೈರ್-ಬೋಲ್ಟ್ ಗ್ಲಾಡಿಯೇಟರ್ ಪ್ಲಸ್ ಸ್ಮಾರ್ಟ್‌ವಾಚ್‌ ಸಾಮಾನ್ಯ ಬಳಕೆಯಲ್ಲಿ ಏಳು ದಿನಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ. ಅಲ್ಲದೆ ಬ್ಲೂಟೂತ್ ಕಾಲಿಂಗ್‌ನೊಂದಿಗೆ ಎರಡು ದಿನಗಳವರೆಗೆ ಹಾಗೂ ಸ್ಟ್ಯಾಂಡ್‌ಬೈ ಮೋಡ್‌ನಲ್ಲಿ 20 ದಿನಗಳ ಬ್ಯಾಟರಿ ಬಾಳಿಕೆಯನ್ನು ನೀಡಲಿದೆ. ಈ ಸ್ಮಾರ್ಟ್‌ವಾಚ್ ಇನ್‌ಬಿಲ್ಟ್‌ ಗೇಮ್ಸ್‌, ರಿಮೋಟ್ ಕ್ಯಾಮೆರಾ ಕಂಟ್ರೋಲ್‌, ಅಲಾರಾಂ, ಟೈಮರ್, ಸ್ಟಾಪ್‌ವಾಚ್, ಹವಾಮಾನ ಮುನ್ಸೂಚನೆ, ಸಿಟ್ಟಿಂಗ್‌ ರಿಮೈಂಡರ್ಸ್‌ನಂತಹ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಭಾರತದಲ್ಲಿ ಫೈರ್‌ಬೋಲ್ಟ್‌ ಗ್ಲಾಡಿಯೇಟರ್‌ ಪ್ಲಸ್‌ ಸ್ಮಾರ್ಟ್‌ವಾಚ್‌ ಲಾಂಚ್‌;

ಭಾರತದಲ್ಲಿ ಫೈರ್-ಬೋಲ್ಟ್ ಗ್ಲಾಡಿಯೇಟರ್ ಪ್ಲಸ್ ಬೆಲೆ ಮತ್ತು ಲಭ್ಯತೆ
ಫೈರ್-ಬೋಲ್ಟ್ ಗ್ಲಾಡಿಯೇಟರ್ ಪ್ಲಸ್ ಸ್ಮಾರ್ಟ್ ವಾಚ್ ಭಾರತದಲ್ಲಿ 2,999ರೂ. ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ವಾಚ್‌ ಕಂಪೆನಿಯ ಅಧಿಕೃತ ಫೈರ್-ಬೋಲ್ಟ್ ವೆಬ್‌ಸೈಟ್ ಮೂಲಕ ಮಾರಾಟಕ್ಕೆ ಲಭ್ಯವಿರುತ್ತದೆ. ಇದು ನೈಲಾನ್, ಒಶಿಯನ್‌ ಸ್ಟ್ರಾಪ್‌, ಸ್ಟೇನ್‌ಲೆಸ್ ಸ್ಟೀಲ್ ಮತ್ತು ಸಿಲಿಕೋನ್ ಸ್ಟ್ರಾಪ್‌ ನಂತಹ ನಾಲ್ಕು ವಿಭಿನ್ನ ಸ್ಟ್ರಾಪ್ ರೂಪಾಂತರಗಳಲ್ಲಿ ಬರುತ್ತದೆ.

ಇದರಲ್ಲಿ ಸ್ಟ್ರಾಪ್ ಆರೆಂಜ್, ಗ್ರೀನ್ ಮತ್ತು ಸೈಲ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದ್ದರೆ, ಒಶಿಯನ್‌ ಸ್ಟ್ರಾಪ್‌ ಕಪ್ಪು, ನೀಲಿ ಮತ್ತು ಕಿತ್ತಳೆ ಬಣ್ಣದ ರೂಪಾಂತರಗಳಲ್ಲಿ ಬರುತ್ತದೆ. ಸ್ಟೇನ್‌ಲೆಸ್ ಸ್ಟೀಲ್ ಕಪ್ಪು, ರೋಸ್ ಗೋಲ್ಡ್, ಡಾರ್ಕ್ ಗ್ರೇ ಮತ್ತು ಸಿಲ್ವರ್‌ನಲ್ಲಿ ಲಭ್ಯವಿದೆ ಮತ್ತು ಸಿಲಿಕೋನ್ ಸ್ಟ್ರಾಪ್ ಕಪ್ಪು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ. ನವೀನ ಮಾದರಿಯಲ್ಲಿ ಎಂಟ್ರಿ ನೀಡಿರುವ ಈ ಸ್ಮಾರ್ಟ್‌ವಾಚ್‌ಗಳು ಮಾರುಕಟ್ಟೆಯಲ್ಲಿ ಹೊಸ ಆಯ್ಕೆಯನ್ನು ಬಯಸುವವರನ್ನು ಸೆಳೆಯುವ ಸೂಚನೆಯನ್ನು ನೀಡಿದೆ.

Best Mobiles in India

English summary
Fire-Boltt Gladiator Plus Smartwatch Launched in India; Price details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+