Just In
- 44 min ago
ಏರ್ಟೆಲ್ ಜೊತೆಗೆ ಕೈ ಮಿಲಾಯಿಸಿದ ಮೆಟ್ರೋ, ಇನ್ಮುಂದೆ ಪ್ರಯಾಣಿಕರಿಗೆ ಈ ಸೇವೆ ಇನ್ನಷ್ಟು ಸರಳ!
- 2 hrs ago
ಪೊಕೊ X5 ಪ್ರೊ ಲಾಂಚ್ಗೆ ಡೇಸ್ ಫಿಕ್ಸ್; ಭಾರೀ ಕುತೂಹಲ ಮೂಡಿಸಿದ ಫೀಚರ್ಸ್!
- 17 hrs ago
SSLC, PUC exam;ವಿದ್ಯಾರ್ಥಿಗಳೇ ಇಲ್ಲಿ ಗಮನಿಸಿ, ನೀವು Rank ಪಡೆಯಲು ಈ ಆಪ್ಗಳನ್ನು ಬಳಕೆ ಮಾಡಿ!
- 18 hrs ago
ನಿಮ್ಮ ಉಂಗುರದ ಗಾತ್ರವನ್ನು ಫೋನ್ ಮೂಲಕವೇ ಅಳತೆ ಮಾಡಿ: ಹೇಗೆ ಗೊತ್ತಾ?
Don't Miss
- Movies
ಕಿಚ್ಚನ ಸಿನಿಮಾ ಜರ್ನಿಗೆ 27 ವರ್ಷ; 4 ಚಿತ್ರರಂಗಗಳಿಗೆ ಧನ್ಯವಾದ ತಿಳಿಸಿದ ಸುದೀಪ್
- News
Bengaluru-Mysuru Expressway: ಫೆ. 15ರೊಳಗೆ ಟೋಲ್ ಸಂಗ್ರಹ ಆರಂಭ
- Automobiles
ರೀ ಎಂಟ್ರಿ ಕೊಡಲಿವೆಯೇ ಮಿಂಚಿ ಮರೆಯಾದ ಲೆಜೆಂಡರಿ ಕಾರುಗಳು?: ಹೊಸ ವಿನ್ಯಾಸ, ಎಂಜಿನ್ ಬದಲಾವಣೆ!
- Sports
ಬಾರ್ಡರ್-ಗವಾಸ್ಕರ್ ಟ್ರೋಫಿ: ಭಾರತದತ್ತ ಪ್ರಯಾಣ ಆರಂಭಿಸಿದ ಆಸಿಸ್ ಆಟಗಾರರು
- Lifestyle
February 2023 Horoscope : ಫೆಬ್ರವರಿ ತಿಂಗಳ ಭವಿಷ್ಯ: ಮೇಷ-ಮೀನದವರೆಗಿನ ರಾಶಿಗಳ ರಾಶಿಫಲ ಹೇಗಿದೆ?
- Finance
Budget 2023: ರಾಷ್ಟ್ರಪತಿ ಭಾಷಣದೊಂದಿಗೆ ಜ.31ರಿಂದ ಬಜೆಟ್ ಅಧಿವೇಶನ ಆರಂಭ, ಈ ಮಾಹಿತಿ ತಿಳಿದಿರಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಹೊಸ ವರ್ಷಕ್ಕೆ ಎಂಟ್ರಿ ಕೊಟ್ಟ ಫೈರ್‌ಬೋಲ್ಟ್ ರಾಕೆಟ್ ವಾಚ್! ಫೀಚರ್ಸ್ ಹೇಗಿದೆ?
ಹೊಸ ವರ್ಷಕ್ಕೆ ಎಂಟ್ರಿ ಕೊಡ್ತಿದ್ದ ಹಾಗೇ ಸ್ಮಾರ್ಟ್‌ವಾಚ್ ಮಾರುಕಟ್ಟೆಯಲ್ಲಿ ಫೈರ್‌ಬೋಲ್ಟ್ ಕಂಪೆನಿ ಸೌಂಡ್ ಮಾಡಲು ಶುರು ಮಾಡಿದೆ. ಹೊಸ ವರ್ಷದ ಆರಂಭದಲ್ಲಿಯೇ ಹೊಸ ಫೈರ್ ಬೋಲ್ಟ್ ರಾಕೆಟ್ ಎನ್ನುವ ವಾಚ್ ಪರಿಚಯಿಸಿದೆ. ಈ ಸ್ಮಾರ್ಟ್‌ವಾಚ್ ಮೂಲಕ ಮಾರುಕಟ್ಟೆಯಲ್ಲಿ ಫೈರ್‌ಬೋಲ್ಟ್ ಕಂಪೆನಿಯ ವಾಚ್ ಸರಣಿ ಇನ್ನಷ್ಟು ವಿಸ್ತರಣೆಯಾಗಿದೆ. ಇದು ಬಜೆಟ್ ಬೆಲೆಯ ಸ್ಮಾರ್ಟ್‌ವಾಚ್‌ಗಳ ಸಾಲಿಗೆ ಸೇರಿದ್ದು, ಅತ್ಯಾಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಹೌದು, ಫೈರ್ ಬೋಲ್ಟ್ ಕಂಪೆನಿ ಭಾರತದಲ್ಲಿ ಹೊಸದಾಗಿ ಫೈರ್ ಬೋಲ್ಟ್ ರಾಕೆಟ್ ವಾಚ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ವಾಚ್ ಹೃದಯ ಬಡಿತ ಮಾನಿಟರ್, SpO2 ಸೆನ್ಸಾರ್, ಸ್ಲಿಪ್ ಟ್ರ್ಯಾಕರ್ ನಂತಹ ಹೆಲ್ತ್ ಫೀಚರ್ಸ್‌ಗಳನ್ನು ಒಳಗೊಂಡಿದೆ. ಇನ್ನು ಸ್ಮಾರ್ಟ್‌ವಾಚ್ ಗೂಗಲ್ ಅಸಿಸ್ಟೆಂಟ್ ಮತ್ತು ಆಪಲ್‌ನ ಸಿರಿಯನ್ನು ಸಹ ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ವಾಚ್ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ? ಇದರ ಬೆಲೆ ಎಷ್ಟಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಫೈರ್ ಬೋಲ್ಟ್ ರಾಕೆಟ್ ವಾಚ್ 1.3 ಇಂಚಿನ HD ಡಿಸ್‌ಪ್ಲೇಯನ್ನು ಹೊಂದಿದೆ. ಇದು ರೌಂಡ್ ಡಯಲ್ ಅನ್ನು ಒಳಗೊಂಡಿದೆ. ಇನ್ನು ಸ್ಮಾರ್ಟ್‌ವಾಚ್ ಬಲಭಾಗದಲ್ಲಿ ಫಿಸಿಕಲ್ ಬಟನ್ ಹೊಂದಿದ್ದು, IP67-ಪ್ರಮಾಣೀಕೃತ ವಾಟರ್ ರೆಸಿಸ್ಟೆನ್ಸಿಯನ್ನು ಪಡೆದಿದೆ. ಇದು ವಿವಿಧ ಮಾದರಿಯ ಸ್ಮಾರ್ಟ್‌ವಾಚ್ ಫೇಸ್‌ಗಳನ್ನು ಒಳಗೊಂಡಿದೆ. ಫೈರ್ ಬೋಲ್ಟ್ ರಾಕೆಟ್ ವಾಚ್ ಆರೋಗ್ಯದ ದೃಷ್ಟಿಯಿಂದ, ಹೃದಯ ಬಡಿತ ಮಾನಿಟರ್, SpO2 ಸೆನ್ಸಾರ್, ಸ್ಲಿಪಿಂಗ್ ಟ್ರ್ಯಾಕರ್ ಮತ್ತು ಸ್ತ್ರೀ ಸೈಕಲ್ ಮಾನಿಟರ್ ಅನ್ನು ಹೊಂದಿದೆ.

ಇದಲ್ಲದೆ ಸ್ಮಾರ್ಟ್‌ವಾಚ್ 100ಕ್ಕೂ ಹೆಚ್ಚು ವಿವಿಧ ಸ್ಪೋರ್ಟ್ಸ್ ಮೋಡ್‌ಗಳನ್ನು ಟ್ರ್ಯಾಕ್ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಸ್ಮಾರ್ಟ್‌ವಾಚ್ ಮೂಲಕ ಸ್ಟೆಪ್ಸ್, ಡಿಸ್ಟೆನ್ಸ್, ಕ್ಯಾಲೂರಿ ಬರ್ನಿಂಗ್ಸ್ ಅನ್ನು ಅಳೆಯುವುದಕ್ಕೆ ಅವಕಾಶವನ್ನು ನೀಡಲಿದೆ. ಇದರೊಂದಿಗೆ ಈ ಸ್ಮಾರ್ಟ್‌ವಾಚ್ ಇನ್‌ಬಿಲ್ಟ್ ಸ್ಪೀಕರ್ ಮತ್ತು ಮೈಕ್ರೊಫೋನ್ ಅನ್ನು ಹೊಂದಿದೆ. ಈ ವಾಚ್ ಬ್ಲೂಟೂತ್ ಕಾಲಿಂಗ್ ಫೀಚರ್ಸ್ ಅನ್ನು ಹೊಂದಿದ್ದು, ಬಳಕೆದಾರರು ಬ್ಲೂಟೂತ್ ಸಂಪರ್ಕದ ಮೂಲಕ ಫೋನ್ ಕರೆಗಳನ್ನು ಮಾಡಬಹುದು ಮತ್ತು ಸ್ವೀಕರಿಸಬಹುದು.

ಇನ್ನು ಸ್ಮಾರ್ಟ್ ವಾಚ್ ಗೂಗಲ್ ಅಸಿಸ್ಟೆಂಟ್ ಮತ್ತು ಸಿರಿಯನ್ನು ಸಹ ಒಳಗೊಂಡಿದೆ. ಇದು ನೋಟಿಫಿಕೇಶನ್ ಆಲರ್ಟ್‌ಗಳನ್ನು ಸಹ ನೀಡಲಿದೆ. ಈ ಸ್ಮಾರ್ಟ್‌ವಾಚ್ ಮಲ್ಟಿ ಫಂಕ್ಷನ್ ಫೀಚರ್ಸ್‌ಗಳನ್ನು ಹೊಂದಿದ್ದು, ಬಳಕೆದಾರರ ಗಮನಸೆಳೆದಿದೆ. ಇದು ನಾಯ್ಸ್, ಬೋಟ್, ಅಮಾಜ್‌ಫಿಟ್, ರಿಯಲ್‌ಮಿ ಮತ್ತು ಬಜೆಟ್ ಬೆಲೆಯಲ್ಲಿ ಬರುವ ಸ್ಮಾರ್ಟ್‌ವಾಚ್ ಬ್ರ್ಯಾಂಡ್‌ಗಳಿಗೆ ಪೈಪೋಟಿ ನೀಡಲಿದೆ.

ಪ್ರಸ್ತುತ ಭಾರತದಲ್ಲಿ ಲಾಂಚ್ ಆಗಿರುವ ಫೈರ್ ಬೋಲ್ಟ್ ರಾಕೆಟ್ 2,499 ರೂ. ಬೆಲೆಯನ್ನು ಹೊಂದಿದೆ. ಇದು ಕಪ್ಪು, ಸಿಲ್ವರ್ ಗ್ರೇ, ಷಾಂಪೇನ್ ಗೋಲ್ಡ್ ಮತ್ತು ಗೋಲ್ಡ್ ಪಿಂಕ್ ಬಣ್ಣದ ಆಯ್ಕೆಗಳಲ್ಲಿ ಬರಲಿದೆ. ಇದನ್ನು ಫೈರ್‌ಬೋಲ್ಟ್ ಬ್ರ್ಯಾಂಡ್‌ನ ಅಧಿಕೃತ ವೆಬ್‌ಸೈಟ್‌ನಿಂದ ಖರೀದಿಸಬಹುದು.

ಇದಲ್ಲದೆ ಫೈರ್‌ಬೋಲ್ಟ್ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ಹೊಸ ಫೈರ್ ಬೋಲ್ಟ್ ನಿಂಜಾ ಕಾಲ್ ಪ್ರೊ ಪ್ಲಸ್ ಸ್ಮಾರ್ಟ್‌ವಾಚ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ವಾಚ್ 1.83-ಇಂಚಿನ HD ಡಿಸ್‌ಪ್ಲೇಯನ್ನು ಹೊಂದಿದೆ. ಇದು 240 x 284 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 100ಕ್ಕೂ ಹೆಚ್ಚು ಸ್ಪೋರ್ಟ್ಸ್ ಮೋಡ್ ಮತ್ತು ಹೃದಯ ಬಡಿತ ಮತ್ತು SpO2 ಸೆನ್ಸಾರ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ವಾಚ್ AI ವಾಯ್ಸ್ ಅಸಿಸ್ಟೆಂಟ್ ಇನ್‌ಬಿಲ್ಟ್ ಗೇಮ್ಸ್ ಮತ್ತು ಸ್ಮಾರ್ಟ್ ನೋಟಿಫಿಕೇಶನ್ ಅನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ವಾಚ್ 6 ದಿನಗಳ ಬ್ಯಾಟರಿ ಅವಧಿಯನ್ನು ನೀಡಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470